ಬಿಸಿಸಿಐ ಮುಂದೆ ಬೇಷರತ್ ಕ್ಷಮೆಯಾಚಿಸಿದ ದಿನೇಶ್ ಕಾರ್ತಿಕ್
Team Udayavani, Sep 9, 2019, 5:29 AM IST
ಹೊಸದಿಲ್ಲಿ: ಕೆರಿಬಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಕೂಟದ ವೇಳೆ ಟ್ರಿನ್‌ಬಾಗೊ ನೈಟ್‌ರೈಡರ್ ತಂಡದ ಡ್ರೆಸ್ಸಿಂಗ್ ಕೊಠಡಿಯಲ್ಲಿ ಕಾಣಿಸಿಕೊಂಡು ವಿವಾದಕ್ಕೊಳಗಾಗಿದ್ದ ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಬೇಷರತ್ ಕ್ಷಮೆಯಾಚಿಸಿದ್ದಾರೆ.
ಬಿಸಿಸಿಐ ಬಳಿ ಅನುಮತಿ ಪಡೆಯದೆ ನಟ ಶಾರುಖ್ ಖಾನ್ ಒಡೆತನದ ತಂಡದ ಕಾರ್ಯಕ್ರಮದಲ್ಲಿ ದಿನೇಶ್ ಕಾರ್ತಿಕ್ ಕಾಣಿಸಿಕೊಂಡಿದ್ದರು. ಜತೆಗೆ ಟ್ರಿನ್‌ಬಾಗೊ ತಂಡದ ಜೆರ್ಸಿ ಕೂಡ ತೊಟ್ಟಿದ್ದರು. ಇದಕ್ಕೆ ಸಂಬಂಧಪಟ್ಟ ಫೋಟೋಗಳು ಬಿಡುಗಡೆಯಾಗಿದ್ದವು. ಇದರಿಂದ ಬಿಸಿಸಿಐ ಕಾರ್ತಿಕ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಬಿಸಿಸಿಐ ನೋಟಿಸ್‌ಗೆ ಉತ್ತರ
ಇದಕ್ಕೆ ಉತ್ತರಿಸಿದ ದಿನೇಶ್ ಕಾರ್ತಿಕ್, “ಬಿಸಿಸಿಐ ಬಳಿ ಅನುಮತಿ ಪಡೆಯದೆ ಹೋಗಿರುವುದಕ್ಕೆ ಬೇಷರತ್ ಕ್ಷಮೆಯಾಚಿಸುತ್ತಿದ್ದೇನೆ. ಟಿಕೆಆರ್ ತಂಡದ ಜತೆಗಿನ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಜತೆಗೆ ತಂಡದ ಆಡಳಿತ ವಿಷಯದಲ್ಲಿ ನಾನು ಯಾವುದೇ ಪಾತ್ರವನ್ನು ಹೊಂದಿಲ್ಲ. ಜತೆಗೆ ಡ್ರೆಸ್ಸಿಂಗ್ ಕೊಠಡಿಯಲ್ಲಿ ಇದ್ದಿದ್ದು ನಿಜ. ಆದರೆ ಮುಂದಿನ ಪಂದ್ಯಗಳಿಗಾಗಿ ಕಾದು ಕುಳಿತಿರಲಿಲ್ಲ’ ಎಂದು ಟ್ರೆನಿಡಾಡ್‌ನಿಂದ ಹೊರಡುವ ಮೊದಲು ಪತ್ರದ ಮೂಲಕ ಬಿಸಿಸಿಐಗೆ ಸ್ಪಷ್ಟಪಡಿಸಿದ್ದಾರೆ.
ಐಪಿಎಲ್‌ನಲ್ಲಿ ಶಾರುಖ್ ಒಡೆತನದ ಕೋಲ್ಕತಾ ನೈಟ್‌ರೈಡರ್ ತಂಡವನ್ನು ದಿನೇಶ್ ಕಾರ್ತಿಕ್ ಮುನ್ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.