ಭಾರತ ವಿರುದ್ಧದ ಸೆಮಿ ಕದನಕ್ಕೂ ಮೊದಲು ಇಂಗ್ಲೆಂಡ್ ಗೆ ಗಾಯದ ಸಮಸ್ಯೆ!
Team Udayavani, Nov 7, 2022, 5:44 PM IST
ಅಡಿಲೇಡ್: ಐಸಿಸಿ ಟಿ20 ವಿಶ್ವಕಪ್ ನ ಸೂಪರ್ 12 ಹಂತದ ಪಂದ್ಯಗಳು ಮುಗಿದು ಸೆಮಿ ಫೈನಲ್ ಗೆ ಸಜ್ಜಾಗಿದೆ. ನ್ಯೂಜಿಲ್ಯಾಂಡ್- ಪಾಕಿಸ್ಥಾನ, ಭಾರತ – ಇಂಗ್ಲೆಂಡ್ ನಡುವೆ ಸೆಮಿ ಕದನ ನಡೆಯಲಿದೆ. ಆದರೆ ಇದಕ್ಕೂ ಮೊದಲು ಇಂಗ್ಲೆಂಡ್ ಗೆ ಗಾಯಾಳುಗಳ ಸಮಸ್ಯೆ ಎದುರಾಗಿದೆ.
ಅಂತಿಮ ಸೂಪರ್ 12 ಪಂದ್ಯದ ವೇಳೆ ಗಾಯಗೊಂಡ ಇಂಗ್ಲೆಂಡ್ ಬ್ಯಾಟರ್ ಡೇವಿಡ್ ಮಲಾನ್ ಗುರುವಾರ ಭಾರತ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಗೆ ಅಲಭ್ಯರಾಗುವ ಸಾಧ್ಯತೆಯಿದೆ.
ಕಳೆದ ಶನಿವಾರ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಮಲಾನ್ ಗೆ ತೊಡೆಸಂದು ಗಾಯವಾಗಿತ್ತು. ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಮಲಾನ್ ಗಾಯಗೊಂಡಿದ್ದರು. ಹೀಗಾಗಿ ಅವರು ಬ್ಯಾಟಿಂಗ್ ಮಾಡಲು ಆಗಮಿಸಲಿಲ್ಲ.
ಇದನ್ನೂ ಓದಿ:29 ವಿಷಕಾರಿ ಹಾವುಗಳೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಂಧನ !
ಮಲಾನ್ ಅವರ ಗಾಯದ ಬಗ್ಗೆ ಉಪನಾಯಕ ಮೊಯಿನ್ ಅಲಿ ಮಾಹಿತಿ ನೀಡಿದ್ದು, “ಅವರು ನಮ್ಮ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು. ನನಗೆ ಗೊತ್ತಿಲ್ಲ ಆದರೆ ಮಲಾನ್ ಅವರ ಗಾಯ ಉತ್ತಮವಾಗಿ ಕಾಣುತ್ತಿಲ್ಲ.” ಎಂದಿದ್ದಾರೆ.
ತನ್ನ ಸೂಪರ್ 12 ಗ್ರೂಪ್ 1 ರಲ್ಲಿ ಎರಡನೇ ಸ್ಥಾನ ಪಡೆದ ಇಂಗ್ಲೆಂಡ್ ಗುರುವಾರ ಗ್ರೂಪ್ 2ರ ಅಗ್ರಸ್ಥಾನದಲ್ಲಿರುವ ಭಾರತದೊಂದಿಗೆ ಸೆಣಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.