ಇರಾನಿ ಟ್ರೋಫಿ ಕ್ರಿಕೆಟ್: ಶೇಷ ಭಾರತಕ್ಕೆ ವಿಹಾರಿ ನಾಯಕ
Team Udayavani, Sep 28, 2022, 10:41 PM IST
ನವದೆಹಲಿ: ಮೂರು ವರ್ಷ ಬಳಿಕ ನಡೆಯಲಿರುವ ಇರಾನಿ ಟ್ರೋಫಿ’ ಕ್ರಿಕೆಟ್ ಪಂದ್ಯದಲ್ಲಿ ಹನುಮ ವಿಹಾರಿ ಶೇಷ ಭಾರತ’ (ರೆಸ್ಟ್ ಆಫ್ ಇಂಡಿಯಾ) ತಂಡವನ್ನು ಮುನ್ನಡೆಸಲಿದ್ದಾರೆ. 2019-20ನೇ ಸಾಲಿನ ರಣಜಿ ಚಾಂಪಿಯನ್ ಸೌರಾಷ್ಟ್ರ ವಿರುದ್ಧ ಅ. ಒಂದರಿಂದ ಐದರ ತನಕ ರಾಜ್‌ಕೋಟ್‌ನಲ್ಲಿ ಈ ಪಂದ್ಯ ನಡೆಯಲಿದೆ.
ಶೇಷ ಭಾರತ ತಂಡ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿದೆ. ರೆಡ್ ಬಾಲ್ ಸ್ಪೆಷಲಿಸ್ಟ್ ಮಾಯಾಂಕ್ ಅಗರ್ವಾಲ್, ಯುವ ಆರಂಭಕಾರ ಪ್ರಿಯಾಂಕ್ ಪಾಂಚಾಲ್, ದುಲೀಪ್ ಟ್ರೋಫಿ ಫೈನಲ್‌ನಲ್ಲಿ ದ್ವಿಶತಕ ಬಾರಿಸಿದ ಯಶಸ್ವಿ ಜೈಸ್ವಾಲ್, ಅಂಡರ್-19 ತಂಡದ ಹೀರೋ ಯಶ್ ಧುಲ್, ಬಿಗ್ ಹಿಟ್ಟರ್ ಸಫìರಾಜ್ ಖಾನ್ ಮೊದಲಾದವರು ತಂಡದಲ್ಲಿದ್ದಾರೆ.
ಸೌರಾಷ್ಟ್ರ ತಂಡವನ್ನು ಇನ್ನೂ ಪ್ರಕಟಿಸಲಾಗಿಲ್ಲ. ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಆಡುವ ಸಾಧ್ಯತೆ ಇದೆ.
ಶೇಷ ಭಾರತ ತಂಡ: ಹನುಮ ವಿಹಾರಿ (ನಾಯಕ), ಮಾಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ಅಭಿಮನ್ಯು ಈಶ್ವರನ್, ಯಶ್ ಧುಲ್, ಸಫìರಾಜ್ ಖಾನ್, ಯಶಸ್ವಿ ಜೈಸ್ವಾಲ್, ಕೆ.ಎಸ್. ಭರತ್, ಉಪೇಂದ್ರ ಯಾದವ್, ಜಯಂತ್ ಯಾದವ್, ಸೌರಭ್ ಕುಮಾರ್, ಆರ್. ಸಾಯಿ ಕಿಶೋರ್, ಮುಕೇಶ್ ಕುಮಾರ್, ಉಮ್ರಾನ್ ಮಲಿಕ್, ಕುಲದೀಪ್ ಸೇನ್, ಅರ್ಜಾನ್ ನಗÌಸ್ವಾಲಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.