1983 ವಿಶ್ವಕಪ್ ಹೀರೋ ಯಶಪಾಲ್ ಶರ್ಮಾ ನಿಧನ
Team Udayavani, Jul 13, 2021, 1:15 PM IST
ಹೊಸದಿಲ್ಲಿ: ಟೀಂ ಇಂಡಿಯಾ ಮಾಜಿ ಆಟಗಾರ, 1983 ವಿಶ್ವಕಪ್ ವಿಜೇತ ತಂಡದ ಸದಸ್ಯ ಯಶಪಾಲ್ ಶರ್ಮಾ ಇಂದು ಹೃದಯಾಘಾತದಿಂದ ನಿಧನರಾದರು.
66 ವರ್ಷದ ಯಶಪಾಲ್ ಶರ್ಮಾ ಅವರು ನೋಯ್ಡಾದಲ್ಲಿ ವಾಸವಿದ್ದರು. ಮಂಗಳವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮನೆಯಲ್ಲಿಯೇ ಶರ್ಮಾ ನಿಧನರಾದರು ಎಂದು ಮೂಲಗಳು ತಿಳಿಸಿದೆ.
ಯಶಪಾಲ್ ಶರ್ಮಾ 1978ರಿಂದ 1983ರವರೆಗೆ ಭಾರತದ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು. 37 ಟೆಸ್ಟ್ ಪಂದ್ಯಗಳನ್ನು ಆಡಿರುವ ಶರ್ಮಾ 1,606 ರನ್‌ಗಳನ್ನು ಗಳಿಸಿದ್ದಾರೆ. 42 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 883 ರನ್ ಕಲೆಹಾಕಿದ್ದಾರೆ.
ಇದನ್ನೂ ಓದಿ:ಗೇಲ್ ಸ್ಫೋಟಕ ಆಟಕ್ಕೆ ಮಂಕಾದ ಆಸೀಸ್: ಸತತ ಮೂರು ಪಂದ್ಯ ಗೆದ್ದ ಪೂರನ್ ಪಡೆ
1979ರ ವಿಶ್ವಕಪ್ ತಂಡದಲ್ಲಿದ್ದರೂ ಆ ವಿಶ್ವಕಪ್ ನಲ್ಲಿ ಯಶಪಾಲ್ ಶರ್ಮಾಗೆ ಆಡುವ ಅವಕಾಶ ದೊರೆತಿರಲಿಲ್ಲ. ಆದರೆ ನಂತರ ನಡೆದ ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆದ ಯಶಪಾಲ್ ಶರ್ಮಾ, ಆ ಸರಣಿಯಲ್ಲಿ 58.93ರ ಸರಾಸರಿಯಲ್ಲಿ 884 ರನ್ ಗಳಿಸಿದ್ದರು.
1983ರ ವಿಶ್ವಕಪ್ ನಲ್ಲಿ ಯಶಪಾಲ್ ಭಾರತ ತಂಡದ ಪ್ರಮುಖ ಆಟಗಾರನಾಗಿದ್ದರು. ಕೂಟದಲ್ಲಿ 34.28ರ ಸರಾಸರಿಯಲ್ಲಿ 240 ರನ್ ಗಳಿಸಿದ್ದ ಯಶಪಾಲ್ ಭಾರತದ ಪರ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ ಎರಡನೇ ಸ್ಥಾನದಲ್ಲಿದದ್ದರು.
1983ರ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಯಶಪಾಲ್ 89 ರನ್ ಗಳಿಸಿ ಭಾರತದ ವಿಜಯಕ್ಕೆ ನೆರವಾಗಿದ್ದರು. ಸೆಮಿಫೈನಲ್ ಪಂದ್ಯದಲ್ಲೂ ಇಂಗ್ಲೆಂಡ್ ವಿರುದ್ಧ 61 ರನ್ ಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.