ಅಂತಿಮ ಏಕದಿನ: ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ
Team Udayavani, Jan 17, 2019, 10:37 AM IST
ಮೆಲ್ಬೋರ್ನ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ಶುಕ್ರವಾರ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಅಂತಿಮ 12 ಸದಸ್ಯರ ತಂಡ ಪ್ರಕಟಿಸಿರುವ ಆಸೀಸ್ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ.
ಮೊದಲೆರಡು ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದ ನಥಾನ್ ಲಯಾನ್ ಒಂದೂ ವಿಕೆಟ್ ಪಡೆದಿರಲಿಲ್ಲ. ಹೀಗಾಗಿ ಅಂತಿಮ ಪಂದ್ಯದಲ್ಲಿ ಲಯಾನ್ ಬದಲಿಗೆ ಆಡಂ ಜಂಪಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ವೇಗಿ ಜೇಸನ್ ಬೆಹ್ರಾಂಡಾಫ್ ಬದಲಿಗೆ ಬಿಲ್ಲಿ ಸ್ಟಾನ್ಲೆಕ್ ಅಂತಿಮ 12ರಲ್ಲಿ ಕಾಣಿಸಿಕೊಂಡಿದ್ದಾರೆ.
ಸರಣಿಯಲ್ಲಿ ಈಗಾಗಲೇ ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿರುವ ಉಭಯ ತಂಡಗಳು ಸರಣಿ ಗೆಲ್ಲಬೇಕಾದರೆ ಅಂತಿಮ ಪಂದ್ಯ ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿವೆ. ಒಂದು ವೇಳೆ ಆಸ್ಟ್ರೇಲಿಯಾ ಗೆದ್ದರೆ ಬರೋಬ್ಬರಿ ಎರಡು ವರ್ಷದ ನಂತರ ಏಕದಿನ ಸರಣಿ ಗೆದ್ದ ಸಾಧನೆ ಮಾಡುತ್ತದೆ. ಕಳೆದ ಎರಡು ವರ್ಷಗಳಿಂದ ಉತ್ತಮ ಆಟದ ಸಾಧನೆ ತೋರದ ಆಸೀಸ್ ಕಳೆದ 23 ಏಕದಿನ ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ನಾಲ್ಕು.
ಅಂತಿಮ ಏಕದಿನಕ್ಕೆ ಆಸ್ಟ್ರೇಲಿಯಾ ತಂಡ: ಅರೋನ್ ಫಿಂಚ್, ಅಲೆಕ್ಸ್ ಕ್ಯಾರಿ, ಉಸ್ಮಾನ್ ಖ್ವಾಜಾ, ಶಾನ್ ಮಾರ್ಶ್, ಪೀಟರ್ ಹ್ಯಾಂಡ್ಸ್ ಕಾಂಬ್, ಮಾರ್ಕಸ್ ಸ್ಟೋಯಿನಸ್ , ಗ್ಲೆನ್ ಮ್ಯಾಕ್ಸವೆಲ್, ಜೇ ರಿಚರ್ಡ್ಸನ್, ಪೀಟರ್ ಸಿಡ್ಲ್, ಆಡಂ ಜಂಪಾ, ಬಿಲ್ಲಿ ಸ್ಟಾನ್ಲೆಕ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.