Harry Brook ಹೆಗಲಿಗೆ ಇಂಗ್ಲೆಂಡ್ ನಾಯಕತ್ವ
Team Udayavani, Sep 17, 2024, 1:58 AM IST
ಲಂಡನ್: ಮಧ್ಯಮ ಕ್ರಮಾಂಕದ ಬ್ಯಾಟರ್ ಹ್ಯಾರಿ ಬ್ರೂಕ್ ಮೊದಲ ಸಲ ಇಂಗ್ಲೆಂಡ್ ತಂಡವನ್ನು ಮುನ್ನಡೆಸುವ ಅವಕಾಶ ಪಡೆದಿದ್ದಾರೆ. ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಿಂದ ಜಾಸ್ ಬಟ್ಲರ್ ಬೇರ್ಪಟ್ಟ ಕಾರಣ ಬ್ರೂಕ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ.
ಗಾಯಾಳು ಜಾಸ್ ಬಟ್ಲರ್ ಆಸೀಸ್ ಎದುರಿನ ಟಿ20 ಸರಣಿಯಲ್ಲೂ ಆಡಿರಲಿಲ್ಲ. ಇವರ ಗೈರಲ್ಲಿ ಲಿಯಮ್ ಲಿವಿಂಗ್‌ಸ್ಟೋನ್ ಅವರಿಗೆ ಏಕದಿನ ತಂಡದಲ್ಲಿ ಮರಳಿ ಅವಕಾಶ ಲಭಿಸಿದೆ.
ಹ್ಯಾರಿ ಬ್ರೂಕ್ ಈವರೆಗೆ ಕೇವಲ 15 ಏಕದಿನ ಪಂದ್ಯಗಳನ್ನಾಡಿದ್ದಾರೆ. 3 ಅರ್ಧ ಶತಕ ಸೇರಿದಂತೆ 407 ರನ್ ಗಳಿಸಿದ್ದಾರೆ.ಸರಣಿಯ ಮೊದಲ ಪಂದ್ಯ ಸೆ. 19ರಂದು ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ.
ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಫ್ರ ಆರ್ಚರ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್, ಜೋರ್ಡನ್ ಕಾಕ್ಸ್, ಬೆನ್ ಡಕೆಟ್, ವಿಲ್ ಜಾಕ್ಸ್, ಲಿಯಮ್ ಲಿವಿಂಗ್‌ಸ್ಟೋನ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೇಮಿ ಸ್ಮಿತ್, ಓಲೀ ಸ್ಟೋನ್, ರೀಸ್ ಟಾಪ್ಲಿ, ಜಾನ್ ಟರ್ನರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.