ವಿಶ್ವ ನಾಯಕರೇ, ನಮ್ಮನ್ನು ಕೈಬಿಡಬೇಡಿ: ರಶೀದ್ ಮನವಿ
Team Udayavani, Aug 12, 2021, 6:55 AM IST
ದುಬಾೖ: ಅಫ್ಘಾನಿಸ್ಥಾನದಿಂದ ಅಮೆರಿಕದ ಸೇನಾ ಪಡೆಗಳು ವಾಪಸಾದ ಬಳಿಕ ಅಲ್ಲಿ ತಾಲಿಬಾನಿಗಳು ಮತ್ತು ದೇಶದ ಮಿಲಿಟರಿ ನಡುವೆ ಸಂಘರ್ಷ ತಾರಕಕ್ಕೇರಿದೆ.
ಎಲ್ಲೆಡೆ ಆತಂಕದ ವಾತಾವರಣ ಕಂಡುಬಂದಿದೆ. ಅಲ್ಲಿನ ಕ್ರಿಕೆಟ್ ಕೂಡ ಸಂಕಷ್ಟಕ್ಕೆ ಸಿಲುಕಿದೆ. ಈ ಸಂದರ್ಭದಲ್ಲಿ ಅಲ್ಲಿನ ಖ್ಯಾತ ಕ್ರಿಕೆಟಿಗ ರಶೀದ್ ಖಾನ್ ಟ್ವೀಟ್ ಮಾಡಿ, ತಮ್ಮ ದೇಶವಾಸಿಗಳನ್ನು ಇಂಥ ಸಂಕಷ್ಟದ ಸಂದರ್ಭದಲ್ಲಿ ಕೈಬಿಡಬೇಡಿ ಎಂದು ಜಾಗತಿಕ ನಾಯಕರಲ್ಲಿ ಮನವಿ ಮಾಡಿದ್ದಾರೆ.
“ಪ್ರೀತಿಯ ವಿಶ್ವ ನಾಯಕರೇ, ನನ್ನ ದೇಶದಲ್ಲಿ ಅರಾಜಕತೆ ಮೇರೆ ಮೀರಿದೆ. ಪ್ರತಿದಿನವೂ ಅಮಾಯಕ ಜನರು, ಮಕ್ಕಳು ಬಲಿಯಾಗುತ್ತಿದ್ದಾರೆ. ಮನೆ, ಆಸ್ತಿಗಳನ್ನು ನಾಶಪಡಿಸಲಾಗುತ್ತಿದೆ. ಸಾವಿರಾರು ಕುಟುಂಬಗಳು ನಿರ್ಗತಿಕವಾಗಿವೆ. ನಮ್ಮನ್ನು ಈ ರೀತಿ ಅರಾಜಕತೆಯಲ್ಲಿ ಬಿಟ್ಟುಬಿಡಬೇಡಿ. ಅಫ್ಘಾನಿಯರನ್ನು ಹತ್ಯೆ ಮಾಡುವುದನ್ನು ಹಾಗೂ ಅಫ್ಘಾನಿಸ್ಥಾನವನ್ನು ನಾಶಪಡಿಸುವುದನ್ನು ನಿಲ್ಲಿಸಿ. ಇಂಥ ಸಂಕಷ್ಟದ ಕಾಲದಲ್ಲಿ ನಮ್ಮನ್ನು ಕೈಬಿಡಬೇಡಿ. ನಮಗೆ ಶಾಂತಿ ಬೇಕಿದೆ’ ಎಂದು ರಶೀದ್ ಕಳಕಳಿಯಿಂದ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.