ಪ್ಯಾರಾಲಂಪಿಕ್ಸ್ ನಲ್ಲಿ ಪದಕ ಗೆದ್ದ ಜಿಲ್ಲಾಧಿಕಾರಿ: ಹಾಸನದ ಸುಹಾಸ್ ಕಥೆಯೇ ರೋಚಕ
Team Udayavani, Sep 5, 2021, 9:20 AM IST
ಬೆಂಗಳೂರು: ಕರ್ನಾಟಕದ ಹಾಸನ ಜಿಲ್ಲೆಯವರಾದ ಸುಹಾಸ್ ಲಾಲಿನಕೆರೆ ಯತಿರಾಜ್ ಅವರು ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಎಸ್‌ಎಲ್4 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಇದರೊಂದಿಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂಬ ಗೌರವ ಪಡೆದಿದ್ದಾರೆ.
38 ವರ್ಷದ ಸುಹಾಸ್ ಪ್ರಸ್ತುತ ಉತ್ತರ ಪ್ರದೇಶದ ಗೌತಮಬುದ್ಧ ನಗರದ (ನೋಯ್ಡಾ) ಜಿಲ್ಲಾಧಿಕಾರಿ. ಸದ್ಯ ಅವರೀಗ ಎಸ್‌ಎಲ್4 ವಿಭಾಗದಲ್ಲಿ ವಿಶ್ವದ ನಂ.3 ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ.
ಟೋಕಿಯೊ ಸೆಮಿಫೈನಲ್ ಸೇರಿದಂತೆ ಆಡಿದ ಮೂರೂ ಪಂದ್ಯಗಳಲ್ಲಿ ಅವರು ಅದ್ಭುತ ಪ್ರದರ್ಶನವನ್ನೇ ನೀಡಿದ್ದಾರೆ. ಮೊದಲೆರಡು ಪಂದ್ಯಗಳಲ್ಲಿ ಗೆಲ್ಲಲು 20 ನಿಮಿಷ ತೆಗೆದುಕೊಂಡಿದ್ದರೆ, ಸೆಮಿಫೈನಲ್‌ನಲ್ಲಂತೂ ಇಂಡೊನೇಶ್ಯದ ಫ್ರೆಡಿ ಸೆತಿಯವಾನ್ ವಿರುದ್ಧ ಕೇವಲ 31 ನಿಮಿಷಗಳಲ್ಲಿ ಗೆದ್ದಿದ್ದಾರೆ. ಗೆಲುವಿನ ಅಂತರ 21-9, 21-15.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಗುಡ್ ನ್ಯೂಸ್ ; ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್
2007ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸುಹಾಸ್, ದುರ್ಬಲ ಕಾಲನ್ನು ಹೊಂದಿದ್ದಾರೆ. ಕಾಲಿನಲ್ಲಿ ತೀವ್ರ ಬಲಹೀನತೆಯಿದ್ದರೆ ಅಂತಹವರನ್ನು ಎಸ್‌ಎಲ್4 ವಿಭಾಗಕ್ಕೆ ಸೇರಿಸಲಾಗುತ್ತದೆ. ಇಂತಹ ಸಮಸ್ಯೆಗಳ ಮಧ್ಯೆಯೂ ಸುಹಾಸ್ ಐಎಎಸ್ ಅಧಿಕಾರಿಯಾಗಿದ್ದಾರೆ.
ಸುರತ್ಕಲ್‌ನಲ್ಲಿ ಎಂಜಿನಿಯರಿಂಗ್: ಮೂಲತಃ ಸುಹಾಸ್ ಕಂಪ್ಯೂಟರ್ ಎಂಜಿನಿಯರಿಂಗ್ ಪದವೀಧರ. ಪದವಿ ಪಡೆದದ್ದು ಸುರತ್ಕಲ್‌ನ ಎನ್‌ಐಟಿಕೆಯಲ್ಲಿ. ಜತೆಗೆ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್‌ನಲ್ಲಿ ಅದ್ಭುತ ಸಾಧನೆಗೈದಿದ್ದಾರೆ. ಸುಹಾಸ್ ಸಾಧನೆಗೆ ಐಎಎಸ್ ಅಧಿಕಾರಿಗಳ ಸಂಘ, ಸಾಮಾಜಿಕ ತಾಣಿಗರು ಭಾರೀ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸದ್ಯ ಗೌತಮ ಬುದ್ಧನಗರದ ಜಿಲ್ಲಾಧಿಕಾರಿಯಾಗಿರುವ ಸುಹಾಸ್ ಇದಕ್ಕೂ ಮುನ್ನ ಪ್ರಯಾಗ್‌ರಾಜ್, ಆಗ್ರಾ, ಅಝಮ್‌ಗಢ, ಜೌನ್‌ಪುರ, ಸೋನಭದ್ರಾದಲ್ಲೂ ಇದೇ ಹುದ್ದೆಯನ್ನು ನಿರ್ವಹಿಸಿದ್ದರು. ಕಳೆದ ಒಂದೂವರೆ ವರ್ಷದಿಂದ ಗೌತಮಬುದ್ಧ ನಗರದ ಜಿಲ್ಲಾಧಿಕಾರಿಯಾಗಿ ಕೋವಿಡ್ ನಿಗ್ರಹಕ್ಕೆ ಅವಿರತವಾಗಿ ದುಡಿದಿದ್ದಾರೆ.
ರಾತ್ರಿ ಹತ್ತರಿಂದ ಅಭ್ಯಾಸ!: ಒಂದು ಕಡೆ ಕೋವಿಡ್, ಅದನ್ನು ನಿಭಾಯಿಸಬೇಕಾಗಿರುವ ಗುರುತರ ಜಿಲ್ಲಾಧಿಕಾರಿಯ ಹೊಣೆ. ಇದರ ನಡುವೆ ಪ್ಯಾರಾಲಿಂಪಿಕ್ಸ್‌ಗೆ ತಯಾರಾಗುವುದು ಹೇಗೆ? ಇದು ಅವರು ಟೋಕಿಯೊ ವಿಮಾನ ಹತ್ತುವುದಕ್ಕಿಂತ ಮುನ್ನ ಪತ್ರಕರ್ತರ ಪ್ರಶ್ನೆಯಾಗಿತ್ತು. ಇದಕ್ಕೆ ಅವರು ಕೊಟ್ಟ ಉತ್ತರ ಬಹಳ ಕುತೂಹಲಕರವಾಗಿದೆ.
“ನಾನು ದಿನವಿಡೀ ಕೋವಿಡ್ ನಿಗ್ರಹ ಹಾಗೂ ಆಡಳಿತಾತ್ಮಕ ಸಂಗತಿಗಳಿಗಾಗಿ ಕರ್ತವ್ಯ ನಿರ್ವಹಿಸುತ್ತೇನೆ. ರಾತ್ರಿ ಹತ್ತರ ಅನಂತರ ಬ್ಯಾಡ್ಮಿಂಟನ್ ಅಭ್ಯಾಸ ಮಾಡುತ್ತೇನೆ. ಆಡಳಿತಾಧಿಕಾರಿಯಾಗಿ, ಆಟಗಾರನಾಗಿ ಎರಡೂ ಜವಾಬ್ದಾರಿಯನ್ನು ಕಳೆದ 6 ವರ್ಷಗಳಿಂದ ಸರಿಯಾಗಿಯೇ ನಿಭಾಯಿಸುತ್ತಿದ್ದೇನೆ’ ಎಂದಿದ್ದರು ಸುಹಾಸ್. ಇದೀಗ ಸುಹಾಸ್ ದೇಶಕ್ಕೆ ಕೀರ್ತಿ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.