ಜೆಡಿಎಸ್ನಲ್ಲಿ ಖಾತೆಗಳಿಗೆ ಪೈಪೋಟಿ
Team Udayavani, Jun 2, 2018, 6:00 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಜೆಡಿಎಸ್ನಲ್ಲಿ ಇದೀಗ ಆ ಖಾತೆಗಳಿಗಾಗಿ ಆಕಾಂಕ್ಷಿಗಳ ಮಧ್ಯೆ ತೀವ್ರ ಪೈಪೋಟಿ ಕಾಣಿಸಿಕೊಂಡಿದೆ. ಅದರಲ್ಲೂ ಇಂಧನ, ಲೋಕೋಪಯೋಗಿ, ಅಬಕಾರಿ, ಪ್ರಾಥಮಿಕ ಶಿಕ್ಷಣ ಖಾತೆಗಳಿಗಾಗಿ ತೀವ್ರ ಲಾಬಿ ಆರಂಭವಾಗಿದೆ.
ಸಿಕ್ಕಿರುವ ಹಣಕಾಸು ಮತ್ತು ಗುಪ್ತಚರ ಇಲಾಖೆ ಜವಾಬ್ದಾರಿಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಟ್ಟುಕೊಳ್ಳುತ್ತಾರೆ. ಲೋಕೋಪಯೋಗಿ ಇಲಾಖೆ ಮೇಲೆ ಕಣ್ಣಿಟ್ಟಿದ್ದ ಎಚ್.ಡಿ. ರೇವಣ್ಣ ಇದೀಗ ಇಂಧನ ಖಾತೆ ಪಕ್ಷಕ್ಕೆ ಸಿಕ್ಕಿರುವುದರಿಂದ ಆ ಖಾತೆಯನ್ನು ಆರಿಸಿಕೊಳ್ಳುವುದು ಖಚಿತ. ಹೀಗಾಗಿ, ಲೋಕೋಪಯೋಗಿ ಇಲಾಖೆಗಾಗಿ ಆಕಾಂಕ್ಷಿಗಳ ಪೈಪೋಟಿ ಶುರುವಾಗಿದೆ. ಅದೇ ರೀತಿ ಅಬಕಾರಿ, ಸಾರಿಗೆ ಖಾತೆಗಳಿಗಾಗಿಯೂ ಹಲವರು ಪೈಪೋಟಿಗೆ ಬಿದ್ದಿದ್ದಾರೆ. ಬಸವರಾಜ ಹೊರಟ್ಟಿ, ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶಂಪೂರ್, ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸತ್ಯನಾರಾಯಣ ಈ ಖಾತೆಗಳ ಮೇಲೆ ಕಣ್ಣಿಟ್ಟಿದ್ದಾರೆ.
ಇನ್ನು ಪಕ್ಷಕ್ಕೆ ಲಭ್ಯವಾಗಿರುವ ಪ್ರಾಥಮಿಕ ಶಿಕ್ಷಣ ಖಾತೆ ಎಚ್.ವಿಶ್ವನಾಥ್ ಪಾಲಾಗುವುದು ಬಹುತೇಕ ಖಚಿತ. ಉಳಿದಂತೆ ಸಹಕಾರ, ಪ್ರವಾಸೋದ್ಯಮ, ಉನ್ನತ ಶಿಕ್ಷಣ, ಪಶು ಸಂಗೋಪನೆ, ತೋಟಗಾರಿಕೆ ಮತ್ತು ರೇಷ್ಮೆ, ಸಣ್ಣ ಕೈಗಾರಿಕೆ, ಸಣ್ಣ ನೀರಾವರಿ, ವಾರ್ತಾ ಇಲಾಖೆ,
ಯೋಜನೆ ಮತ್ತು ಸಾಂಖೀಕ ಇಲಾಖೆಗಳು ಪಕ್ಷಕ್ಕೆ ಲಭ್ಯವಾಗಿದ್ದು, ಇವುಗಳಿಗೆ ಆಕಾಂಕ್ಷಿ ಪಟ್ಟಿಯಲ್ಲಿರುವ ಬಿ.ಎಂ.ಫಾರೂಕ್, ಎ.ಟಿ.ರಾಮಸ್ವಾಮಿ, ಎಚ್.ಕೆ. ಕುಮಾರಸ್ವಾಮಿ, ಶಿವಲಿಂಗೇಗೌಡ, ಸಾ.ರಾ. ಮಹೇಶ್, ಬಿಎಸ್ಪಿಯ ಮಹೇಶ್, ಕೃಷ್ಣಾರೆಡ್ಡಿ ಪೈಕಿ ಯಾರನ್ನು ನೇಮಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.