ದ್ವಿತೀಯ ಸ್ಥಾನಕ್ಕೆ ಜಾರಿದ ವಿರಾಟ್ ಕೊಹ್ಲಿ
Team Udayavani, Aug 12, 2018, 6:55 AM IST
ಲಂಡನ್: ಹಲವು ದಾಖಲೆಗಳ ವೀರ ವಿರಾಟ್ ಕೊಹ್ಲಿ ಅವರು 2018ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಪೇರಿಸಿದ ಸಾಧಕರಲ್ಲಿ ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ಅವರು ಈ ವರ್ಷ 1,404 ರನ್ ಪೇರಿಸಿದ್ದಾರೆ. ಲಾರ್ಡ್ಸ್ ಟೆಸ್ಟ್‌ನ ದ್ವಿತೀಯ ದಿನ 23 ರನ್ ಗಳಿಸುವ ಮೂಲಕ ಅವರು ಜಾನಿ ಬೇರ್‌ಸ್ಟೊ (1,389) ಸಾಧನೆಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದರು. ಆದರೆ ಮೂರನೇ ದಿನವಾದ ಶನಿವಾರ ಬೇರ್‌ಸ್ಟೊ ಭರ್ಜರಿ ಆಟವಾಡಿ ಕೊಹ್ಲಿಯನ್ನು ಮತ್ತೆ ದ್ವಿತೀಯ ಸ್ಥಾನಕ್ಕೆ ತಳ್ಳಿ ಅಗ್ರಸ್ಥಾನಕ್ಕೇರಿದರು.
ಶತಕದತ್ತ ದಾಪುಗಾಲು ಹಾಕುತ್ತಿದ್ದ ಬೇರ್‌ಸ್ಟೊ 93 ರನ್ ಗಳಿಸಿ ಪಾಂಡ್ಯ ಅವರಿಗೆ ವಿಕೆಟ್ ಒಪ್ಪಿಸಿದರು. ಇದರಿಂದಾಗಿ ಅವರು ಈ ವರ್ಷ ಒಟ್ಟಾರೆ 1,482 ರನ್ ಪೇರಿಸಿದಂತಾಯಿತು. ಅಂದರೆ ಕೊಹ್ಲಿ ಅವರಿಗಿಂತ 78 ರನ್ ಹೆಚ್ಚು.
ಭಾರತದ ಇನ್ನೋರ್ವ ಬ್ಯಾಟ್ಸ್‌ಮನ್ ಶಿಖರ್ ಧವನ್ ಅಗ್ರ ಐವರೊಳಗಿನ ಸ್ಥಾನ ಪಡೆದಿದ್ದಾರೆ. ಕಳಪೆ ಫಾರ್ಮ್
ನಿಂದಾಗಿ ಲಾರ್ಡ್ಸ್ ಟೆಸ್ಟ್ ತಂಡದಿಂದ ಕೈಬಿಟ್ಟಿರುವ ಧವನ್ 1,055 ರನ್ ಪೇರಿಸಿದ್ದಾರೆ. ಗರಿಷ್ಠ ರನ್ ಸಾಧಕರ ಪಟ್ಟಿಯ ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ ಇದ್ದಾರೆ. ಎಜ್‌ಬಾಸ್ಟನ್ ಟೆಸ್ಟ್‌ನಲ್ಲಿ 80 ಮ ತ್ತು 14 ರನ್ ಗಳಿಸಿದ್ದ ರೂಟ್ ಈ ವರ್ಷ 1,338 ರನ್ ಗಳಿಸಿದ್ದಾರೆ.
ಜಮಾನ್‌ಗೆ ನಾಲ್ಕನೇ ಸ್ಥಾನ
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯ ಐದನೇ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಸುದ್ದಿ ಮಾಡಿರುವ ಪಾಕಿಸ್ಥಾನದ ಫಖಾರ್ ಜಮಾನ್ ಈ ವರ್ಷ 1,181 ರನ್ ಪೇರಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಏಕದಿನದಲ್ಲಿ ದ್ವಿಶತಕ ಬಾರಿಸಿದ ಪಾಕಿಸ್ಥಾನ ಮೊದಲ ಆಟಗಾರ ಎಂಬ ಗೌರವಕ್ಕೆ ಜಮಾನ್ ಪಾತ್ರರಾಗಿದ್ದರು.
ಗರಿಷ್ಠ ರನ್ ಗಳಿಸಿದ ಶ್ರೇಷ್ಠ 10ರಲ್ಲಿ ಭಾರತದ ಇತರ ಯಾವುದೇ ಆಟಗಾರ ಕಾಣಿಸಿಕೊಂಡಿಲ್ಲ. 841 ರನ್ ಹೊಡೆದಿರುವ ರೋಹಿತ್ ಶರ್ಮ 11ನೇ ಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.