ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ಗೆ ಸೋಲು: ಸ್ಟೋಕ್ಸ್ ವಿದಾಯ
Team Udayavani, Jul 20, 2022, 11:00 PM IST
ಚೆಸ್ಟರ್ ಲೀ ಸ್ಟ್ರೀಟ್: ಪ್ರವಾಸಿ ದಕ್ಷಿಣ ಆಫ್ರಿಕಾ ತಂಡೆದುರಿನ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 62 ರನ್ನುಗಳಿಂದ ಸೋಲನ್ನು ಕಂಡಿದೆ.
ಇದು ಬೆನ್ ಸ್ಟೋಕ್ಸ್ ಅವರ ವಿದಾಯ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ತಂಡ ಸೋತಿರವುದು ಅವರಿಗೆ ತೀವ್ರ ನೋವು ತಂದಿದೆ. ಆದರೆ ಅವರು ತನ್ನ ತವರಿನ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮಿಂಚಲು ವಿಫಲರಾಗಿದ್ದರು.
ರಸಿ ವಾನ್ ಡರ್ ಡ್ಯುಸೆನ್ ಅವರ ಭರ್ಜರಿ ಶತಕದಿಂದಾಗಿ ದಕ್ಷಿಣ ಆಫ್ರಿಕಾವು 5 ವಿಕೆಟಿಗೆ 333 ರನ್ನುಗಳ ಬೃಹತ್ ಮೊತ್ತ ಪೇರಿಸಿತ್ತು. ಇದಕ್ಕುತ್ತರವಾಗಿ ಆರಂಭಿಕ ಆಟಗಾರರಾದ ಜಾನಿ ಬೇರ್‌ಸ್ಟೋ, ಜೋ ರೂಟ್ ಅವರ ಉತ್ತಮ ಆಟದ ಹೊರತಾಗಿಯೂ ಇಂಗ್ಲೆಂಡ್ ತಂಡವು 46.5 ಓವರ್‌ಗಳಲ್ಲಿ 271 ರನ್ನಿಗೆ ಆಲೌಟಾಗಿ ಶರಣಾಯಿತು.
ಈ ಗೆಲುವಿನಿಂದ ದಕ್ಷಿಣ ಆಫ್ರಿಕಾವು ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಸರಣಿಯ ದ್ವಿತೀಯ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ಜು. 22ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.