#Cheer4Bharat; ಕಂಚು ಗೆದ್ದ ಮನು ಭಾಕರ್ ಗೆ ರಾಷ್ಟ್ರಪತಿ, ಪ್ರಧಾನಿ ಅಭಿನಂದನೆ
ಮಹಿಳೆಯರಿಗೆ ಸ್ಫೂರ್ತಿ ನೀಡಲಿದೆ....
Team Udayavani, Jul 28, 2024, 5:36 PM IST
ಹೊಸದಿಲ್ಲಿ : 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ಪೋಸ್ಟ್ ಮಾಡಿ ಅಭಿನಂದನೆ ಸಲ್ಲಿಸಿದ್ದು ” ಕಂಚಿನ ಪದಕದೊಂದಿಗೆ ಭಾರತದ ಪದಕ ಪಟ್ಟಿಯಲ್ಲಿ ಖಾತೆ ತೆರೆದಿದ್ದಕ್ಕಾಗಿ ಮನು ಭಾಕರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಶೂಟಿಂಗ್ ಸ್ಪರ್ಧೆಯಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ. ಮನು ಭಾಕರ್ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಆಕೆಯ ಸಾಧನೆಯು ಅನೇಕ ಕ್ರೀಡಾಪಟುಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿ ನೀಡಲಿದೆ. ಭವಿಷ್ಯದಲ್ಲಿ ಅವರು ಸಾಧನೆಯ ಹೆಚ್ಚಿನ ಎತ್ತರವನ್ನು ತಲುಪಬೇಕೆಂದು ನಾನು ಬಯಸುತ್ತೇನೆ” ಎಂದು ಶುಭ ಕೋರಿದ್ದಾರೆ.
Heartiest congratulations to Manu Bhaker for opening India’s medal tally with her bronze medal in the 10 metre air pistol shooting event at the Paris Olympics. She is the first Indian woman to win an Olympic medal in a shooting competition. India is proud of Manu Bhaker. Her…
— President of India (@rashtrapatibhvn) July 28, 2024
ಪ್ರಧಾನಿ ಮೋದಿ ಅವರು ಎಕ್ಸ್ ಪೋಸ್ಟ್ ಮಾಡಿದ್ದು ” ಐತಿಹಾಸಿಕ ಪದಕ! ಭೇಷ್. 2024ರ ಪ್ಯಾರಿಸ್ ಒಲಿಂಪಿಕ್ಸ್ ಭಾರತದ ಮೊದಲ ಪದಕ, ಕಂಚಿನ ಪದಕ ಪದಕ ಗೆದ್ದುದಕ್ಕಾಗಿ ಅಭಿನಂದನೆಗಳು. ಈ ಯಶಸೈನಾ ಮೂಲಕ ಭಾರತಕ್ಕಾಗಿ ಶೂಟಿಂಗ್‌ನಲ್ಲಿ ಪದಕ ಗೆದ್ದ 1 ನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ನಂಬಲಾಗದ ಸಾಧನೆ! #Cheer4Bharat ” ಎಂದು ಅಭಿನಂದನೆ ಸಲ್ಲಿಸಿದ್ದಾರೆ.
ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಎಕ್ಸ್ ಪೋಸ್ಟ್ ಮಾಡಿ ” ಹೆಮ್ಮೆಯ ಕ್ಷಣ, ಮಹಿಳೆಯರ 10m ಏರ್ ಪಿಸ್ತೂಲ್‌ನಲ್ಲಿ ಮೊದಲ ಪದಕವನ್ನು ಗೆದ್ದಿರುವುದಕ್ಕೆ ಮನು ಭಾಕರ್ ಅವರಿಗೆ ಅಭಿನಂದನೆಗಳು, ನೀವು ನಿಮ್ಮ ಕೌಶಲ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದ್ದೀರಿ, ನೀವು ಭಾರತಕ್ಕಾಗಿ ಒಲಿಂಪಿಕ್ ಪದಕವನ್ನು ಗೆದ್ದ 1 ನೇ ಮಹಿಳಾ ಶೂಟರ್ ಆಗಿದ್ದೀರಿ!” ಎಂದು ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.