ಬ್ಯಾಡ್ಮಿಂಟನ್‌ ಸಿಂಗಲ್ಸ್‌: ಸಿಂಧು-ಸೈನಾ ಚಿನ್ನದ ಹೋರಾಟ

Team Udayavani, Apr 15, 2018, 6:10 AM IST

Sindhu-Saina-Gold-Fight.jpg

ಗೋಲ್ಡ್‌ಕೋಸ್ಟ್‌: ಭಾರತದ ಬ್ಯಾಡ್ಮಿಂಟನ್‌ ರಾಣಿಯರಾದ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್‌ ಗೋಲ್ಡ್‌ಕೋಸ್ಟ್‌ ಗೇಮ್ಸ್‌ನ ಬಹು-ನಿರೀಕ್ಷಿತ ಬ್ಯಾಡ್ಮಿಂಟನ್‌ ವನಿತಾ ಸಿಂಗಲ್ಸ್‌ ಫೈನಲ್‌ನಲ್ಲಿ ಪರಸ್ಪರ ಎದುರಾಗಲಿದ್ದಾರೆ. ಇದರೊಂದಿಗೆ ಭಾರತಕ್ಕೆ 2 ಪದಕಗಳು ಖಾತ್ರಿಯಾಗಿವೆ. ಚಿನ್ನ ಯಾರಿಗೆ, ಬೆಳ್ಳಿ ಯಾರಿಗೆ ಎಂಬುದಷ್ಟೇ ರವಿವಾರದ ಕುತೂಹಲ. ಈ ನಡುವೆ ಕೆ. ಶ್ರೀಕಾಂತ್‌ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ ಸೆಣಸಲಿದ್ದಾರೆ.

ಶನಿವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಸಿಂಧು ಹಾಲಿ ಚಾಂಪಿಯನ್‌ ಕೆನಡಾದ ಮಿಚೆಲ್‌ ಲೀ ವಿರುದ್ಧ, ಸೈನಾ ಕ್ರಿಸ್ಟಿ ಗಿಲ್ಮೋರ್‌ ವಿರುದ್ಧ ಜಯ ಸಾಧಿಸಿದರು.

ಸಿಂಧು ಕೆನಡಾ ಆಟಗಾರ್ತಿ ಮಿಚೆಲ್‌ ಲೀಯನ್ನು 21-18, 21-8 ಅಂತರದಿಂದ ಸೋಲಿಸಿದರು. ಇಬ್ಬರ ನಡುವೆ 26 ನಿಮಿಷಗಳ ಸ್ಪರ್ಧೆ ನಡೆಯಿತು. ಇನ್ನೊಂದು ಪಂದ್ಯದಲ್ಲಿ ಮಾಜಿ ವಿಶ್ವ ನಂ. 1 ಆಟಗಾರ್ತಿ ಸೈನಾ, ಸ್ಕಾಟ್ಲೆಂಡ್‌ನ‌ ಗಿಲ್ಮೋರ್‌ ಅವರನ್ನು 21-14, 18-21, 21-17 ಅಂತರದಿಂದ ಸೋಲಿಸಿದರು.

ಇತ್ತೀಚೆಗಷ್ಟೇ ವಿಶ್ವ ನಂ. 1 ಸ್ಥಾನಕ್ಕೇರಿರುವ ಭಾರತದ ಸ್ಟಾರ್‌ ಆಟಗಾರ ಕಿಡಂಬಿ ಶ್ರೀಕಾಂತ್‌ ಕೂಡ ಫೈನಲ್‌ ಪ್ರವೇಶಿದ್ದು, ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಲಭಿಸುವುದು ಖಾತ್ರಿಯಾಗಿದೆ. ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವ ಅಗ್ರ ಶ್ರೇಯಾಂಕಿತ ಶ್ರೀಕಾಂತ್‌ ಇಂಗ್ಲೆಂಡ್‌ನ‌ ರಾಜೀವ್‌ ಔಸೆಫ್ ವಿರುದ್ಧ 21-10, 21-17 ಅಂತರದ ಗೆಲುವು ದಾಖಲಿಸಿದರು. 2010ರ ದಿಲ್ಲಿ ಗೇಮ್ಸ್‌ ಬೆಳ್ಳಿ ವಿಜೇತ ಆಟಗಾರನನ್ನು ಸೋಲಿಸಲು ಶ್ರೀಕಾಂತ್‌ಗೆ ಸುಮಾರು ಅರ್ಧ ಗಂಟೆ ಬೇಕಾಯಿತು.

ಇದಕ್ಕೂ ಮೊದಲಿನ ಪಂದ್ಯದಲ್ಲಿ ಮತ್ತೂಬ್ಬ ಭಾರತೀಯ ಉದಯೋನ್ಮುಖ ಆಟಗಾರ ಎಚ್‌.ಎಸ್‌. ಪ್ರಣಯ್‌ ಅವರು ಔಸೆಫ್ ವಿರುದ್ಧ 21-17, 23-25 ಸೋಲು ಕಂಡಿದ್ದರಿಂದ ಭಾರತಕ್ಕೆ ಲಭಿಸಲಿದ್ದ ಬೆಳ್ಳಿ ಕೈ ತಪ್ಪಿತು.

ಪುರುಷರ ಡಬಲ್ಸ್‌ನಲ್ಲಿ ಭಾರತದ ಸಾತ್ವಿಕ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಚಿನ್ನ ಗೆಲ್ಲಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಸೆಮಿಫೈನಲ್‌ನಲ್ಲಿ ಭಾರತೀಯ ಜೋಡಿ ಶ್ರೀಲಂಕಾದ ಸಚಿನ್‌ ಡಯಾಸ್‌-ಭುವನೇಕ ಗುಣತಿಲಕ ವಿರುದ್ಧ 21-18, 21-10 ಗೆಲುವು ದಾಖಲಿಸಿ ಫೈನಲ್‌ ಪ್ರವೇಶಿಸಿತು.

ವನಿತಾ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪ್ಪ-ಎನ್‌. ಸಿಕ್ಕಿ ರೆಡ್ಡಿ ಜೋಡಿ ಸ್ಥಳೀಯ ಸೇತ್ಯಾನಾ ಮಪಾಸಾ-ಗ್ರೋನಿಯಾ ಸೊಮೆರ್ವಿಲ್ಲೆ ವಿರುದ್ಧ 21-19, 21-19 ಅಂತರದಲ್ಲಿ  ಸೋಲುವ ಮೂಲಕ ಕಂಚಿಗೆ ತೃಪ್ತಿ ಪಟ್ಟುಕೊಂಡಿದೆ.

ಟಾಪ್ ನ್ಯೂಸ್

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.