ಮೆಸ್ಸಿ ಹಿಂದಿಕ್ಕಿದ ರೊನಾಲ್ಡೊಗೆ ವರ್ಷದ ಶ್ರೇಷ್ಠ ಆಟಗಾರ ಪ್ರಶಸ್ತಿ
Team Udayavani, Jan 1, 2020, 1:01 AM IST
ದುಬಾೖ: ಖ್ಯಾತ ಫುಟ್‌ಬಾಲ್ ಆಟಗಾರ ಆರ್ಜೆಂಟೀನಾದ ಲಿಯೊನೆಲ್ ಮೆಸ್ಸಿ ಅವರನ್ನು ಹಿಂದಿಕ್ಕಿದ ಪೂರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ ವರ್ಷದ ಶ್ರೇಷ ಫುಟ್ಬಾಲಿಗ ಪ್ರಶಸ್ತಿ ಗೆದ್ದಿದ್ದಾರೆ.
ದುಬಾೖಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೊನಾಲ್ಡೊ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ರೊನಾಲ್ಡೊ ಈ ಬಾರಿಯ ಬ್ಯಾಲನ್ ಡಿ’ಓರ್ ಪ್ರಶಸ್ತಿ ಜಯಿಸಿಲ್ಲ. ರೊನಾಲ್ಡೊ ಅವರನ್ನು ಹಿಂದಿಕ್ಕಿದ ಮೆಸ್ಸಿ ದಾಖಲೆ ಆರನೇ ಬಾರಿ ಬ್ಯಾಲನ್ ಡಿ’ಓರ್ ಪ್ರಶಸ್ತಿ ಜಯಿಸಿದ್ದರು. ಆದರೆ 34ರ ಹರೆಯದ ರೊನಾಲ್ಡೊ ತನ್ನ ಕ್ಲಬ್ ಜುವೆಂಟಸ್ 2018-19ರ ಸೀರೀ ಎ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರಿಂದ ಸತತ ನಾಲ್ಕನೇ ಬಾರಿ ಈ ಪ್ರಶಸ್ತಿ ಗೆದ್ದಿರುವುದು ವಿಶೇಷವಾಗಿದೆ. ಕಳೆದ ಹಲವು ವರ್ಷಗಳಿಂದ ಪ್ರತಿಷ್ಠಿತ ಪ್ರಶಸ್ತಿಗೆ ರೊನಾಲ್ಡೊ ಅಥವಾ ಮೆಸ್ಸಿ ನಡುವೆ ಪೈಪೋಟಿ ಇರುವುದು ಗಮನಿಸಬೇಕಾದ ಅಂಶವಾಗಿದೆ.
“ಜಾಗತಿಕ ಫುಟ್‌ಬಾಲ್ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ಸಂತಸದ ವಿಷಯ, ನನ್ನ ಕುಟುಂಬದ ಜತೆಗೆ ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದಕ್ಕೆ ತುಂಬಾನೆ ಖುಷಿಯಾಗುತ್ತಿದೆ. ದುಬಾೖಯಲ್ಲಿ ಉತ್ತಮ ಆತಿಥ್ಯ ನೀಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು. ಮತ್ತೆ ಬರುತ್ತೇನೆ’ ಎಂದು ರೊನಾಲ್ಡೊ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.