ಮನೋಜ್‌ಗೆ ಡಿಎಸ್‌ಪಿ ಹುದ್ದೆ ನೀಡದ ಹರ್ಯಾಣ: ಹೈ ನೋಟಿಸ್
Team Udayavani, Jul 30, 2017, 7:30 AM IST
ಮೊಹಾಲಿ: ಡಿಎಸ್‌ಪಿ (ಉಪ ಪೊಲೀಸ್‌ಅಧೀಕ್ಷಕ) ಹುದ್ದೆ ನೀಡಲು ಹರ್ಯಾಣ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ, ಬಾಕ್ಸರ್ ಮನೋಜ್ ಕುಮಾರ್, ಇಲ್ಲಿನ ಪಂಜಾಬ್-ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಹರ್ಯಾಣ ಸರ್ಕಾರದ ಗೃಹ ಮತ್ತು ಹಣಕಾಸು ಇಲಾಖೆ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ. ಆಗಸ್ಟ್ 29ರೊಳಗೆ ನ್ಯಾಯಾಲಯಕ್ಕೆ ಉತ್ತರಿಸುವಂತೆ ಸೂಚಿಸಿದೆ.
ಮನೋಜ್ ಕುಮಾರ್ 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದರು. ಇದಕ್ಕೂ ಮೊದಲು 2010ರಲ್ಲಿ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅಂದಿನ ಸರ್ಕಾರ ಇವರಿಗೆ ಡಿಎಸ್‌ಪಿ ಹುದ್ದೆ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಆ ನಂತರ ಕೊಟ್ಟ ಭರವಸೆಯನ್ನು ಮರೆತಿತ್ತು. ಆದಾದ ಬಳಿಕ ಹಲವರಿಗೆ ಹುದ್ದೆ ನೀಡಿದ್ದರೂ 7 ವರ್ಷದಿಂದ ತನ್ನನ್ನು ಕಡೆಗಣಿಸಲಾಗಿದೆ ಎಂದು ಮನೋಜ್ ಕುಮಾರ್ ಈಗ ಆರೋಪಿಸಿದ್ದಾರೆ.
2007ರಲ್ಲಿ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಆಡಿದ್ದ ಹರ್ಯಾಣದ ಜೋಗಿಂದರ್ ಶರ್ಮಗೆ ಡಿಎಸ್‌ಪಿ ಹುದ್ದೆ ನೀಡಲಾಗಿತ್ತು. ಒಂದೇ ಒಂದು ಟಿ20 ಆಡಿದ್ದಕ್ಕೆ ಅವರಿಗೆ ಡಿಎಸ್‌ಪಿ ಹುದ್ದೆ ನೀಡಲಾಗಿದೆ. ಆದರೆ ದೊಡ್ಡ ಕೂಟದಲ್ಲಿ ಭಾರತ ಪ್ರತಿನಿಧಿಸಿರುವ ನನ್ನನ್ನು ಸರ್ಕಾರ ನಿರ್ಲಕ್ಷಿéಸಿದೆ ಎಂದು ಅವರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.