FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ
Team Udayavani, Oct 2, 2023, 4:11 PM IST
ಮಣಿಪಾಲ: ಆಧುನಿಕ ಕ್ರಿಕೆಟ್ ಜಗತ್ತಿನ ಫ್ಯಾಬ್ ಫೋರ್ ಎಂದರೆ ಅದು ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್, ಜೋ ರೂಟ್ ಮತ್ತು ಕೇನ್ ವಿಲಿಯಮ್ಸನ್. ಕಳೆದೊಂದು ದಶಕದಿಂದ ಕ್ರಿಕೆಟ್ ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ಈ ನಾಲ್ವರು ಕ್ರಿಕೆಟ್ ಲೋಕದ ಐಕಾನ್ ಗಳು.
2023 ಐಸಿಸಿ ಏಕದಿನ ವಿಶ್ವಕಪ್ ಕೂಟವು ಅಕ್ಟೋಬರ್ 5ರಿಂದ ಆರಂಭವಾಗಲಿದೆ. ಭಾರತದ ಆತಿಥ್ಯದಲ್ಲಿ ನಡೆಯಲಿರುವ ಮೆಗಾ ಕ್ರಿಕೆಟ್ ಕೂಟದಲ್ಲಿ ಒಟ್ಟು ಹತ್ತು ತಂಡಗಳು ಭಾಗವಹಿಸಲಿದೆ. ಸ್ಟಾರ್ ಆಟಗಾರರ ನಡುವೆ ಎಲ್ಲರ ಚಿತ್ತ ಈ ನಾಲ್ಕು ಆಟಗಾರರ ಮೇಲಿದೆ. ಹಾಗಾದರೆ ವಿಶ್ವಕಪ್ ನಲ್ಲಿ ಈ ನಾಲ್ವರ ಪ್ರದರ್ಶನ, ದಾಖಲೆಗಳು ಹೇಗಿದೆ? ಇಲ್ಲಿದೆ ಮಾಹಿತಿ.
ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ 26 ಪಂದ್ಯಗಳಲ್ಲಿ 46.8 ಸರಾಸರಿಯಲ್ಲಿ 2 ಶತಕ ಮತ್ತು 6 ಅರ್ಧಶತಕಗಳೊಂದಿಗೆ 1,030 ರನ್ ಗಳಿಸಿದ್ದಾರೆ.
ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ 17 ವಿಶ್ವಕಪ್ ಪಂದ್ಯಗಳಲ್ಲಿ 54.14 ಸರಾಸರಿಯಲ್ಲಿ 3 ಶತಕ ಮತ್ತು 3 ಅರ್ಧಶತಕಗಳೊಂದಿಗೆ 758 ರನ್ ಗಳಿಸಿದ್ದಾರೆ.
ನ್ಯೂಜಿಲ್ಯಾಂಡ್ ಕೇನ್ ವಿಲಿಯಮ್ಸನ್ 2019 ರ ಏಕದಿನ ವಿಶ್ವಕಪ್ ನಿಂದ ಉಳಿದಿರುವ ಏಕೈಕ ನಾಯಕ. ವಿಲಿಯಮ್ಸನ್ ವಿಶ್ವಕಪ್ ನಲ್ಲಿ 23 ಪಂದ್ಯಗಳಲ್ಲಿ 56.93 ಸರಾಸರಿಯಲ್ಲಿ 2 ಶತಕ ಮತ್ತು 3 ಅರ್ಧಶತಕಗಳೊಂದಿಗೆ 911 ರನ್ ಗಳಿಸಿದ್ದಾರೆ.
ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ 24 ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ 46.33 ಸರಾಸರಿಯಲ್ಲಿ 1 ಶತಕ ಮತ್ತು 8 ಅರ್ಧಶತಕಗಳೊಂದಿಗೆ 834 ರನ್ ಗಳಿಸಿದ್ದಾರೆ.
ಈ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಅವರು ಸಚಿನ್ ತೆಂಡೂಲ್ಕರ್ ಅವರ ಏಕದಿನ ದಾಖಲೆ ಮುರಿಯುವ ಸಾಧ್ಯತೆಯಿದೆ. ವಿರಾಟ್ ಕೊಹ್ಲಿ ಅವರು ಏಕದಿನ ಕ್ರಿಕೆಟ್ ನಲ್ಲಿ 47 ಶತಕ ಬಾರಿಸಿದ್ದು, ಇನ್ನು ಮೂರು ಶತಕ ಗಳಿಸಿದರೆ 50 ಶತಕ ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆ ಬರೆಯಲಿದ್ದಾರೆ. ಸಚಿನ್ ತೆಂಡೂಲ್ಕರ್ ಅವರು 49 ಶತಕಳೊಂದಿಗೆ ಸದ್ಯ ಮೊದಲ ಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.