ಫ್ರೆಂಚ್ ಓಪನ್ ಟೆನಿಸ್: ಕೆನಿನ್-ಸ್ವಿಯಾಟೆಕ್ ಫೈನಲ್ ಕಾದಾಟ
Team Udayavani, Oct 9, 2020, 11:30 PM IST
ಪ್ಯಾರಿಸ್: ಅಮೆರಿಕದ ನಾಲ್ಕನೇ ಶ್ರೇಯಾಂಕಿತೆ ಸೋಫಿಯಾ ಕೆನಿನ್ ಎರಡನೇ ಗ್ರ್ಯಾನ್ಸ್ಲಾಮ್ ಫೈನಲ್ನತ್ತ ಲಗ್ಗೆಯಿಟ್ಟಿದ್ದಾರೆ.
ಪ್ರಸಕ್ತ ನಡೆಯುತ್ತಿರುವ ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್ ಸೆಮಿಫೈನಲ್ನಲ್ಲಿ ಕೆನಿನ್ ಜೆಕ್ನ ಪೆಟ್ರಾ ಕ್ವಿಟೋವಾ ವಿರುದ್ಧ 6-4, 7-5ರ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಕೆನಿನ್, ಪೋಲಂಡಿನ ಹದಿಹರೆಯದ ಇಗಾ ಸ್ವಿಯಾಟೆಕ್ ಅವರ ಸವಾಲು ಸ್ವೀಕರಿಸಲಿದ್ದಾರೆ.
ಟೂರ್ನಿಯಲ್ಲಿ ಏಳನೇ ಶ್ರೇಯಾಂಕದ ಮತ್ತು ಎರಡು ಬಾರಿಯ ವಿಂಬಲ್ಡನ್ ವಿಜೇತೆ ಕ್ವಿಟೋವಾ, 2012ರ ಬಳಿಕ ಇದೇ ಮೊದಲ ಬಾರಿಗೆ ಫ್ರೆಂಚ್ ಓಪನ್ ಸೆಮಿಫೈನಲ್ನಲ್ಲಿ ಸ್ಪರ್ಧಿಸಿದ್ದರು. ಆದರೆ 21ರ ಹರೆಯದ ಕೆನಿನ್ ಎದುರು ಮೇಲುಗೈ ಸಾಧಿಸುವಲ್ಲಿ ವಿಫಲರಾಗಿ ಕೂಟದಿಂದ ನಿರ್ಗಮಿಸಿದ್ದಾರೆ.
ಇಗಾ ಸ್ವಿಯಾಟೆಕ್ ಪ್ರಶಸ್ತಿ ಸುತ್ತಿಗೆ
ಪೋಲಂಡಿನ 19 ವರ್ಷದ ಇಗಾ ಸ್ವಿಯಾಟೆಕ್ ಇಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಸೆಮಿಫೈನಲ್ನಲ್ಲಿ ನಾದಿಯ ಪೊಡೊರೋಸ್ಕಾ ವಿರುದ್ಧ 6-2, 6-1 ನೇರ ಸೆಟ್ಗಳ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ್ದಾರೆ. ಇದರೊಂದಿಗೆ ಫ್ರೆಂಚ್ ಓಪನ್ ಫೈನಲ್ಗೇರಿದ ಪೋಲಂಡಿನ ಮೊದಲ ವನಿತೆ ಎಂಬ ಗೌರವಕ್ಕೆ ಸ್ವಿಯಾಟೆಕ್ ಪಾತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.