Morne Morkel: ಟೀಮ್ ಇಂಡಿಯಾದ ನೂತನ ಬೌಲಿಂಗ್ ಕೋಚ್ ಆಗಿ ಮಾರ್ನೆ ಮಾರ್ಕೆಲ್ ನೇಮಕ
Team Udayavani, Aug 14, 2024, 4:43 PM IST
ನವದೆಹಲಿ: ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಮಾರ್ನೆ ಮಾರ್ಕೆಲ್(Morne Morkel) ಟೀಮ್ ಇಂಡಿಯಾದ (Team India) ನೂತನ ಬೌಲಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ ಎಂದು ʼಪಿಟಿಐʼ ವರದಿ ಮಾಡಿದೆ.
ಗೌತಮ್ ಗಂಭೀರ್ (Gautam Gambhir) ಟೀಮ್ ಇಂಡಿಯಾದ ಹಿರಿಯರ ತಂಡದ ಮುಖ್ಯ ಕೋಚ್ ಆದ ಬಳಿಕ, ಸಹಾಯಕ ಕೋಚ್‌ಗಳಾಗಿ ಅಭಿಷೇಕ್ ನಾಯರ್ ಮತ್ತು ರಯಾನ್ ಟೆನ್ ಡೆಷ್ಕಾಟೆ ಇದ್ದರು. ಇಬ್ಬರು ಶ್ರೀಲಂಕಾ ಪ್ರವಾಸದಲ್ಲಿದ್ದರು.
ಹಂಗಾಮಿ ಬೌಲಿಂಗ್ ಕೋಚ್ ಆಗಿ ಸಾಯಿರಾಜ್ ಬಹುತುಳೆ ನೇಮಕವಾಗಿದ್ದರು. ಇದೀಗ ನೂತನ ಬೌಲಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಮಾರ್ನೆ ಮಾರ್ಕೆಲ್ ನೇಮಕವಾಗಿದ್ದಾರೆ.
ಈ ಹಿಂದೆ ಮಾರ್ಕೆಲ್ ಪಾಕಿಸ್ತಾನ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ನೇಮಕವಾಗಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಆಡಿದ ಸಾಕಷ್ಟು ಅನುಭವ ಅವರಿಗಿದೆ.
ಮಾರ್ಕೆಲ್ ಗೌತಮ್ ಗಂಭೀರ್ ಜತೆ ಐಪಿಎಲ್‌ನಲ್ಲಿ ಕೆಕೆಆರ್ ತಂಡದ ಪರ ಮೂರು ಸೀಸನ್ ಗಳನ್ನು ಆಡಿದ್ದಾರೆ. ಇದಲ್ಲದೆ ಲಖನೌ ಸೂಪರ್ ಜಯಂಟ್ಸ್ ತಂಡದಲ್ಲಿಯೂ ಅವರು ಬೌಲಿಂಗ್ ಕೋಚ್ ಆಗಿ ಗಂಭೀರ್ ಜೊತೆ ಕಾರ್ಯನಿರ್ವಹಿಸಿದ್ದರು.
ಸೆ.1 ರಿಂದ ಭಾರತ ತಂಡದ ಜತೆ ಮಾರ್ಕೆಲ್ ಸೇರಿಕೊಳ್ಳಲಿದ್ದು, ಸೆ.19ರಿಂದ ಬಾಂಗ್ಲಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ಅವರು ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಆಗಿ ಮೈದಾನಕ್ಕೆ ಇಳಿಯಲಿದ್ದಾರೆ.
“ಮಾರ್ಕೆಲ್ ಅವರನ್ನು ಟೀಮ್ ಇಂಡಿಯಾದ ಪುರುಷರ ಸೀನಿಯರ್ ತಂಡಕ್ಕೆ ಬೌಲಿಂಗ್ ಕೋಚ್ ಆಗಿ ನೇಮಿಸಲಾಗಿದೆ” ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪಿಟಿಐಗೆ ಖಚಿತಪಡಿಸಿದ್ದಾರೆ.
ದಕ್ಷಿಣ ಆಫ್ರಿಕಾದ ಪರವಾಗಿ ಮಾರ್ಕೆಲ್ 86 ಟೆಸ್ಟ್ ಪಂದ್ಯಗಳು, 117 ಏಕದಿನ ಪಂದ್ಯಗಳು ಹಾಗೂ 44 ಟಿ20ಐ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 309 ಟೆಸ್ಟ್ ವಿಕೆಟ್‌ಗಳು, 188 ಏಕದಿನ ವಿಕೆಟ್‌ಗಳು ಹಾಗೂ 47 ಟಿ20ಐ ವಿಕೆಟ್‌ಗಳನ್ನು ಅವರು ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
BPL;ಅಂತಿಮ ಓವರಿನಲ್ಲಿ 30 ರನ್ ಸಿಡಿಸಿದ ನುರುಲ್
MUST WATCH
ಹೊಸ ಸೇರ್ಪಡೆ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.