ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ತಂಡ ಪ್ರಕಟ ಟೆಂಬ ಬವುಮ ನಾಯಕ
Team Udayavani, Sep 6, 2022, 11:03 PM IST
ಜೊಹಾನ್ಸ್‌ಬರ್ಗ್: ಮೊಣಕೈ ಗಾಯದಿಂದ ಪೂರ್ಣವಾಗಿ ಚೇತರಿಸಿಕೊಂಡಿರುವ ಟೆಂಬ ಬವುಮ ಅವರು ಆಸ್ಟ್ರೇಲಿಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ದಕ್ಷಿಣ ಆಫ್ರಿಕಾ ತಂಡದ ನಾಯಕರಾಗಿ ಇರಲಿದ್ದಾರೆ.
15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು ಮೂವರು ಮೀಸಲು ಆಟಗಾರರಿದ್ದಾರೆ ಎಂದು ಕ್ರಿಕೆಟ್ ಸೌತ್ ಆಫ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.ಗಾಯಗೊಂಡಿರುವ ರಾಸೀ ವಾನ್ ಡೆರ್ ಡ್ಯುಸೆನ್ ಅವರನ್ನು ಕೈಬಿಡಲಾಗಿದೆ.
ಕಳೆದ ವಾರ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದ ವೇಳೆ ಅವರ ಕೈಯ ತೋರು ಬೆರಳಿಗೆ ಗಾಯವಾಗಿತ್ತು. ಗಾಯಕ್ಕೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂಬ ಕಾರಣಕ್ಕೆ ಅವರನ್ನು ಹೊರಗಿಡಲಾಗಿದೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ 22ರ ಹರೆಯದ ಟ್ರಿಸ್ಟನ್ ಸ್ಟಬ್ಸ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಆದರೆ ಈ ಬಾರಿಯ ಐಪಿಎಲ್‌ಗಾಗಿ ತಂಡದ ಜತೆ ಒಪ್ಪಂದಕ್ಕೆ ಸಹಿ ಹಾಕಿದ್ದ ಡೆವಾಲ್ಡ್ ಬ್ರೆವಿಸ್ ಅವರನ್ನು ಕೈಬಿಡಲಾಗಿದೆ.
ಟಿ20 ವಿಶ್ವಕಪ್ ಮೊದಲು ದಕ್ಷಿಣ ಆಫ್ರಿಕಾವು ಈ ತಿಂಗಳ ಅಂತ್ಯದಲ್ಲಿ ಭಾರತ ವಿರುದ್ಧ ಅಭ್ಯಾಸ ಟಿ20 ಸರಣಿಯೊಂದರಲ್ಲಿ ಆಡಲಿದೆ. ಆಬಲಿಕ ಅಕ್ಟೋಬರ್ ಆರಂಭದಲ್ಲಿ ಮೂರು ಏಕದಿನ ಪಂದ್ಯಗಳಲ್ಲಿ ಆಡಲಿದೆ.
ಟಿ20 ವಿಶ್ವಕಪ್‌ಗೆ ತಂಡ:
ಟೆಂಬ ಬವುಮ (ನಾಯಕ), ಕ್ವಿಂಟನ್ ಡಿ ಕಾಕ್, ರೀಜ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ ಮಹಾರಾಜ್, ಐಡೆನ್ ಮಾರ್ಕ್‌ರಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆ್ಯನ್ರಿಚ್ ನೋರ್ಜೆ, ವೇನ್ ಪಾರ್ನೆಲ್, ಡ್ವೇನ್ ಪ್ರಿಟೋರಿಯಸ್, ಕಾಗಿಸೊ ರಬಾಡ, ರಿಲೀ ರೋಸೊ, ಟಬ್ರೈಸ್ , ಟ್ರಿಸ್ಟನ್ ಸ್ಟಬ್ಸ್
ಮೀಸಲು ಆಟಗಾರರು: ಫೋರ್ಟಿನ್, ಮಾರ್ಕೊ ಜಾನ್ಸೆನ್, ಆ್ಯಂಡಿಲೆ ಪೆಹ್ಲುಕ್ವಾಯೊ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka sports meet: ಈಜು ಸ್ಪರ್ಧೆ ಆರಂಭ; ದಕ್ಷಿಣ ಕನ್ನಡ ಮೇಲುಗೈ
Under-19 Women’s T20 World Cup: ವೈಷ್ಣವಿ ಹ್ಯಾಟ್ರಿಕ್, 5 ರನ್ನಿಗೆ 5 ವಿಕೆಟ್ ದಾಖಲೆ
Australia Open: 50ನೇ ಬಾರಿಗೆ ಗ್ರ್ಯಾನ್‌ಸ್ಲಾಮ್ ಸೆಮೀಸ್‌ಗೇರಿದ ಜೋಕೋ
Women’s ODI rankings: ಅಗ್ರಸ್ಥಾನಕ್ಕೆ ಮಂಧನಾ ಸನಿಹ
Rinku Singh: ತಂದೆಗೆ ಸೂಪರ್ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್… ಬೆಲೆ ಎಷ್ಟು ಗೊತ್ತಾ?