ಆಹ್ವಾನಿತ ಹಾಕಿ ಟೂರ್ನಿ: ಭಾರತ ಫೈನಲ್‌ಗೆ
Team Udayavani, Jan 28, 2018, 7:00 AM IST
ಹ್ಯಾಮಿಲ್ಟನ್(ನ್ಯೂಜಿಲೆಂಡ್): ಗೆಲುವಿನ ಓಟವನ್ನು ಮುಂದುವರಿಸಿರುವ ಭಾರತ ತಂಡ ನಾಲ್ಕು ರಾಷ್ಟ್ರಗಳ ಆಹ್ವಾನಿತ ಹಾಕಿ ಟೂರ್ನಿಯ 2ನೇ ಹಂತದ ಪಂದ್ಯದಲ್ಲಿ ಜಪಾನ್ ತಂಡವನ್ನು 4-2 ರಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ. ಫೈನಲ್‌ನಲ್ಲಿ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬೆಲ್ಜಿಯಂ ತಂಡದ ಸವಾಲನ್ನು ಎದುರಿಸಲಿದೆ.
ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಪರ ವಿವೇಕ್ ಸಾಗರ್ ಪ್ರಸಾದ್ (12ನೇ ನಿಮಿಷ), ವರುಣ್ ಕುಮಾರ್ (30ನೇ ನಿಮಿಷ), ಮನ್‌ದೀಪ್ ಸಿಂಗ್ (58ನೇ ನಿಮಿಷ), ರಮಣ್‌ದೀಪ್ ಸಿಂಗ್ (58ನೇ ನಿಮಿಷ) ತಲಾ ಒಂದು ಗೋಲು ಬಾರಿಸಿದರು.
ಪಂದ್ಯದ ಆರಂಭದಿಂದಲೇ ಭಾರತ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿತು. ಇದರ ಫಲವಾಗಿ ಒಂದರ ಹಿಂದೆ ಒಂದರಂತೆ ಪೆನಾಲ್ಟಿ ಅವಕಾಶಗಳು ದೊರಕಿದವು. ಇವುಗಳ ಸದುಪಯೋಗ ಪಡೆಯುವಲ್ಲಿ ಭಾರತ ತಂಡ ಯಶಸ್ವಿಯಾಯಿತು. ಮೊದಲ ಹಂತದ ಫೈನಲ್‌ನಲ್ಲಿ ಭಾರತ ತಂಡ ಬೆಲ್ಜಿಯಂ ವಿರುದ್ಧ ಸೋಲುಂಡಿತ್ತು. ಹೀಗಾಗಿ ಭಾರತಕ್ಕೆ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.