ಮೊದಲ ಏಕದಿನ: ಪದಾರ್ಪಣೆ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಔಟಾದ ಮಯಾಂಕ್, ಶಾ: ಕೊಹ್ಲಿ ಅರ್ಧಶತಕ
Team Udayavani, Feb 5, 2020, 9:31 AM IST
ಹ್ಯಾಮಿಲ್ಟನ್: ಸೆಡಾನ್ ಪಾರ್ಕ್ ನಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಆರಂಭಿಕ ಆಘಾತ ಅನುಭವಿಸಿದ್ದು , 50ರನ್ ಆಗುವಷ್ಟರಲ್ಲಿ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿದೆ.
ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಭಾರತದ ನೂತನ ಆರಂಭಿಕ ಜೋಡಿ ಮಯಾಂಕ್ ಮತ್ತು ಪೃಥ್ವಿ ಶಾ ಭರವಸೆ ಮೂಡಿಸುವಲ್ಲಿ ವಿಫಲವಾಗಿದ್ದು ಅಲ್ಪ ಮೊತ್ತಕ್ಕೆ ಔಟಾಗಿದ್ದಾರೆ. 21 ಎಸೆತಗಳಲ್ಲಿ 3 ಬೌಂಡರಿ ಸೇರಿ 20 ರನ್ ದಾಖಲಿಸಿದ್ದ ಪೃಥ್ವಿ ಶಾ 8ನೇ ಓವರ್ ನಲ್ಲಿ ಗ್ರ್ಯಾಂಡ್ ಹೋಮ್ ಎಸೆತಕ್ಕೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಮಯಾಂಕ್ ಕೂಡ 32 ರನ್ ಗಳಿಸಿ ನಿರ್ಗಮಿಸಿದರು. ಓಪನರ್ ಗಳಾಗಿ ಕಣಕ್ಕಿಳಿದ ಇವರಿಬ್ಬರು ಅರ್ಧಶತಕದ ಜೊತೆಯಾಟ ನೀಡಿದ್ದಾರೆ.
ಸದ್ಯ ಶ್ರೇಯಸ್ ಐಯ್ಯರ್ ಹಾಗೂ ಕೆ.ಎಲ್ ರಾಹುಲ್ ಕ್ರೀಸ್ನಲ್ಲಿದ್ದಾರೆ. ನಾಯಕ ಕೊಹ್ಲಿ 51 ರನ್ ಗಳಿಸಿ ಐಶ್ ಸೋಧಿಗೆ ವಿಕೆಟ್ ಒಪ್ಪಿಸಿದ್ದಾರೆ, ಅಯ್ಯರ್ 40 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ನ್ಯೂಜಿಲ್ಯಾಂಡ್ ಪರ ಟಿಮ್ ಸೌಥಿ, ಐಶ್ ಸೋಧಿ ಹಾಗೂ ಕಾಲಿನ್ ಡಿ ಗ್ಗ್ರ್ಯಾಂಡ್ ಹೋಮ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.
ನ್ಯೂಜಿಲೆಂಡ್ ಪರ ಖಾಯಂ ನಾಯಕ ಕೇನ್ ವಿಲಿಯಮ್ಸನ್ ಇಂಜುರಿಯಿಂದ ಗುಣಮುಖರಾಗದ ಕಾರಣ ಇಂದಿನ ಪಂದ್ಯದಲ್ಲೂ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ತಂಡವನ್ನು ಟಾಮ್ ಲೇಥಮ್ ಮುನ್ನಡೆಸುತ್ತಿದ್ದಾರೆ.
ಇತ್ತ ಭಾರತ ಪರ ಮಯಾಂಕ್ ಅಗರ್ವಾಲ್ ಹಾಗೂ ಪೃಥ್ವಿ ಶಾ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು. ಕರ್ನಾಟಕದ ಮನೀಶ್ ಪಾಂಡೆ ಅವರನ್ನು ಕೈಬಿಟ್ಟು ಇವರ ಬದಲು ಕೇದಾರ್ ಜಾಧವ್ ಆಡುವ ಅವಕಾಶ ಗಿಟ್ಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…
Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.