ತೆರಿಗೆ ಹಣದಲ್ಲಿ ಕಾಮನ್ವೆಲ್ತ್ಗೆ ಹೋಗೆವು
Team Udayavani, Mar 24, 2018, 7:30 AM IST
ಹೈದರಾಬಾದ್: ಮುಂಬರುವ ಕಾಮನ್ವೆಲ್ತ್ ಕ್ರೀಡಾಕೂಟದ ವೇಳೆ ಸ್ಪರ್ಧಿಗಳ ಜತೆ ಪೋಷಕರು ಪ್ರಯಾಣಿಸುವಂತಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವಾ ಲಯ ಖಡಕ್ ಸೂಚನೆ ನೀಡಿದೆ. ಈ ಬೆನ್ನಲ್ಲೇ ವಿಶೇಷ ಅವಕಾಶದಡಿ ಒಲಿಂಪಿಯನ್ ಪದಕ ತಾರೆಗಳಾದ ಸಿಂಧು, ಸೈನಾ ನೆಹ್ವಾಲ್ ಪೋಷಕರಿಗೂ ಅವಕಾಶ ನೀಡಲಾಗಿದೆ ಎನ್ನುವ ಸುದ್ದಿ ಕೇಳಿ ಬಂದಿದೆ. ಇದಕ್ಕೆ ಟೀಕೆ ಕೂಡ ವ್ಯಕ್ತವಾಗಿದೆ. ಆದರೆ ಸಿಂಧು, ಸೈನಾ ಪೋಷಕರು ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಸಿಂಧು ತಂದೆ ರಮಣ, “ಈ ಹಿಂದೆ ನನ್ನ ಮಗಳ ಜತೆ ಅನೇಕ ಸ್ಪರ್ಧೆಗಳಿಗೆ ತೆರಳಿದ್ದೇನೆ. ಆಗ ನಾವೇ ಕೈಯಿಂದ ಹಣ ಹಾಕಿ ಹೋಗಿದ್ದೆವು. ಮುಂದಿನ ಕಾಮನ್ವೆಲ್ತ್ ಗೇಮ್ಸ್ಗೂ ನಮ್ಮ ಹಣದಲ್ಲೇ ಹೋಗಿ ಬರುತ್ತೇವೆ’ ಎಂದು ಸ್ಪಷ್ಟಪಡಿಸಿದ್ದಾರೆ.
ಸೈನಾ ತಂದೆ ಹರ್ವೀರ್ ಮಾತನಾಡಿ, “ಗೋಲ್ಡ್ ಕೋಸ್ಟ್ ನಲ್ಲಿ ನನಗೆ ಸ್ನೇಹಿತರಿದ್ದಾರೆ. ಅವರ ಮನೆಯಿಂದಲೇ ಕೂಟ ವೀಕ್ಷಿಸಲು ತೆರಳುತ್ತೇನೆ. ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ಪಂದ್ಯ ನೋಡುತ್ತೇನೆ. ತಂಡದೊಂದಿಗೆ ಹೋಗುವುದಿಲ್ಲ. ರಿಯೋ ಒಲಿಂಪಿಕ್ಸ್ಗೂ ನಮ್ಮ ಕೈಯಿಂದಲೇ ಹಣ ಹಾಕಿ ಹೋಗಿದ್ದೆವು’ ಎಂದು ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.