ಫ್ಯಾನ್ ಸ್ಟ್ಯಾಂಡ್ ನಲ್ಲಿ ಕುಳಿತು ಹೈದರಾಬಾದ್ ತಂಡಕ್ಕೆ ಬೆಂಬಲ ಸೂಚಿಸಿದ ವಾರ್ನರ್
Team Udayavani, Oct 4, 2021, 10:00 AM IST
ದುಬೈ: ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ರವಿವಾರ ದುಬೈ ನಲ್ಲಿ ಪಂದ್ಯ ನಡೆಯಿತು. ರವಿವಾರದ ಎರಡನೇ ಪಂದ್ಯದಲ್ಲಿ ಇಯಾನ್ ಮಾರ್ಗನ್ ನಾಯಕತ್ವದ ಕೆಕೆಆರ್ ತಂಡ ಗೆಲುವು ಸಾಧಿಸಿದೆ.
ಹೈದರಾಬಾದ್ ತಂಡದ ಮಾಜಿ ನಾಯಕ ಡೇವಿಡ್ ವಾರ್ನರ್ ಈ ಪಂದ್ಯದಲ್ಲಿ ಅಭಿಮಾನಿಗಳ ಮಧ್ಯೆ ಕುಳಿತು ತಂಡಕ್ಕೆ ಬೆಂಬಲ ನೀಡಿದರು. ಅದರ ಹಿಂದಿನ ಕೆಲ ಪಂದ್ಯಗಳಲ್ಲಿ ಮೈದಾನದಿಂದ ದೂರ ಉಳಿದಿದ್ದ ವಾರ್ನರ್ ರವಿವಾರ ಎಸ್ಆರ್ ಎಚ್ ಜೆರ್ಸಿ ಧರಿಸಿ ತಂಡಕ್ಕೆ ಬೆಂಬಲ ನೀಡಿದರು.
ಈ ಬಾರಿಯ ಐಪಿಎಲ್ ನಲ್ಲಿ ನೀರಸ ಪ್ರದರ್ಶನ ನೀಡಿದ ಕಾರಣ ಡೇವಿಡ್ ವಾರ್ನರ್ ಅವರನ್ನು ಹೈದರಾಬಾದ್ ಫ್ರಾಂಚೈಸಿ ನಾಯಕತ್ವದಿಂದ ಕೈಬಿಟ್ಟಿತ್ತು. ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಗೆ ಈ ಹೊಣೆ ನೀಡಲಾಗಿತ್ತು. ಯುಎಇ ಚರಣದ ಮೊದಲೆರಡು ಡೇವಿಡ್ ವಾರ್ನರ್ ಸೊನ್ನೆ ಸುತ್ತಿದ ಬಳಿಕ ಅವರನ್ನು ಆಡುವ ಬಳಗಿಂದಲೂ ಫ್ರಾಂಚೈಸಿ ಕೈಬಿಟ್ಟಿತ್ತು. ಅವರ ಬದಲಿಗೆ ಜೇಸನ್ ರಾಯ್ ರನ್ನು ಆಡುವ ಬಳಗಕ್ಕೆ ಸೇರಿಸಲಾಗಿತ್ತು.
This guy ❤️? @davidwarner31 pic.twitter.com/fqWaywoeAu
— Pravin ? (@_itz__pravin) October 3, 2021
ಇದನ್ನೂ ಓದಿ:ಒಂದೇ ತಿಂಗಳು ಎರಡು ಸಿನಿಮಾ ರಿಲೀಸ್ : ಅಕ್ಟೋಬರ್ ನಿರೀಕ್ಷೆಯಲ್ಲಿ ಭಾವನಾ
ಇದುವರೆಗೆ ಕೇವಲ ಎರಡು ಪಂದ್ಯ ಗೆದ್ದಿರುವ ಹೈದರಾಬಾದ್ ತಂಡ ಕೆಕೆಆರ್ ವಿರುದ್ಧವೂ ಮುಗ್ಗರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬದ್ ತಂಡ ಎಂಟು ವಿಕೆಟ್ ಕಳೆದುಕೊಂಡು 115 ರನ್ ಗಳಿಸಿತು. ಸುಲಭ ಗುರಿ ಬೆನ್ನತ್ತಿದ್ದ ಕೆಕೆಆರ್ ತಂಡವು 4 ಕಳೆದುಕೊಂಡು ಜಯ ಸಾಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.