600 Million Instagram Followers ಪಡೆದ ರೊನಾಲ್ಡೊ: ಇಲ್ಲಿದೆ ಟಾಪ್ 6 ಆಟಗಾರರ ಪಟ್ಟಿ
Team Udayavani, Aug 11, 2023, 11:20 AM IST
ಮುಂಬೈ: ಫುಟ್ಬಾಲ್ ಲೆಜೆಂಡ್ ಪೋರ್ಚುಗಲ್ ಸ್ಟ್ರೈಕರ್ ಕ್ರಿಸ್ಟಿಯಾನೋ ರೊನಾಲ್ಡೊ ಅವರು ಇದೀಗ ಹೊಸ ಎತ್ತರ ಏರಿದ್ದಾರೆ. ಅವರು ಇನ್ಸ್ಟಾಗ್ರಾಮ್ ನಲ್ಲಿ 600 ಮಿಲಿಯನ್ ಫಾಲೋವರ್ಸ್ ಗಳನ್ನು ಪಡೆದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ. ನಿವ್ವಳ ಮೌಲ್ಯ ಸುಮಾರು 4,176 ಕೋಟಿ ರೂ. ಹೊಂದಿರುವ ರೊನಾಲ್ಡೊ ಅತ್ಯಂತ ಹೆಚ್ಚು ಫಾಲೋವರ್ಸ್ ಪಡೆದ ಕ್ರೀಡಾಪಟುವಾಗಿದ್ದಾರೆ.
ಎರಡನೇ ಸ್ಥಾನದಲ್ಲಿ ಅರ್ಜೆಂಟೀನಾ ಮತ್ತು ಇಂಟರ್ ಮಿಯಾಮಿ ತಂಡದ ಲೆಜೆಂಡ್ ಲಿಯೋನೆಲ್ ಮೆಸ್ಸಿ ಇದ್ದಾರೆ. 482 ಮಿಲಿಯನ್ ಫಾಲೋವರ್ಸ್ ಗಳೊಂದಿಗೆ ಇನ್ಸ್ಟಾಗ್ರಾಮ್ ನಲ್ಲಿ ನಲ್ಲಿ ಅತಿ ಹೆಚ್ಚು ಅನುಸರಿಸುವ ಎರಡನೇ ಕ್ರೀಡಾಪಟುವಾಗಿದ್ದಾರೆ. ಮೆಸ್ಸಿಯವರ ನಿವ್ವಳ ಮೌಲ್ಯ ಸುಮಾರು 4,965 ಕೋಟಿ ರೂ.
ಇದನ್ನೂ ಓದಿ:Bike Stunt: ವಿಚಿತ್ರ ವೇಷ ಧರಿಸಿ ಬೈಕ್ ಸ್ಟಂಟ್: “ಮಿಸ್ಟರ್ ಕ್ರೇಜಿವ್ಲಾಗ್ಸ್’ ಬಂಧನ
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಇನ್ಸ್ಟಾಗ್ರಾಮ್ ನಲ್ಲಿ 256 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ವಿರಾಟ್ ಅವರು ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ಕ್ರಿಕೆಟ್ ಆಟಗಾರ.
ಬ್ರೆಜಿಲ್ ಮತ್ತು ಪಿಎಸ್ ಜಿ ಸ್ಟ್ರೈಕರ್ ನೇಮರ್ ಜೂನಿಯರ್ ಇನ್ಸ್ಟಾಗ್ರಾಮ್ ನಲ್ಲಿ 211 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಅವರು ಕ್ರೀಡಾಪಟುಗಳ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಫ್ರಾನ್ಸ್ ಮತ್ತು ಪಿಎಸ್ ಜಿ ಸ್ಟಾರ್ ಫುಟ್ಬಾಲ್ ಆಟಗಾರ ಕೈಲಿಯನ್ ಎಂಬಪ್ಪೆ ಇನ್ಸ್ಟಾಗ್ರಾಮ್ ನಲ್ಲಿ 107 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.
ಮಾಜಿ ಇಂಗ್ಲೆಂಡ್ ಫುಟ್ಬಾಲ್ ಆಟಗಾರ ಮತ್ತು ಇಂಟರ್ ಮಿಯಾಮಿ ಫುಟ್ಬಾಲ್ ಕ್ಲಬ್ ಮಾಲೀಕ ಡೇವಿಡ್ ಬೇಕ್ ಹ್ಯಾಮ್ ಅವರು ಇನ್ಸ್ಟಾಗ್ರಾಮ್ ನಲ್ಲಿ 81.9 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಬೆಕ್ಹ್ಯಾಮ್ ಅವರು 3,700 ಕೋಟಿ ರೂ.ಗಿಂತ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.