ಟೀಂ ಇಂಡಿಯಾ ಮಾಜೀ ಕಪ್ತಾನ ಅಜಿತ್ ವಾಡೇಕರ್ ನಿಧನ
Team Udayavani, Aug 15, 2018, 11:52 PM IST
ಮುಂಬೈ : ಭಾರತ ಕ್ರಿಕೆಟ್ ತಂಡದ ಮಾಜೀ ಕಪ್ತಾನ ಹಾಗೂ ವಿದೇಶಿ ನೆಲದಲ್ಲಿ ಚೊಚ್ಚಲ ಸರಣಿ ಗೆದ್ದಿದ್ದ ಭಾರತೀಯ ತಂಡವನ್ನು ಮುನ್ನಡೆಸಿದ್ದ ಕಪ್ತಾನನೆಂಬ ಹೆಗ್ಗಳಿಕೆಯನ್ನು ಪಡೆದಿದ್ದ ಅಜಿತ್ ಲಕ್ಷ್ಮಣ್ ವಾಡೇಕರ್ (77) ಅವರು ಬುಧವಾರದಂದು ನಗರದ ಜಸ್ ಲೋಕ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ದೀರ್ಘಕಾಲೀನ ಅನಾರೋಗ್ಯದಿಂದ ಬಳಲುತ್ತಿದ್ದರು.
ಇವರ ನೇತೃತ್ವದ ಭಾರತೀಯ ತಂಡವು 1971ರಲ್ಲಿ ವೆಸ್ಟ್ ವಿಂಡೀಸ್ ಹಾಗೂ ಇಂಗ್ಲಂಡ್ ಪ್ರವಾಸಗಳ ಸಂದರ್ಭಗಳಲ್ಲಿ ಸರಣಿ ಜಯವನ್ನು ತಮ್ಮದಾಗಿಸಿಕೊಂಡಿತ್ತು. ಮಾತ್ರವಲ್ಲದೇ 1972-73ರ ಅವಧಿಯಲ್ಲಿ ಇವರ ನೇತೃತ್ವದ ಟೀಂ ಇಂಡಿಯಾವು ಇಂಗ್ಲಂಡ್ ತಂಡವನ್ನು 2-1 ಅಂತರದಲ್ಲಿ ಸೋಲಿಸಿ ಸರಣಿ ಜಯಿಸಿತ್ತು. ಈ ಮೂಲಕ ವಿದೇಶಿ ನೆಲದಲ್ಲಿ ಮೂರು ಬಾರಿ ಸರಣಿ ಗೆದ್ದ ಯಶಸ್ವೀ ನಾಯಕನಾಗಿ ವಾಡೇಕರ್ ಗುರುತಿಸಿಕೊಂಡಿದ್ದರು.
1966ರಲ್ಲಿ ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ಟೆಸ್ಟ್ ಕ್ಯಾಪ್ ಧರಿಸಿದ್ದ ವಾಡೇಕರ್ ಅವರು 37 ಪಂದ್ಯಗಳನ್ನು ಆಡಿ 31.07 ಸರಾಸರಿಯಲ್ಲಿ 2113 ರನ್ನುಗಳನ್ನು ಕಲೆ ಹಾಕಿದ್ದರು. ಇವುಗಳಲ್ಲಿ 1 ಶತಕ ಹಾಗೂ 14 ಅರ್ಧಶತಕಗಳನ್ನು ದಾಖಲಿಸಿದ್ದರು. ಇನ್ನು ತನ್ನ ವೃತ್ತಿಜೀವನದಲ್ಲಿ ವಾಡೇಕರ್ ಅವರು ಆಡಿದ್ದು ಕೇವಲ 2 ಏಕದಿನ ಪಂದ್ಯಗಳನ್ನು ಮಾತ್ರ. ಇವರು ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಇಂಗ್ಲಂಡ್ ವಿರುದ್ಧ 1974ರಲ್ಲಿ ಆಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.