ಕೋವಿಡ್‌ಗೆ ಬಲಿಯಾದ ಮಾಜಿ ಆರಂಭಕಾರ ಚೇತನ್ ಚೌಹಾಣ್‌

ಸುನೀಲ್‌ ಗಾವಸ್ಕರ್‌ ಅವರ ಜತೆಗಾರ ; ಯುಪಿ ಸರಕಾರದ ಸಚಿವ ; ಮಾಜಿ ಲೋಕಸಭಾ ಸದಸ್ಯ

Team Udayavani, Aug 16, 2020, 6:15 PM IST

Chetan-Chauhan

ಗುರ್ಗಾಂವ್: ಮಾಜಿ ಕ್ರಿಕೆಟ್ ಆಟಗಾರ ಚೇತನ್ ಚೌಹಾಣ್ ಅವರು ಇಂದು ನಿಧನ ಹೊಂದಿದ್ದಾರೆ.

ಕಿಡ್ನಿ ಹಾಗೂ ರಕ್ತದೊತ್ತಡ ಸಮಸ್ಯೆಗಳ ಕಾರಣದಿಂದ ಚೌಹಾಣ್ ಅವರನ್ನು ಗುರುಗ್ರಾಮದಲ್ಲಿರುವ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಅವರು ಇಂದು ಸಂಜೆ ಹೃದಯಾಘಾತದಿಂದ ಮೃತಪಟ್ಟರು ಎಂದು ತಿಳಿದುಬಂದಿದೆ. ಪತ್ನಿ, ಮೆಲ್ಬರ್ನ್ ನಲ್ಲಿರುವ ಪುತ್ರ ವಿನಾಯಕ್‌ ಚೌಹಾಣ್‌ ಹಾಗೂ ಅಪಾರ ಕ್ರಿಕೆಟ್‌ ಅಭಿಮಾನಿಗಳನ್ನು ಚೌಹಾಣ್‌ ಅಗಲಿದ್ದಾರೆ.

ಎರಡು ಬಾರಿಯ ಲೋಕಸಭಾ ಸದಸ್ಯರಾಗಿದ್ದ ಚೇತನ್‌ ಚೌಹಾಣ್‌, ಪ್ರಸ್ತುತ ಉತ್ತರಪ್ರದೇಶ ಸರಕಾರದ ಸೈನಿಕ ಕಲ್ಯಾಣ, ಗೃಹರಕ್ಷಕ ದಳ, ಸಾರ್ವಜನಿಕ ಸಂಪರ್ಕ ಖಾತೆ ಮತ್ತು ನಾಗರಿಕ ರಕ್ಷಣಾ ಸಚಿವರಾಗಿದ್ದರು. ಕಳೆದ ವರ್ಷದ ತನಕ ರಾಜ್ಯದ ಕ್ರೀಡಾ ಸಚಿವರಾಗಿ ಕರ್ತವ್ಯ ನಿಭಾಯಿಸಿದ್ದರು.

ಚೌಹಾಣ್ ಅವರಲ್ಲಿ ಜುಲೈ ತಿಂಗಳಿನಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿತ್ತು ಮತ್ತು ಅವರು ಅದರಿಂದ ಸಂಪೂರ್ಣವಾಗಿ ಗುಣಮುಖರಾಗಿರಲಿಲ್ಲ. ಬಳಿಕ ಈ ಸೋಂಕು ಚೌಹಾಣ್ ಅವರ ಕಿಡ್ನಿಗೆ ಘಾಸಿಯುಂಟುಮಾಡಿತ್ತು ಮಾತ್ರವಲ್ಲದೇ ಅಧಿಕ ರಕ್ತದೊತ್ತಡ ಸಮಸ್ಯೆಯನ್ನೂ ಉಲ್ಭಣಿಸುವಂತೆ ಮಾಡಿತ್ತು.

ಕೋವಿಡ್ 19 ಸೋಂಕು ಕಾಣಿಸಿಕೊಂಡ ತಕ್ಷಣ ಚೇತನ್ ಚೌಹಾಣ್ ಅವರು ಲಕ್ನೋದಲ್ಲಿರುವ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಅವರನ್ನು ಶುಕ್ರವಾರ ರಾತ್ರಿ ಗುರುಗ್ರಾಮದಲ್ಲಿರುವ ಮೆದಾಂತ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು.

ಇಲ್ಲಿ ಅವರ ದೇಹ ಸ್ಥಿತಿ ಇನ್ನಷ್ಟು ಹದಗೆಟ್ಟ ಕಾರಣದಿಂದ ವೈದ್ಯರು ಚೌಹಾಣ್ ಅವರನ್ನು ಜೀವರಕ್ಷಕ ಸಾಧನಗಳ ನಿಗಾದಲ್ಲಿ ಇರಿಸಿದ್ದರು. ಆದರೆ ಚೌಹಾಣ್ ಅವರು ಇಂದು ಸಂಜೆ ತೀವ್ರ ಸ್ವರೂಪದ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ ಎಂದು ಅವರ ಸಹೋದರ ಪುಷ್ಪೇಂದ್ರ ಚೌಹಾಣ್ ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಚೌಹಾಣ್-ಗವಾಸ್ಕರ್ ಯಶಸ್ವಿ ಆರಂಭಿಕ ಜೋಡಿ
1969-1978ರ ಅವಧಿಯಲ್ಲಿ 40 ಟೆಸ್ಟ್‌ ಪಂದ್ಯಗಳನ್ನಾಡಿದ್ದ ಚೇತನ್‌ ಚೌಹಾಣ್‌ ದಾಖಲೆಗಳ ವೀರ ಸುನೀಲ್‌ ಗಾವಸ್ಕರ್‌ ಅವರ ಸುದೀರ್ಘಾವಧಿಯ ಜತೆಗಾರನಾಗಿದ್ದರು. 31.57ರ ಸರಾಸರಿಯಲ್ಲಿ 2,084 ರನ್‌ ಗಳಿಸಿದ್ದಾರೆ. ಒಂದೆಡೆ ಗಾವಸ್ಕರ್‌ ಶತಕದ ಮೇಲೆ ಶತಕವನ್ನು ಪೇರಿಸುತ್ತ ಹೋದರೂ ಚೌಹಾಣ್‌ ಅವರ ಟೆಸ್ಟ್‌ ಶತಕದ ಕನಸು ಮಾತ್ರ ಈಡೇರಲಿಲ್ಲ. 97 ರನ್‌ ಸರ್ವಾಧಿಕ ಗಳಿಕೆಯಾಗಿದೆ.

70ರ ದಶಕದಲ್ಲಿ ಸುನೀಲ್‌ ಗಾವಸ್ಕರ್‌-ಚೇತನ್‌ ಚೌಹಾಣ್‌ ಭಾರತದ ಯಶಸ್ವಿ ಆರಂಭಿಕ ಜೋಡಿಯಾಗಿತ್ತು. ಗಾವಸ್ಕರ್‌ ಯಶಸ್ಸಿನಲ್ಲಿ ಚೌಹಾಣ್‌ ಅವರ ಪಾತ್ರವನ್ನು ಮರೆಯುವಂತಿರಲಿಲ್ಲ. ಮೊದಲ ವಿಕೆಟಿಗೆ ಮೂರು ಸಾವಿರಕ್ಕೂ ಅಧಿಕ ರನ್‌ ಪೇರಿಸಿದ ಹೆಗ್ಗಳಿಕೆ ಈ ಜೋಡಿಯದ್ದಾಗಿತ್ತು. ಇದರಲ್ಲಿ 10 ಶತಕದ ಜತೆಯಾಟಗಳು ಸೇರಿವೆ. 7 ಏಕದಿನ ಪಂದ್ಯಗಳನ್ನೂ ಆಡಿರುವ ಚೌಹಾಣ್‌, 153 ರನ್‌ ಗಳಿಸಿದ್ದಾರೆ.

ಅಂದಿನ ಕಾಲದ ಘಾತಕ ವೇಗಿಗಳಾಗಿದ್ದ ಡೆನ್ನಿಸ್‌ ಲಿಲ್ಲಿ, ಜೆಫ್ ಥಾಮ್ಸನ್‌, ರಾಡ್ನಿ ಹಾಗ್‌, ಲೆನ್‌ ಪಾಸ್ಕೊ, ಬಾಬ್‌ ವಿಲ್ಲೀಸ್‌ ಅವರ ಎಸೆತಗಳನ್ನು ಲೀಲಾಜಾಲವಾಗಿ ಎದುರಿಸುತ್ತಿದ್ದ ಚೌಹಾಣ್‌, ಭಾರತ ತಂಡದ ಗಟ್ಟಿಮುಟ್ಟಾದ ಅಡಿಪಾಯಕ್ಕೆ ಮಹತ್ವದ ಕಾಣಿಕೆ ಸಲ್ಲಿಸಿದ್ದನ್ನು ಮರೆಯುವಂತಿಲ್ಲ.

ಮಹಾರಾಷ್ಟ್ರ ಮತ್ತು ದಿಲ್ಲಿ ಪರ ರಣಜಿ ಟ್ರೋಫಿ ಪಂದ್ಯಗಳನ್ನಾಡಿದ ಚೇತನ್‌ ಚೌಹಾಣ್‌ ಡಿಡಿಸಿಎ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಆಯ್ಕೆ ಸಮಿತಿ ಅಧ್ಯಕ್ಷರಾಗಿ ಕರ್ತವ್ಯ ನಿಭಾಯಿಸಿದ್ದರು. ಆಸ್ಟ್ರೇಲಿಯ ಪ್ರವಾಸದ ವೇಳೆ ಭಾರತ ತಂಡದ ಮ್ಯಾನೇಜರ್‌ ಕೂಡ ಆಗಿದ್ದರು. 1981ರಲ್ಲಿ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು.

ಕ್ರಿಕೆಟಿಗರ ಶೋಕ

ಚೇತನ್‌ ಚೌಹಾಣ್‌ ನಿಧನಕ್ಕೆ ಭಾರತದ ಕ್ರಿಕೆಟ್‌ ವಲಯ ಗಾಢ ಶೋಕ ವ್ಯಕ್ತಪಡಿಸಿದೆ. ಅವರ ಕುಟುಂಬಕ್ಕೆ ಅಗಲಿಕೆಯ ಶಕ್ತಿ ನೀಡಲಿ ಎಂದು ಅನಿಲ್‌ ಕುಂಬ್ಳೆ, ವೀರೇಂದ್ರ ಸೆಹವಾಗ್‌, ಗೌತಮ್‌ ಗಂಭೀರ್‌ ಪ್ರಾರ್ಥಿಸಿದ್ದಾರೆ.
ಚೇತನ್ ಚೌಹಾಣ್ ಅವರು ತಮ್ಮ 12 ವರ್ಷಗಳ ಕ್ರಿಕೆಟ್ ಜೀವನದಲ್ಲಿ 40 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 2084 ರನ್ ಗಳನ್ನು ಕಲೆ ಹಾಕಿದ್ದಾರೆ ಇದರಲ್ಲಿ 16 ಅರ್ಧ ಶತಕಗಳು ಸೇರಿವೆ.

ಟಾಪ್ ನ್ಯೂಸ್

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.