AUSvsPAK; ಶತಕ ಬಾರಿಸಿ ಪುಷ್ಪ ಶೈಲಿಯಲ್ಲಿ ಸಂಭ್ರಮಾಚರಿಸಿದ ಡೇವಿಡ್ ವಾರ್ನರ್| Video
Team Udayavani, Oct 20, 2023, 5:48 PM IST
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ರೋಚಕ ವಿಶ್ವಕಪ್ ಹಣಾಹಣಿಯಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅದ್ಭುತ ಶತಕ ಬಾರಿಸಿದರು. ಅಲ್ಲದೆ ವಿಶಿಷ್ಟ ‘ಪುಷ್ಪ’ ಸಂಭ್ರಮಾಚರಣೆಯ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಗಮನ ಸೆಳೆದರು.
ವಿಶ್ವಕಪ್ ಕೂಟದಲ್ಲಿ ರನ್ ಬರ ಎದುರಿಸುತ್ತಿದ್ದ ವಾರ್ನರ್ ಪಾಕ್ ವಿರುದ್ಧದ ಪಂದ್ಯದಲ್ಲಿ 21 ಏಕದಿನ ಶತಕ ಬಾರಿಸಿದರು. ಕೇವಲ 124 ಎಸೆತಗಳಲ್ಲಿ 163 ರನ್ ಬಾರಿಸಿದರು. ಈ ಇನ್ನಿಂಗ್ಸ್ ನಲ್ಲಿ ಅವರು 9 ಸಿಕ್ಸರ್ ಮತ್ತು 14 ಬೌಂಡರಿ ಬಾರಿಸಿದರು.
ತಮ್ಮ ಶತಕದ ವೇಳೆ ಡೇವಿಡ್ ವಾರ್ನರ್ ಅವರು ಪುಷ್ಪ ಶೈಲಿಯಲ್ಲಿ ಸಂಭ್ರಮಾಚರಣೆ ಮಾಡಿದರು. ಎಲ್ಲರಿಗೂ ತಿಳಿದು ಇರುವಂತೆ ವಾರ್ನರ್ ಅವರು ತೆಲುಗು ಸಿನಿಮಾಗಳನ್ನು ಹೆಚ್ಚಾಗಿ ಫಾಲೋ ಮಾಡುತ್ತಾರೆ. ಅಲ್ಲದೆ ಅವರು ಪುಷ್ಪ ಸಿನಿಮಾದ ನಟ ಅಲ್ಲು ಅರ್ಜುನ್ ಅವರನ್ನು ಅನುಸರಿಸುತ್ತಾರೆ. ಇತ್ತೀಚೆಗೆ ಅಲ್ಲು ಅರ್ಜುನ್ ರಾಷ್ಟ್ರಪ್ರಶಸ್ತಿ ಗೆದ್ದಾಗಲೂ ವಾರ್ನರ್ ಇನ್ಸ್ಟಾಗ್ರಾಮ್ ಸ್ಟೋರಿ ಹಾಕಿ ಅಭಿನಂದನೆ ಸಲ್ಲಿಸಿದ್ದರು.
A Pushpa trademark by David Warner🤩 after reaching the century!#AUSvsPAK #PAKvsAUS pic.twitter.com/CV7dNKBSNr
— Sam𝕏 (@SAM_x_49) October 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.