ರಿಷಿ ಕಪೂರ್ ನಿಧನಕ್ಕೆ ಕಂಬನಿ ಮಿಡಿದ ಕ್ರಿಕೆಟಿಗರು
Team Udayavani, Apr 30, 2020, 5:00 PM IST
ಮುಂಬೈ: ಖ್ಯಾತ ಬಾಲಿವುಡ್ ನಟ ರಿಷಿ ಕಪೂರ್ ಅವರು ಇಂದು ಮುಂಬೈನಲ್ಲಿ ನಿಧನ ಹೊಂದಿದ್ದಾರೆ. ಕಳೆದೆರಡು ವರ್ಷಗಳಿಂದ ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಿಷಿ ಕಪೂರ್ ಅವರು ತನ್ನ 67 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಬಾಲಿವುಡ್ ದಂತಕಥೆಯ ನಿಧನಕ್ಕೆ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಇದು ಅವಾಸ್ತವ ಮತ್ತು ನಂಬಲಾಗದದು. ನಿನ್ನೆ ಇರ್ಫಾನ್ ಖಾನ್ ಮತ್ತು ಇಂದು ರಿಷಿ ಕಪೂರ್ ಜಿ. ದಂತಕಥೆಯು ಇಂದು ನಿಧನ ಹೊಂದಿದ್ದಾರೆ ಎಂದರೆ ಇದನ್ನು ಒಪ್ಪಿಕೊಳ್ಳುವುದು ಕಷ್ಟ. ಕುಟುಂಬಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.
ತುಂಬಾ ಆಘಾತವಾಯಿತು. ಅವರೊಂದಿಗೆ ಎಂದಿಗೂ ಸಂತಸದ ಕ್ಷಣಗಳನ್ನು ಕಳೆದಿದ್ದೆ ಎಂದು ಕೋಚ್ ರವಿ ಶಾಸ್ತ್ರೀ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶಿಖರ್ ಧವನ್, ರಿಷಿ ಕಪೂರ್ ಜಿ ಅವರ ಹಠಾತ್ ನಿಧನದ ಬಗ್ಗೆ ಕೇಳಿದಾಗ ಆಘಾತವಾಯಿತು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಅವರ ಆತ್ಮಕೆ ಶಾಂತಿ ಸಿಗಲಿ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಾಕಿಸ್ಥಾನದ ವಾಕರ್ ಯೂನಿಸ್, ವಿಶ್ವ ಚಿತ್ರರಂಗಕ್ಕೆ ಭಯಾನಕ ವಾರ. ನಿಮ್ಮ ನಿಧನದೊಂದಿಗೆ ಒಂದು ಯುಗವು ಕೊನೆಗೊಳ್ಳುತ್ತದೆ ಆದರೆ ನೀವು ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತೀರಿ. ಕಪೂರ್ ಕುಟುಂಬಕ್ಕೆ ನನ್ನ ಆಳವಾದ ಸಂತಾಪ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.