ಶಮಿ ವಿರುದ್ಧ ಪತ್ನಿಯ ದೂರು
Team Udayavani, Mar 10, 2018, 7:30 AM IST
ಕೋಲ್ಕತಾ: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮತ್ತು ಅವರ ಕುಟುಂಬದ ನಾಲ್ವರು ಸದಸ್ಯರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಮಿ ವಿರುದ್ಧ ದೈಹಿಕ ಹಿಂಸೆ, ಮಾನಸಿಕ ಕಿರುಕುಳ, ದಾಂಪತ್ಯ ದ್ರೋಹದ ದೂರನ್ನು ಅವರ ಪತ್ನಿ ಹಸಿನ್ ಜಹಾನ್ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಅವರ ವಿರುದ್ಧ ಜಾಮೀನು ಸಹಿತ ಮತ್ತು ಜಾಮೀನು ರಹಿತ ಪ್ರಕರಣವು ಜಾದವ್ಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂದು ಕೋಲ್ಕತಾ ಪೊಲೀಸ್ನ ಜಂಟಿ ಸಿಪಿ ಪ್ರವೀಣ್ ತ್ರಿಪಾಠಿ ಅವರು ಹೇಳಿದ್ದಾರೆ.
ಕುಟುಂಬದ ನಾಲ್ವರ ಹೆಸರನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. ಆದರೆ ಪತ್ನಿಯ ಆರೋಪವನ್ನು ಶಮಿ ತಳ್ಳಿಹಾಕಿದ್ದಾರೆ. ಇದು ಸುಳ್ಳು ಮತ್ತು ನನ್ನ ಹೆಸರಿಗೆ ಮಸಿ ಬಳಿಯಲು ಮಾಡಿದ ಪಿತೂರಿ ಎಂದು ಶಮಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ.
ಹಸಿನ್ ಗುರುವಾರ ಶಮಿ ಮ್ಯಾಚ್ಫಿಕ್ಸಿಂಗ್ನಲ್ಲಿ ಪಾಲ್ಗೊಂಡಿದ್ದಾರೆ, ಅವರು ಇಂಗ್ಲೆಂಡ್ ಮೂಲದ ಉದ್ಯಮಿಯಿಂದ ಹಣ ಸ್ವೀಕರಿಸಿದ್ದಾರೆ, ಇದಕ್ಕೆ ನನ್ನ ಬಳಿ ದಾಖಲೆಯಿದೆ ಎಂದು ಹೇಳಿದ್ದರು. ಮಾತ್ರವಲ್ಲದೇ ಮೊಹಮ್ಮದ್ ಶಮಿಗೆ ಪಾಕಿಸ್ಥಾನ ಮೂಲದ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದೆ ಎಂದು ಕಿಡಿಕಾರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.