ಜಮ್ಮು-ಕಾಶ್ಮೀರ ಕ್ರಿಕೆಟ್ ಅಕ್ರಮ: ಫಾರೂಕ್ ಅಬ್ದುಲ್ಲಾಗೆ ಸೇರಿದ 11.86 ಕೋ.ರೂ. ಆಸ್ತಿ ವಶ
Team Udayavani, Dec 20, 2020, 9:30 AM IST
ಹೊಸದಿಲ್ಲಿ: ಜಮ್ಮು-ಕಾಶ್ಮೀರ ಕ್ರಿಕೆಟ್ ಸಂಸ್ಥೆಯಲ್ಲಿ ಅಕ್ರಮ ಹಣ ಸಾಗಣೆ ನಡೆಸಿರುವ ಆರೋಪದಲ್ಲಿ, ಅಲ್ಲಿನ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮತ್ತು ಇತರರಿಗೆ ಸೇರಿದ 11.86 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ.
ಜಮ್ಮು ಮತ್ತು ಶ್ರೀನಗರದಲ್ಲಿರುವ ಈ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಇಡಿ ತಾತ್ಕಾಲಿಕ ಆದೇಶ ಹೊರಡಿಸಿದೆ. 83 ವರ್ಷದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಹಿರಿಯ ನಾಯಕ ಅಬ್ದುಲ್ಲಾರನ್ನು, ಇದೇ ಪ್ರಕರಣದಲ್ಲಿ ಅಕ್ಟೋಬರ್‌ನಲ್ಲೊಮ್ಮೆ ವಿಚಾರಣೆಗೊಳಪಡಿಸಲಾಗಿತ್ತು.
ಇದನ್ನೂ ಓದಿ:ಮಗುಚಿ ಬಿದ್ದ ಟಾಟಾ ಏಸ್ ವಾಹನ: 12 ಮಂದಿಗೆ ಗಾಯ, ನಾಲ್ವರು ಮಹಿಳೆಯರು ಗಂಭೀರ
ಪ್ರಸ್ತುತ ಆಸ್ತಿಗಳನ್ನು ಅಕ್ರಮ ಹಣ ಸಾಗಣೆ ನಿಗ್ರಹ ಕಾಯ್ದೆಯಡಿ ವಶಪಡಿಸಿಕೊಳ್ಳಲಾಗಿದೆ. ಈ ಆಸ್ತಿಗಳ ಪೈಕಿ ಎರಡು ಸ್ಥಿರಾಸ್ತಿಗಳು ವಸತಿ ಸ್ಥಾನಗಳಾಗಿವೆ. ಇನ್ನೊಂದು ವಾಣಿಜ್ಯ ಮಹತ್ವ ಹೊಂದಿದೆ. ಇನ್ನೂ ಮೂರು ಜಾಗಗಳೂ ಇಡಿಯ ವಶಕ್ಕೆ ಹೋಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20; ಸ್ಯಾಮ್ಸನ್ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ
Pro Kabaddi: ಜೈಪುರ್ ಮೇಲೆ ಪಾಟ್ನಾ ಸವಾರಿ
ODI; ಹ್ಯಾರಿಸ್ ರೌಫ್ ಗೆ ಹೆದರಿದ ಆಸೀಸ್ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.