Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್
Team Udayavani, Apr 20, 2024, 12:34 AM IST
ಹೊಸದಿಲ್ಲಿ: ಭಾರತದ ಪ್ರಮುಖ ಕುಸ್ತಿಪಟುಗಳಾದ ದೀಪಕ್ ಪುನಿಯ ಮತ್ತು ಸುಜೀತ್ ಕಲಾಕಾಲ್ ಅವರಿಗೆ ಒಲಿಂಪಿಕ್ಸ್ ಅರ್ಹತೆ ತಪ್ಪುವ ಭೀತಿ ಎದುರಾಗಿದೆ.
ಕಿರ್ಗಿಸ್ತಾನದ ಬಿಷ್ಕೆಕ್ನಲ್ಲಿ ಆರಂಭವಾಗಿರುವ ಏಷ್ಯಾ ಒಲಿಂಪಿಕ್ಸ್ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಶನಿವಾರ ಇಬ್ಬರೂ ಪಾಲ್ಗೊಳ್ಳಬೇಕಿತ್ತು. ಆದರೆ ದುಬಾೖಯಲ್ಲಿ ಸುರಿದ ಭಾರೀ ಮಳೆ ಯಿಂದಾಗಿ, ಎ. 16ರಿಂದ ಇಬ್ಬರೂ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಅತಂತ್ರರಾಗಿದ್ದರು. ಕಡೆಗೆ ತಡವಾಗಿ ಬಿಷ್ಕೆಕ್ ತಲುಪಿದ್ದಾರೆ. ಪರಿಸ್ಥಿತಿಯನ್ನು ವಿವರಿಸಿ ಕೋಚ್ಗಳು ಮನವಿ ಮಾಡಿದರೂ ಸಂಘಟಕರು ಪ್ರವೇಶ ನೀಡಲು ನಿರಾಕರಿಸಿದ್ದಾರೆ.
ಈ ಅರ್ಹತಾ ಸುತ್ತು ತಪ್ಪಿರುವುದರಿಂದ, ಇಬ್ಬರಿಗೆ ಇನ್ನೊಂದು ಅರ್ಹತಾ ಸುತ್ತು ಮಾತ್ರ ಬಾಕಿಯಿದೆ. ಅದರಲ್ಲಿ ಗೆದ್ದು ಮುಂದಿನ ಹಂತಕ್ಕೇರುವುದು ಕಷ್ಟ. ಹೀಗಾಗಿ ಇಬ್ಬರೂ ಒಲಿಂಪಿಕ್ಸ್ ಅರ್ಹತೆ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ.
ತೂಕಕ್ಕೆ ಹಾಜರಿರಲಿಲ್ಲ
ದೀಪಕ್ 86 ಕೆಜಿ ವಿಭಾಗದಲ್ಲಿ ಹಾಗೂ ಸುಜೀತ್ 65 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದು, ಕ್ರೀಡಾಕೂಟಕ್ಕೂ ಮುನ್ನ ನಡೆಯುವ ತೂಕ ನಿರ್ಧರಿಸುವ ಸಮಯದಲ್ಲಿ ಹಾಜರಿರಲಿಲ್ಲ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಏಷ್ಯಾ ಒಲಿಂಪಿಕ್ಸ್ ಅರ್ಹತಾ ಕೂಟದ ಸಂಘಟಕರು ತಡವಾಗಿ ತೂಕ ಮಾಡಲು ನಿರಾಕರಿಸಿದ್ದು, ಭಾರತದ ಕೋಚ್ಗಳ ಮನವಿಯ ಬಳಿಕವೂ ಅನುಮತಿ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.