ಅಪಘಾತದ ವೇಳೆ ಪಂತ್ ಗೆ ಸಹಾಯ ಮಾಡಿದವರಿಗೆ ಸರ್ಕಾರದಿಂದ ಗೌರವ
Team Udayavani, Dec 31, 2022, 11:25 AM IST
ಹೊಸದಿಲ್ಲಿ: ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರು ಶುಕ್ರವಾರ ಮುಂಜಾನೆ ರೂಕಿಯಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಅಪಘಾತದ ರಭಸಕ್ಕೆ ರಿಷಭ್ ಪಂತ್ ಅವರ ಮರ್ಸಿಡಿಸ್ ಕಾರು ಸುಟ್ಟು ಕರಕಲಾಗಿದೆ.
ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಪಂತ್ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ಪಂತ್ ಅವರ ಕಾಲು, ಹಣೆ, ಬೆನ್ನು ಸೇರಿದಂತೆ ಹಲವೆಡೆ ಗಾಯಗಳಾಗಿದೆ.
ಕಾರು ಅಪಘಾತದ ವೇಳೆ ಕ್ರಿಕೆಟಿಗನಿಗೆ ಸಹಾಯ ಮಾಡಿದ ಜನರನ್ನು ಗುರುತಿಸಲಾಗುವುದು ಎಂದು ಉತ್ತರಾಖಂಡದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಹೇಳಿದ್ದಾರೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಯೋಜನೆಯಡಿಯಲ್ಲಿ ಗೌರವಿಸಲಾಗುವುದು ಮತ್ತು ಬಹುಮಾನ ನೀಡಲಾಗುವುದು ಎಂದು ಘೋಷಿಸಿದರು.
“ರಸ್ತೆ ಅಪಘಾತದ ನಂತರ, ಗಾಯಾಳುವಿಗೆ ಮೊದಲ ಒಂದು ಗಂಟೆ ಅತ್ಯಂತ ಮುಖ್ಯ. ಇದು ಬಹಳ ನಿರ್ಣಾಯಕ ಅವಧಿ. ಆ ಒಂದು ಗಂಟೆಯೊಳಗೆ ಸಂತ್ರಸ್ತರಿಗೆ ಸರಿಯಾದ ಚಿಕಿತ್ಸೆ ಪಡೆಯುವುದು ಅವಶ್ಯಕ. ಸಾಮಾನ್ಯ ಜನರಲ್ಲಿ ಉತ್ತಮ ಸಾಮಾಜಿಕ ನಡವಳಿಕೆಯನ್ನು ಉತ್ತೇಜಿಸಲು ‘ಉತ್ತಮ ಸಮರಿತನ್’ ಯೋಜನೆ ಜಾರಿಗೊಳಿಸಲಾಗಿದೆ” ಎಂದು ಉತ್ತರಾಖಂಡ ಡಿಜಿಪಿ ಹೇಳಿದ್ದಾರೆ.
ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ಕೂಡಾ ಕಾರು ಅಪಘಾತದ ನಂತರ ರಿಷಬ್ ಪಂತ್‌ಗೆ ಸಹಾಯ ಮಾಡಿದ ಹರಿಯಾಣ ರಸ್ತೆ ಸಾರಿಗೆ ಚಾಲಕನಿಗೆ ಧನ್ಯವಾದ ಅರ್ಪಿಸಿದ್ದಾರೆ. “ರಿಷಭ್ ಪಂತ್ ಅವರನ್ನು ಸುಡುವ ಕಾರಿನಿಂದ ಹೊರಕ್ಕೆ ಕರೆದೊಯ್ದು ಬೆಡ್‌ಶೀಟ್‌ನಿಂದ ಸುತ್ತಿ ಆಂಬ್ಯುಲೆನ್ಸ್‌ಗೆ ಕರೆ ಮಾಡಿದ ಹರಿಯಾಣ ರೋಡ್‌ವೇಸ್ ಚಾಲಕ ಸುಶೀಲ್ ಕುಮಾರ್ ಗೆ ಕೃತಜ್ಞತೆಗಳು. ನಿಮ್ಮ ನಿಸ್ವಾರ್ಥ ಸೇವೆಗಾಗಿ ನಾನು ನಿಮಗೆ ತುಂಬಾ ಋಣಿಯಾಗಿದ್ದೇನೆ, ಸುಶೀಲ್ ಜಿ ರಿಯಲ್ ಹೀರೋ” ಎಂದು ಟ್ವೀಟ್ ಮಾಡಿದ್ದಾರೆ.
Gratitude to #SushilKumar ,a Haryana Roadways driver who took #RishabhPant away from the burning car, wrapped him with a bedsheet and called the ambulance.
We are very indebted to you for your selfless service, Sushil ji 🙏 #RealHero pic.twitter.com/1TBjjuwh8d— VVS Laxman (@VVSLaxman281) December 30, 2022
Rishabh Pant, Haryana Roadways, Indian cricketer, Hammadpur Jhal, Team India
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.