ಕೇನ್ ರಿಚರ್ಡ್ ಸನ್‌ಗೆ ಕೊರೊನಾ ಇಲ್ಲ; ನಿಗಾದಲ್ಲಿ ಲ್ಯೂಕಿ ಫರ್ಗುಸನ್
Team Udayavani, Mar 14, 2020, 9:20 AM IST
ಮೆಲ್ಬೋರ್ನ್: ಆಸ್ಟ್ರೇಲಿಯದ ಪೇಸ್ ಬೌಲರ್ ಕೇನ್ ರಿಚರ್ಡ್‌ಸನ್ ಕೊರೊನಾ ಭೀತಿಯಿಂದ ಪಾರಾಗಿದ್ದಾರೆ. ನ್ಯೂಜಿಲೆಂಡ್ ಎದುರಿನ ಶುಕ್ರವಾರದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿತ್ತು.
ಕೊರೊನಾ ಅಂಟಿಕೊಂಡಿರುವ ಸಾಧ್ಯತೆ ಬಗ್ಗೆಯೂ ಸುದ್ದಿ ಹಬ್ಬಿತ್ತು. ಆದರೆ ಅಂಥ ಯಾವುದೇ ಭೀತಿ ಇಲ್ಲ ಎಂದು ವರದಿಯಾಗಿದೆ. ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ವೈದ್ಯಕೀಯ ವರದಿ ಬಂದ ಹಿನ್ನೆಲೆಯಲ್ಲಿ ಕೇನ್ ರಿಚರ್ಡ್‌ಸನ್ ರಾತ್ರಿ 8 ಗಂಟೆ ವೇಳೆ ಸಿಡ್ನಿ ಕ್ರಿಕೆಟ್ ಅಂಗಳದತ್ತ ತೆರಳಿದರು. ಐಪಿಎಲ್‌ನಲ್ಲಿ ರಿಚರ್ಡ್‌ಸನ್ ಆರ್‌ಸಿಬಿ ತಂಡದ ಸದಸ್ಯನಾಗಿದ್ದಾರೆ.
ಮತ್ತೊಂದೆಡೆ ಕಿವೀಸ್ ಆಲ್ ರೌಂಡರ್ ಲ್ಯೂಕಿ ಫರ್ಗುಸನ್ ಕೂಡಾ ಗಂಟಲು ನೋವಿನಿಂದ ಬಳಲುತ್ತಿದ್ದು, ಕೊರೊನಾ ಸೋಂಕು ಶಂಕೆ ವ್ಯಕ್ತವಾಗಿದೆ. ಫರ್ಗುಸನ್ ಅವರನ್ನು 24 ಗಂಟೆಗಳ ಕಾಲ ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕತ್ಸೆ ನೀಡಲಾಗುತ್ತಿದೆ. ಲ್ಯೂಕಿ ಫರ್ಗುಸನ್ ಆಸೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.