ಮತ್ತೆ ದ್ವಿಶತಕ ಬಾರಿಸಿದ ದ್ರಾವಿಡ್ ಪುತ್ರ ಸಮಿತ್
Team Udayavani, Feb 18, 2020, 11:41 PM IST
ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಮಗ ತಂದೆಯಂತೆ ಮಿಂಚುತ್ತಿದ್ದು ಕೇವಲ ಎರಡು ತಿಂಗಳ ಅಂತರದಲ್ಲಿ ಎರಡನೇ ದ್ವಿಶತಕ ಬಾರಿಸಿದ್ದಾರೆ.
14 ವರ್ಷದೊಳಗಿನವರ ಬಿಟಿರ್ ಶೀಲ್ಡ್ ಟೂರ್ನಿಯಲ್ಲಿ ಮಲ್ಯ ಅದಿತಿ ಇಂಟರ್ನ್ಯಾಶನಲ್ ಸ್ಕೂಲ್ ಮತ್ತು ಶ್ರೀ ಕುಮಾರನ್ ಶಾಲಾ ತಂಡಗಳ ನಡುವೆ ಮಂಗಳವಾರ ನಡೆದ ಪಂದ್ಯದಲ್ಲಿ ಸಮಿತ್ ದ್ರಾವಿಡ್ ಅಮೋಘ ದ್ವಿಶತಕ ದಾಖಲಿಸಿದ್ದಾರೆ. ಒಟ್ಟು 33 ಬೌಂಡರಿಗಳ ನೆರವಿನಿಂದ ಸಮಿತ್ ಮನಮೋಹಕ 204 ರನ್ ಗಳಿಸಿದರು.
ಮೊದಲು ಬ್ಯಾಟಿಂಗ್ ನಡೆಸಿದ ಮಲ್ಯ ಅದಿತಿ ಅಂತಾರಾಷ್ಟ್ರೀಯ ಶಾಲೆ ತಂಡ ಮೂರು ವಿಕೆಟ್ ನಷ್ಟಕ್ಕೆ 377 ರನ್ಗಳ ಬೃಹತ್ ಮೊತ್ತ ದಾಖಲಿಸಿತು. ಗುರಿ ಬೆನ್ನತ್ತಿದ ಶ್ರೀ ಕುಮಾರನ್ ಶಾಲಾ ತಂಡ 110 ರನ್ಗಳಿಗೆ ಆಲೌಟಾಯಿತು. ಬೌಲಿಂಗ್ನಲ್ಲಿಯೂ ಮಿಂಚಿದ ಸುಮಿತ್ ಎರಡು ವಿಕೆಟ್ ಉರುಳಿಸಿದರು. ಇದರಿಂದಾಗಿ ಮಲ್ಯ ಅದಿತಿ ಶಾಲೆ 267 ರನ್ನುಗಳಿಂದ ಜಯಭೇರಿ ಬಾರಿಸಿತು.
ಕಳೆದ ಡಿಸೆಂಬರ್ನಲ್ಲಿ ಕೋಲ್ಕತಾ ದಲ್ಲಿ ನಡೆದ 14 ವರ್ಷದೊಳಗಿನವರ ರಾಜ್ಯ ಮಟ್ಟದ ಅಂತರ್ ವಲಯ ಟೂರ್ನಿಯ ಪಂದ್ಯವೊಂದರಲ್ಲಿ ಸಮಿತ್ (201) ದ್ವಿಶತಕ ಮತ್ತು 3 ವಿಕೆಟ್ ಪಡೆದಿದ್ದರು. ಈ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತ್ತು. ಸಮಿತ್ ದ್ವಿತೀಯ ಇನ್ನಿಂಗ್ಸ್ನಲ್ಲಿ 94 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.