ರಣಜಿ ಪಂದ್ಯ: ಕರ್ನಾಟಕ-ಯುಪಿ ಪಂದ್ಯ ನೀರಸ ಡ್ರಾ

ಶೌಕತ್‌ ಅಜೇಯ ಶತಕ ; ಇನ್ನಿಂಗ್ಸ್‌ ಮುನ್ನಡೆಗಾಗಿ ಕರ್ನಾಟಕಕ್ಕೆ 3 ಅಂಕ

Team Udayavani, Dec 20, 2019, 7:36 PM IST

DC-7

ಹುಬ್ಬಳ್ಳಿ: ಇಲ್ಲಿ ನಡೆದ ಕರ್ನಾಟಕ-ಉತ್ತರಪ್ರದೇಶ ನಡುವಿನ ರಣಜಿ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯ ಕಂಡಿದೆ. ಮೊದಲ ಇನ್ನಿಂಗ್ಸ್‌ ಮುನ್ನಡೆಗಾಗಿ ರಾಜ್ಯ ತಂಡ 3 ಅಂಕ ಗಳಿಸಿದರೆ, ಯುಪಿ ಒಂದಂಕ ಪಡೆಯಿತು.

40 ರನ್‌ ಹಿನ್ನಡೆಗೆ ಸಿಲುಕಿದ ಉತ್ತರಪ್ರದೇಶ ದ್ವಿತೀಯ ಇನ್ನಿಂಗ್ಸ್‌ನಲ್ಲಿ 3 ವಿಕೆಟಿಗೆ 204 ರನ್‌ ಮಾಡಿತ್ತು. ಆರಂಭಕಾರ ಅಲ್ಮಾಸ್‌ ಶೌಕತ್‌ ಅವರ ಶತಕ ಪೂರ್ತಿಗೊಂಡೊಡನೆ ಪಂದ್ಯವನ್ನು ಕೊನೆಗೊಳಿಸಲು ನಿರ್ಧರಿಸಲಾಯಿತು. ಆಗ ಚಹಾ ವಿರಾಮದ ಸಮಯವಾಗಿತ್ತು. ಪಂದ್ಯ ಮುಂದುವರಿದರೂ ಸ್ಪಷ್ಟ ಫ‌ಲಿತಾಂಶ ದೊರಕುವ ಯಾವುದೇ ಸಾಧ್ಯತೆ ಇರದ ಕಾರಣ ಉಭಯ ತಂಡಗಳ ನಾಯಕರು ಪಂದ್ಯವನ್ನು ಇಲ್ಲಿಗೇ ನಿಲ್ಲಿಸುವ ನಿರ್ಧಾರಕ್ಕೆ ಬಂದರು.

ಉತ್ತರಪ್ರದೇಶದ 281 ರನ್ನುಗಳ ಮೊದಲ ಇನ್ನಿಂಗ್ಸಿಗೆ ಜವಾಬಾಗಿ ಕರ್ನಾಟಕ 321 ರನ್‌ ಪೇರಿಸಿತ್ತು. ಯುಪಿ ಒಂದಕ್ಕೆ 29 ರನ್‌ ಗಳಿಸಿದಲ್ಲಿಂದ ಕೊನೆಯ ದಿನದಾಟ ಮುಂದುವರಿಸಿತ್ತು.

ಶೌಕತ್‌ ಶತಕ ಸಾಹಸ
ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ ಆರಂಭಕಾರ ಆರ್ಯನ್‌ ಜುಯಾಲ್‌ ಅವರು° ಸೊನ್ನೆಗೆ ಕಳೆದುಕೊಂಡ ಬಳಿಕ ಮತ್ತೂಬ್ಬ ಓಪನರ್‌ ಅಲ್ಮಾಸ್‌ ಶೌಕತ್‌ ತಂಡದ ನೆರವಿಗೆ ನಿಂತರು. ಕರ್ನಾಟಕದ ಬೌಲಿಂಗ್‌ ದಾಳಿಯನ್ನು ದಿಟ್ಟ ರೀತಿಯಲ್ಲಿ ನಿಭಾಯಿಸಿದ ಅವರು 210 ಎಸೆತಗಳಿಂದ 2ನೇ ಪ್ರಥಮ ದರ್ಜೆ ಶತಕವನ್ನು ಪೂರ್ತಿಗೊಳಿಸಿದರು. ಇದರಲ್ಲಿ 14 ಬೌಂಡರಿ, ಒಂದು ಸಿಕ್ಸರ್‌ ಸೇರಿತ್ತು.

ಮಾಧವ್‌ ಕೌಶಿಕ್‌ (45) ಮತ್ತು ಅಕ್ಷದೀಪ್‌ ನಾಥ್‌ (38) ಅವರ ನೆರವಿನೊಂದಿಗೆ ಶೌಕತ್‌ 2 ಉತ್ತಮ ಜತೆಯಾಟ ನಿಭಾಯಿಸಿದರು. 2ನೇ ವಿಕೆಟಿಗೆ 82 ರನ್‌, 3ನೇ ವಿಕೆಟಿಗೆ 77 ರನ್‌ ಒಟ್ಟುಗೂಡಿಸಿ ಕರ್ನಾಟಕದ ಯೋಜನೆಯನ್ನು ವಿಫ‌ಲಗೊಳಿಸಿದರು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಯುಪಿ ಒಟ್ಟು 69.1 ಓವರ್‌ ನಿಭಾಯಿಸಿತು.

6 ವಿಕೆಟ್‌ ಜತೆಗೆ ಅಜೇಯ 34 ರನ್‌ ಬಾರಿಸಿ ಆಲ್‌ರೌಂಡ್‌ ಪ್ರದರ್ಶನವಿತ್ತ ಅಭಿಮನ್ಯು ಮಿಥುನ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಕರ್ನಾಟಕ ತನ್ನ ಮುಂದಿನ ಪಂದ್ಯವನ್ನು ಹಿಮಾಚಲಪ್ರದೇಶ ವಿರುದ್ಧ ಮೈಸೂರಿನಲ್ಲಿ ಆಡಲಿದೆ. ಡಿ. 25ರಿಂದ 28ರ ತನಕ ಈ ಪಂದ್ಯ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್‌: ಉತ್ತರಪ್ರದೇಶ-281 ಮತ್ತು 3 ವಿಕೆಟಿಗೆ 204 (ಶೌಕತ್‌ 103, ಕೌಶಿಕ್‌ 45, ಅಕ್ಷದೀಪ್‌ 38, ಮಥಾಯಿಸ್‌ 27ಕ್ಕೆ 1, ಮೋರೆ 52ಕ್ಕೆ 1, ಗೋಪಾಲ್‌ 61ಕ್ಕೆ 1). ಪಂದ್ಯಶ್ರೇಷ್ಠ: ಅಭಿಮನ್ಯು ಮಿಥುನ್‌.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.