ಭಾರತದ ಮಾಜಿ ಕ್ರಿಕೆಟಿಗ ಎ.ಜಿ. ಮಿಲ್ಖಾ ಸಿಂಗ್‌ ನಿಧನ

Team Udayavani, Nov 11, 2017, 6:30 AM IST

A-G-Milkha-Singh.jpg

ಚೆನ್ನೈ: ಭಾರತದ ಮಾಜಿ ಕ್ರಿಕೆಟಿಗ ಎ.ಜಿ. ಮಿಲ್ಖಾ ಸಿಂಗ್‌ ಶುಕ್ರವಾರ ಚೆನ್ನೈ ಯಲ್ಲಿ ನಿಧನರಾದರು. ಹೃದಯ ಸಂಬಂಧಿ ಕಾಯಿಲೆಗೊಳಗಾಗಿದ್ದ 75ರ ಹರೆಯದ ಸಿಂಗ್‌ ಅವರನ್ನು ಚೆನ್ನೈ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಮಿಲ್ಖಾ ಸಿಂಗ್‌ 1960-61ರ ಅವಧಿಯಲ್ಲಿ ಭಾರತದ ಪರ 4 ಟೆಸ್ಟ್‌ ಪಂದ್ಯಗಳನ್ನಾಡಿದ್ದರು. ರಿಚಿ ಬೆನೊ ನೇತೃತ್ವದ ಆಸ್ಟ್ರೇಲಿಯ ತಂಡದ 1960ರ ಭಾರತ ಪ್ರವಾಸದ ವೇಳೆ ಮದ್ರಾಸಿನಲ್ಲಿ ನಡೆದ 4ನೇ ಪಂದ್ಯದಲ್ಲಿ ಸಿಂಗ್‌ ಟೆಸ್ಟ್‌ಕ್ಯಾಪ್‌ ಧರಿಸಿದ್ದರು. ಎಡಗೈ ಬ್ಯಾಟ್ಸ್‌ಮನ್‌ ಹಾಗೂ ಶ್ರೇಷ್ಠ ಮಟ್ಟದ ಫೀಲ್ಡರ್‌ ಆಗಿದ್ದ ಅವರು 16 ಹಾಗೂ 9 ರನ್‌ ಮಾಡಿ ಔಟಾಗಿದ್ದರು.

ಮಿಲ್ಖಾ ಸಿಂಗ್‌ ಅವರ ಅಣ್ಣ ಕೃಪಾಲ್‌ ಸಿಂಗ್‌ ಕೂಡ ಭಾರತವನ್ನು ಪ್ರತಿನಿಧಿಸಿದ್ದರು. 1961ರಲ್ಲಿ ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಮುಂಬಯಿಯಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ಇವರಿಬ್ಬರು ಒಟ್ಟಿಗೇ ಆಡಿದ್ದರು. ಇದು ಮಿಲ್ಖಾ ಸಿಂಗ್‌ ಅವರ ಕೊನೆಯ ಟೆಸ್ಟ್‌ ಪಂದ್ಯ ಎನಿಸಿತು. ತಮಿಳುನಾಡು ಪರ ರಣಜಿ ಆಡಿದ ಅರ್ಜುನ್‌ ಕೃಪಾಲ್‌ ಸಿಂಗ್‌ ಈ ಕುಟುಂಬದ ಮತ್ತೋರ್ವ ಕ್ರಿಕೆಟಿಗ. ಈತ ಕೃಪಾಲ್‌ ಸಿಂಗ್‌ ಅವರ ಪುತ್ರ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅಷ್ಟೇನೂ ಗಮನ ಸೆಳೆಯದ ಮಿಲ್ಖಾ ಸಿಂಗ್‌, 4 ಪಂದ್ಯಗಳಿಂದ ಗಳಿಸಿದ್ದು ಕೇವಲ 92 ರನ್‌ ಮಾತ್ರ. ಸರ್ವಾಧಿಕ ಗಳಿಕೆ 35 ರನ್‌. ಆದರೆ 17ರ ಹರೆಯದಲ್ಲೇ ತಮಿಳುನಾಡು ಪರ ರಣಜಿ ಪಾದಾರ್ಪಣೆ ಮಾಡಿ, 88 ಪ್ರಥಮ ದರ್ಜೆ ಪಂದ್ಯಗಳನ್ನಾಡಿದರು. 8 ಶತಕಗಳ ನೆರವಿನಿಂದ 4,324 ರನ್‌ ಪೇರಿಸಿದ ಸಾಧನೆ ಇವರದ್ದಾಗಿದೆ.
ಮಿಲ್ಖಾ ಸಿಂಗ್‌ ನಿಧನಕ್ಕೆ ಅವರ ಸಮಕಾಲೀನ ಕ್ರಿಕೆಟಿಗ ಬಿಷನ್‌ ಸಿಂಗ್‌ ಬೇಡಿ, ಹಿರಿಯ ಕೋಚ್‌ ಎಂ.ಕೆ. ಇಕ್ಬಾಲ್‌ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.