ಲಂಕೆಗೆ 1 ವಿಕೆಟ್ ರೋಚಕ ಗೆಲುವು
Team Udayavani, Feb 17, 2019, 12:30 AM IST
ಕಿಂಗ್ಸ್ಮೇಡ್: ಕುಸಲ್ ಪೆರೆರ ಅವರ ಸಾಹಸದ ಶತಕದ ನೆರವಿನಿಂದ ಶ್ರೀಲಂಕಾ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಡರ್ಬನ್ ಟೆಸ್ಟ್ನಲ್ಲಿ ಒಂದು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿ ಸಂಭ್ರಮಿಸಿದೆ. ಪೆರೆರ ಅವರ ಜೀವನಶ್ರೇಷ್ಠ ಅಜೇಯ 153 ರನ್ ಮತ್ತು ಅವರು ವಿಶ್ವ ಫೆರ್ನಾಂಡೊ ಜತೆ ಮುರಿಯದ ಕೊನೆಯ ವಿಕೆಟಿಗೆ ಪೇರಿಸಿದ 78 ರನ್ನುಗಳ ಆಟದಿಂದಾಗಿ ಶ್ರೀಲಂಕಾ ತಂಡವು ದಕ್ಷಿಣ ಆಫ್ರಿಕಾ ನೆಲದಲ್ಲಿ ಆಡಿದ 14 ಟೆಸ್ಟ್ ಪಂದ್ಯಗಳಲ್ಲಿ ತನ್ನ ಎರಡನೇ ಗೆಲುವು ಒಲಿಸಿಕೊಂಡಿತು. ಗೆಲ್ಲಲು 304 ರನ್ ಗಳಿಸುವ ಗುರಿ ಪಡೆದ ಶ್ರೀಲಂಕಾ ತಂಡವು 3 ವಿಕೆಟಿಗೆ 83 ರನ್ನಿನಿಂದ ನಾಲ್ಕನೇ ದಿನದ ಆಟ ಆರಂಭಿಸಿತ್ತು. ಒಂದು ಕಡೆಯಿಂದ ವಿಕೆಟ್ ಉರುಳುತ್ತಿದ್ದರೂ ಕುಸಲ್ ಪೆರೆರ ಕ್ರೀಸ್ನಲ್ಲಿ ಗಟ್ಟಿಯಾಗಿ ನಿಂತು ತಂಡದ ಗೆಲುವಿಗಾಗಿ ಹೋರಾಡಿದರು.
ಧನಂಜಯ ಡಿ’ಸಿಲ್ವ ಮತ್ತು ಕುಸಲ್ 6ನೇ ವಿಕೆಟಿಗೆ 96 ರನ್ ಪೇರಿಸಿದ್ದರೂ ತಂಡ ಗೆಲುವಿನಿಂದ ದೂರವೇ ಉಳಿದಿತ್ತು. 226 ರನ್ನಿಗೆ 9ನೇ ವಿಕೆಟ್ ಉರುಳಿದಾಗ ಲಂಕೆಗೆ ಸೋಲು ಖಚಿತವೆಂದು ಭಾವಿಸಲಾಗಿತ್ತು. ಆದರೆ ಕುಸಲ್ ಮತ್ತು ವಿಶ್ವ ಫೆರ್ನಾಂಡೊ ನಿರೀಕ್ಷೆಗೂ ಮೀರಿದ ಬ್ಯಾಟಿಂಗ್ ಪ್ರದರ್ಶಿಸಿ ಲಂಕೆಗೆ ಅದ್ಭುತ ಗೆಲುವೊಂದನ್ನು ತಂದುಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.