ವಿಶ್ವ ಮಹಿಳಾ ಚೆಸ್ ಹರಿಕಾ ದ್ರೋಣವಲ್ಲಿಗೆ ಕಂಚು
Team Udayavani, Feb 27, 2017, 11:02 AM IST
ಹೊಸದಿಲ್ಲಿ: ಭಾರತೀಯ ಗ್ರ್ಯಾನ್ ಮಾಸ್ಟರ್ ಹರಿಕಾ ದ್ರೋಣವಲ್ಲಿ ವಿಶ್ವ ಮಹಿಳಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಸೋಲಿನ ಆಘಾತದಿಂದ ಕಂಚಿನ ಪದಕಕ್ಕೆ ತೃಪ್ತರಾಗಿದ್ದಾರೆ. ಈ ಮೂಲಕ ವಿಶ್ವ ಮಹಿಳಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಹರಿಕಾ ಮೂರನೇ ಬಾರಿ ಕಂಚಿನ ಪದಕ ಪಡೆದರು. ಇದಕ್ಕೂ ಮುನ್ನ ಅವರು 2012 ಮತ್ತು 2015ರಲ್ಲಿ ಕಂಚಿನ ಪದಕ ಜಯಿಸಿದ್ದರು.
ಸೆಮಿಫೈನಲ್ ಕದನದಲ್ಲಿ ಹರಿಕಾ 4-5ರಿಂದ ಚೀನದ ತಾನ್ ಜಾಂಗ್ಯಿ ವಿರುದ್ಧ ಸೋಲುಂಡರು. ಮೊದಲ ಪಂದ್ಯದಲ್ಲಿ ಭಾರತೀಯ ಆಟಗಾರ್ತಿ ಸೋಲುಂಡರೂ ಎರಡನೇ ಗೇಮ್‌ನಲ್ಲಿ ಗೆದ್ದು ತಿರುಗೇಟು ನೀಡಿದ್ದರು. ಹೀಗಾಗಿ ಪಂದ್ಯ 1-1ರಲ್ಲಿ ಸಮಬಲ ಸಾಧಿಸಿತ್ತು. ಆದರೆ ಅಂತಿಮ ಪಂದ್ಯದಲ್ಲಿ ತೀವ್ರ ಸ್ಪರ್ಧೆ ನಿರೀಕ್ಷಿಸಲಾಗಿತ್ತು. ಆಂಧ್ರದ ಆಟಗಾರ್ತಿ ಗೆಲುವಿಗೆ ಸಿಕ್ಕ ಅನೇಕ ಅವಕಾಶಗಳನ್ನು ಕೈಚೆಲ್ಲಿದರು. ಪರಿಣಾಮ ಪಂದ್ಯ ಟೈಬ್ರೇಕರ್ ಹಂತ ತಲುಪಿ ಹರಿಕಾ ಸೋತು ಹೋದರು. ಈ ಮೂಲಕ ಹರಿಕಾ ಮತ್ತೂಮ್ಮೆ ವಿಶ್ವ ಮಹಿಳಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆಲ್ಲುವ ಅವಕಾಶವನ್ನು ಕಳೆದುಕೊಂಡರು. ಹರಿಕಾ 2010ರಲ್ಲಿ ಏಶ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.