IPL 2023 ಸತತ ಸೋಲನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್ ಬಿಟ್ಟು ತವರಿಗೆ ಹೊರಟ ಆಸೀಸ್ ಆಲ್ ರೌಂಡರ್
Team Udayavani, Apr 8, 2023, 11:57 AM IST
ಹೊಸದಿಲ್ಲಿ: ಐಪಿಎಲ್ ಸೀಸನ್ 16ರ ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ರಾಯಲ್ಸ್ ವಿರುದ್ಧ ಗೆದ್ದು ಗೆಲುವಿನ ಹಳಿ ಏರಲು ವಾರ್ನರ್ ಪಡೆ ಸಿದ್ದತೆ ನಡೆಸುತ್ತಿದೆ. ಆದರೆ ಈ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಆಲ್ ರೌಂಡರ್ ತಂಡ ಬಿಟ್ಟು ತವರಿಗೆ ಹೊರಟಿದ್ದಾರೆ.
ಆಸೀಸ್ ಮೂಲದ ಆಲ್ ರೌಂಡರ್ ಮಿಚೆಲ್ ಮಾರ್ಷ್ ಅವರು ತವರಿಗೆ ಮರಳಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ತರಬೇತುದಾರ ಜೇಮ್ಸ್ ಹೋಪ್ಸ್ ಆಲ್ ರೌಂಡರ್ ಮಿಚೆಲ್ ಮಾರ್ಷ್ ಮದುವೆಯಾಗಲು ಆಸ್ಟ್ರೇಲಿಯಾಕ್ಕೆ ಮರಳಲಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಮುಂದಿನ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Bizarre: ಮಲವಿಸರ್ಜನೆ ವೇಳೆ ಖಾಸಗಿ ಅಂಗದ ಮೂಲಕ ದೇಹದೊಳಗೆ ಹಾವು ಪ್ರವೇಶಿಸಿದೆ ಎಂದ ವ್ಯಕ್ತಿ
ಈ ಸೀಸನ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಡಿದ ಎರಡೂ ಪಂದ್ಯಗಳಲ್ಲಿ ಮಿಚೆಲ್ ಮಾರ್ಷ್ ಆಡಿದ್ದರು. ಆದರೆ ದೊಡ್ಡ ಮೊತ್ತ ದಾಖಲಿಸಲು ವಿಫಲರಾಗಿದ್ದಾರೆ.
“ಅವರು ಮುಂದಿನ ಕೆಲವು ಪಂದ್ಯಗಳಿಗೆ ಲಭ್ಯವಿರುವುದಿಲ್ಲ. ಅವರು ಮದುವೆಯಾಗುತ್ತಿದ್ದಾರೆ” ಎಂದು ಗುವಾಹಟಿಯಲ್ಲಿ ಹೋಪ್ಸ್ ಮಾಧ್ಯಮಗಳಿಗೆ ತಿಳಿಸಿದರು.
ಮಾರ್ಷ್ ತಂಡದಿಂದ ಹೊರಹೋದ ಕಾರಣ, ಗೆಲ್ಲಲೇಬೇಕಾದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗಲ್ಲಿ ರೋವ್ಮನ್ ಪೊವೆಲ್ ಅವರನ್ನು ಸೇರಿಸಿ ಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.