ಮೊದಲ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ

Team Udayavani, Jul 27, 2018, 6:30 AM IST

ecb.jpg

ಎಜ್‌ಬಾಸ್ಟನ್‌: ಪ್ರವಾಸಿ ಭಾರತ ವಿರುದ್ಧ ಆ. 1ರಿಂದ ಎಜ್‌ಬಾಸ್ಟನ್‌ನಲ್ಲಿ ಆರಂಭವಾಗುವ ಮೊದಲ ಟೆಸ್ಟ್‌ ಪಂದ್ಯಕ್ಕೆ 13 ಸದಸ್ಯರ ಇಂಗ್ಲೆಂಡ್‌ ತಂಡವನ್ನು ಪ್ರಕಟಿಸಲಾಗಿದೆ. 2016ರ ಬಳಿಕ ಇದೇ ಮೊದಲ ಬಾರಿ ಅದಿಲ್‌ ರಶೀದ್‌ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಎಸೆಕ್ಸ್‌ನ ಸೀಮರ್‌ ಜೆಮೀ ಪೋರ್ಟರ್‌ಗಿದು ಚೊಚ್ಚಲ ಟೆಸ್ಟ್‌ ಪಂದ್ಯದ ಸಂಭ್ರಮವಾಗಿದೆ.

ರಶೀದ್‌ ಅವರ ಸೇರ್ಪಡೆ ಎಲ್ಲರಿಗೂ ಆಶ್ಚರ್ಯವಾಗಿದೆ. ಭಾರತ ವಿರುದ್ಧ ಈ ಹಿಂದೆ ಉತ್ತಮ ನಿರ್ವಹಣೆ ದಾಖಲಿಸಿದ್ದ ಮೊಯಿನ್‌ ಅಲಿ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. 2014ರಲ್ಲಿ ಭಾರತ ವಿರುದ್ಧ ನಡೆದ ಟೆಸ್ಟ್‌ ಸರಣಿಯಲ್ಲಿ ಅವರು 23 ಸರಾಸರಿಯಂತೆ 19 ವಿಕೆಟ್‌ ಉರುಳಿಸಿದ್ದರು. ಇದು ಅವರ ಮೊದಲ ಟೆಸ್ಟ್‌ ಸರಣಿಯಾಗಿತ್ತು.

ಒಂದು ವೇಳೆ ರಶೀದ್‌ ಎಜ್‌ಬಾಸ್ಟನ್‌ನಲ್ಲಿ ಆಡಿದರೆ ಇಂಗ್ಲೆಂಡ್‌ ಅವಳಿ ಸ್ಪಿನ್‌ ದಾಳಿಯೊಂದಿಗೆ ಭಾರತವನ್ನು ಎದುರಿಸುವ ಸಾಧ್ಯತೆಯಿದೆ. ತವರಿನ ಟೆಸ್ಟ್‌ನಲ್ಲಿ ರಶೀದ್‌ ಆಡುತ್ತಿರುವುದು ಇದೇ ಮೊದಲ ಸಲವಾಗಿದೆ. ಈ ಹಿಂದೆ ಆಡಿದ 10 ಟೆಸ್ಟ್‌ ಪಂದ್ಯಗಳು ವಿದೇಶಿ ನೆಲದಲ್ಲಿ ಆಗಿದೆ. 2015-16ರಲ್ಲಿ ಯುಎಇಯಲ್ಲಿ ಪಾಕಿಸ್ಥಾನ ವಿರುದ್ಧ ಅವರು ಟೆಸ್ಟ್‌ಗೆ ಪಾದಾರ್ಪಣೆಗೈದಿದ್ದರು.

ಕಳೆದ ಫೆಬ್ರವರಿಯಲ್ಲಿ ಯಾರ್ಕ್‌ಶೈರ್‌ ಜತೆ ಏಕದಿನ ಕ್ರಿಕೆಟ್‌ ಆಡಲು ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ರಶೀದ್‌ ಟೆಸ್ಟ್‌ ಕ್ರಿಕೆಟ್‌ ಆಡದಿದ್ದರೂ ಅವರ ಸಾಮರ್ಥ್ಯ, ವೈಟ್‌ ಬಾಲ್‌ ಫಾರ್ಮ್ನ ಆಧಾರದಲ್ಲಿ ಟೆಸ್ಟ್‌ಗೆ ಆಯ್ಕೆ ಮಾಡಲಾಗಿದೆ ಎಂದು ನೂತನ ರಾಷ್ಟ್ರೀಯ ಆಯ್ಕೆಗಾರ ಎಡ್‌ ಸ್ಮಿತ್‌ ಹೇಳಿದ್ದಾರೆ. ಕಳೆದ ಮೇ ತಿಂಗಳಲ್ಲಿ ಪಾಕಿಸ್ಥಾನ ಸರಣಿಗೆ ಜೋಸ್‌ ಬಟ್ಲರ್‌ ಅವರನ್ನು ಇದೇ ರೀತಿ ಆಯ್ಕೆ ಮಾಡಿ ತಂಡ ಯಶಸ್ಸು ಸಾಧಿಸಿತ್ತು.

ಇಂಗ್ಲೆಂಡ್‌ ತಂಡ
ಜೋ ರೂಟ್‌ (ನಾಯಕ), ಮೊಯಿನ್‌ ಅಲಿ, ಜೇಮ್ಸ್‌ ಆ್ಯಂಡರ್ಸನ್‌, ಜಾನಿ ಬೇರ್‌ಸ್ಟೊ, ಸ್ಟುವರ್ಟ್‌ ಬ್ರಾಡ್‌, ಜೋಸ್‌ ಬಟ್ಲರ್‌, ಅಲಸ್ಟೇರ್‌ ಕುಕ್‌, ಸ್ಯಾಮ್‌ ಕ್ಯುರಾನ್‌, ಕೀಟನ್‌ ಜೆನ್ನಿಂಗ್ಸ್‌, ಡೇವಿಡ್‌ ಮಾಲನ್‌, ಜೆಮೀ ಪೋರ್ಟರ್‌, ಅದಿಲ್‌ ರಶೀದ್‌, ಬೆನ್‌ ಸ್ಟೋಕ್ಸ್‌

ಟಾಪ್ ನ್ಯೂಸ್

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.