ಕೊರೊನಾ ಕಾಟ: ದಿಲ್ಲಿ ವಿಶ್ವಕಪ್‌ ಶೂಟಿಂಗ್‌ ಮುಂದೂಡಿಕೆ

ಟೋಕಿಯೊ ಒಲಿಂಪಿಕ್ಸ್‌ ಅರ್ಹತಾ ಶೂಟಿಂಗ್‌ ಕೂಟವೇ ರದ್ದು!

Team Udayavani, Mar 7, 2020, 6:49 AM IST

ಕೊರೊನಾ ಕಾಟ: ದಿಲ್ಲಿ ವಿಶ್ವಕಪ್‌ ಶೂಟಿಂಗ್‌ ಮುಂದೂಡಿಕೆ

ಹೊಸದಿಲ್ಲಿ: ಮಾರಕ ಕೊರೊನಾ ವೈರಸ್‌ಗೆ ಮತ್ತೂಂದು ಕ್ರೀಡಾಕೂಟ “ಬಲಿ’ಯಾಗಿದೆ. ಹೊಸದಿಲ್ಲಿ ಆತಿಥ್ಯದ ವಿಶ್ವಕಪ್‌ ಶೂಟಿಂಗ್‌ ಕೂಟವನ್ನು ಮುಂದೂಡಲಾಗಿದೆ.
“ಹೊಸದಿಲ್ಲಿಯಲ್ಲಿ ನಡೆಯಬೇಕಿದ್ದ ವಿಶ್ವಕಪ್‌ ಶೂಟಿಂಗ್‌ ಟೂರ್ನಿಯನ್ನು ಮುಂದೂಡಲಾಗಿದೆ. ಒಲಿಂಪಿಕ್ಸ್‌ಗೂ ಮೊದಲು ಕೂಟ ನಡೆಸಲಾಗುತ್ತದೆ. ಶೀಘ್ರದಲ್ಲೇ ಮುಂದಿನ ದಿನಾಂಕ ಪ್ರಕಟಿಸಲಾಗುವುದು’ ಎಂದು ಭಾರತ ರಾಷ್ಟ್ರೀಯ ರೈಫ‌ಲ್‌ ಸಂಸ್ಥೆ (ಎನ್‌ಆರ್‌ಎಐ) ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಮಾ. 15ರಿಂದ 25ರ ತನಕ ಹೊಸದಿಲ್ಲಿಯ “ಡಾ| ಕರ್ಣಿ ಸಿಂಗ್‌ ಶೂಟಿಂಗ್‌ ರೇಂಜ್‌’ನಲ್ಲಿ ವಿಶ್ವಕಪ್‌ ಶೂಟಿಂಗ್‌ ಆಯೋಜಿಸಲಾಗಿತ್ತು. ವಿವಿಧ ದೇಶದ ಸ್ಪರ್ಧಿಗಳು ಭಾಗವಹಿಸಬೇಕಿತ್ತು. ಕೊರೊನಾ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೆಲವು ದೇಶಗಳು ಕೂಟದಿಂದ ಹಿಂದೆ ಸರಿದವು. ಮತ್ತೆ ಕೆಲವು ಕ್ರೀಡಾ ಪಟುಗಳ ವೀಸಾ ರದ್ದಾಯಿತು. ಈ ಎಲ್ಲ ಕಾರಣಗಳಿಂದ ಕೂಟವನ್ನೇ ಮುಂದೂಡಲು ಅಂತಾರಾಷ್ಟ್ರೀಯ ಶೂಟಿಂಗ್‌ ಒಕ್ಕೂಟ (ಐಎಸ್‌ಎಸ್‌ಎಫ್) ನಿರ್ಧರಿಸಿದೆ. ಮೂಲಗಳ ಪ್ರಕಾರ ಒಟ್ಟು 22 ರಾಷ್ಟ್ರಗಳು ಕೂಟದಿಂದ ಹಿಂದಕ್ಕೆ ಸರಿದಿವೆ ಎನ್ನಲಾಗಿದೆ.

ಒಲಿಂಪಿಕ್ಸ್‌ ಅರ್ಹತಾ
ಶೂಟಿಂಗ್‌ ರದ್ದು
ಜಪಾನಿನ ಟೋಕಿಯೊದಲ್ಲಿ ಎ. 16ರಿಂದ ನಡೆಯಬೇಕಿದ್ದ ಒಲಿಂಪಿಕ್ಸ್‌ ಅರ್ಹತಾ ಶೂಟಿಂಗ್‌ ಕೂಟವನ್ನು ಕೂಡ ಕೊರೊನಾ ಹಿನ್ನೆಲೆಯಲ್ಲಿ ರದ್ದು ಮಾಡಲು ಅಂತಾರಾಷ್ಟ್ರೀಯ ಶೂಟಿಂಗ್‌ ಒಕ್ಕೂಟ ನಿರ್ಧರಿಸಿದೆ.

“ಕೊರೊನಾದಿಂದ ವಿಶ್ವಾದ್ಯಂತ 3 ಸಾವಿರಕ್ಕೂ ಹೆಚ್ಚು ಜನ ಸಾವಿಗೀಡಾ ಗಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕಿದೆ ಎಂದು ವರದಿಯಾಗಿದೆ. ಇಂತಹ ವಿಷಮ ಸಂದರ್ಭದಲ್ಲಿ ಕೂಟವನ್ನು ನಡೆಸಲಾಗದು’ ಎಂದು ಐಎಸ್‌ಎಸ್‌ಎಫ್ ತಿಳಿಸಿದೆ.

ನೇಪಾಲದ ಟಿ20 ಕೂಟ ರದ್ದು
ನೇಪಾಲದಲ್ಲಿ ನಡೆಯಬೇಕಿದ್ದ ಟಿ20 ಕ್ರಿಕೆಟ್‌ ಕೂಟವನ್ನು ತಾತ್ಕಾಲಿ ಕವಾಗಿ ರದ್ದು ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಈ ಕೂಟದಲ್ಲಿ ವೆಸ್ಟ್‌ ಇಂಡೀಸ್‌ ದೈತ್ಯ ಕ್ರಿಸ್‌ ಗೇಲ್‌, ನೇಪಾಲದ ತಾರಾ ಕ್ರಿಕೆಟಿಗ ಸಂದೀಪ್‌ ಲಮಿಶಾನೆ ಮೊದಲಾದವರು ಪಾಲ್ಗೊಳ್ಳಬೇಕಿತ್ತು. ಕೊರೊನಾ ಹಿನ್ನೆಲೆಯಲ್ಲಿ ಕೂಟವನ್ನು ಮುಂದೂಡಲಾಗುತ್ತಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಕೊರೊನಾ ಎದುರಿಸಲು ಸಜ್ಜು: ಗಂಗೂಲಿ
ಕೋಲ್ಕತಾ: ಕೊರೊನಾ ಐಪಿಎಲ್‌ ಮೇಲೆ ಪರಿಣಾಮ ಬೀರದು. ಕೂಟ ನಿಗದಿಯಂತೆ ನಡೆಯಲಿದೆ ಎಂಬುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಆಶಾವಾದ ವ್ಯಕ್ತಪಡಿಸಿದ್ದಾರೆ.

“ಸದ್ಯದಲ್ಲೇ ಇಂಗ್ಲೆಂಡ್‌ ತಂಡ ಶ್ರೀಲಂಕಾಕ್ಕೆ, ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಆಗಮಿಸಲಿವೆ. ಯಾವುದೇ ಸಮಸ್ಯೆ ಇಲ್ಲ. ಕೊರೊನಾವನ್ನು ಎದುರಿಸಲು ನಾವೆಲ್ಲ ತಯಾರಾಗಿದ್ದೇವೆ’ ಎಂದು ಗಂಗೂಲಿ ಹೇಳಿದರು.

ಭಾರತೀಯ ಕ್ರೀಡಾಪಟುಗಳ ಆಶಾವಾದ
ಕೊರೊನಾ ಭಾರತ ಸೇರಿದಂತೆ ವಿಶ್ವದ ಎಲ್ಲ ಕ್ರೀಡಾಪಟುಗಳ ಒಲಿಂಪಿಕ್ಸ್‌ ತಯಾರಿಗೆ ಅಡ್ಡಿಯಾಗಿ ಪರಿಣಮಿಸಿದೆ. ಆದರೂ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು, ಕೋಚ್‌ ಪುಲ್ಲೇಲ ಗೋಪಿಚಂದ್‌, ಕುಸ್ತಿಪಟು ಭಜರಂಗ್‌ ಪುನಿಯ ಮೊದಲಾದವರೆಲ್ಲ ಒಲಿಂಪಿಕ್ಸ್‌ ಅರ್ಹತಾ ಸುತ್ತುಗಳ ಸ್ಪರ್ಧೆ ನಡೆಯುವ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ.

“ಬ್ಯಾಡ್ಮಿಂಟನ್‌ ತಾರೆಯರಿಗೆ ಒಲಿಂಪಿಕ್ಸ್‌ ಅರ್ಹತೆ ಪಡೆದುಕೊಳ್ಳಲು ಸಮಸ್ಯೆಯಾಗಿದೆ. ಆದರೆ ಆಲ್‌ ಇಂಗ್ಲೆಂಡ್ ಚಾಂಪಿಯನ್‌ಶಿಪ್‌ ರದ್ದಾಗಿಲ್ಲ. ಇಲ್ಲಿ ಅವಕಾಶವಿದೆ’ ಎಂದು ಸಿಂಧು ಹೇಳಿದ್ದಾರೆ.

“ಒಲಿಂಪಿಕ್ಸ್‌ ತಯಾರಿ ಬಹಳ ಕಷ್ಟವಾಗಿದೆ’ ಎಂದು ಭಜರಂಗ್‌ ಪುನಿಯ ಹೇಳಿದ್ದಾರೆ. “ಒಲಿಂಪಿಕ್ಸ್‌ 4 ವರ್ಷಕ್ಕೊಮ್ಮೆ ಬರುತ್ತದೆ. ಇದರಲ್ಲಿ ಭಾಗವಹಿಸುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಕನಸು. ಆದರೆ ಕೊರೊನಾದಿಂದಾಗಿ ಹಿನ್ನಡೆಯಾಗಿದೆ. ಆದರೂ ಕ್ರೀಡಾಪಟುಗಳ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕಿದೆ’ ಎಂದು ಗೋಪಿಚಂದ್‌ ಹೇಳಿದರು.

ಟಾಪ್ ನ್ಯೂಸ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rwqeqwqw

BCCI ಕಾರ್ಯದರ್ಶಿಯಾಗಿ ರೋಹನ್‌ ಜೇಟ್ಲಿ?

1-frr

Ranji; ಕರ್ನಾಟಕ-ಬೆಂಗಾಲ್‌ ಪಂದ್ಯ ನಾಳೆಯಿಂದ: ತಂಡದಲ್ಲಿ ಶಮಿ ಇಲ್ಲ

IPL 2

IPL; ರಿಯಾದ್‌ನಲ್ಲಿ ಮಹಾ ಹರಾಜು?: 204 ಸ್ಥಾನಗಳಿಗೆ ಪೈಪೋಟಿ

ICC

ICC; ವನಿತಾ ಕ್ರಿಕೆಟ್‌ ಫ್ಯೂಚರ್‌ ಪ್ರವಾಸ ವೇಳಾಪಟ್ಟಿ ಪ್ರಕಟ

Hockey

National Hockey; ಕರ್ನಾಟಕಕ್ಕೆ ಜಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.