ಲಂಕಾ ನೆಲದಲ್ಲಿ ಜಿಂಬಾಬ್ವೆ ಇತಿಹಾಸ

Team Udayavani, Jul 11, 2017, 3:10 AM IST

itihasa.jpg

ಹಂಬಂತೋಟ: ಶ್ರೀಲಂಕಾ ನೆಲದಲ್ಲಿ ಏಕದಿನ ಸರಣಿ ಗೆಲ್ಲುವ ಮೂಲಕ ಜಿಂಬಾಬ್ವೆ ಹೊಸ ಇತಿಹಾಸ ಬರೆದಿದೆ. ಸೋಮವಾರದ 5ನೇ ಹಾಗೂ ನಿರ್ಣಾಯಕ ಪಂದ್ಯವನ್ನು 3 ವಿಕೆಟ್‌ಗಳಿಂದ ಗೆದ್ದ ಜಿಂಬಾಬ್ವೆ 3-2 ಅಂತರದ ವಿಜಯೋತ್ಸವ ಆಚರಿಸಿದೆ.

ಹಂಬಂತೊಟದಲ್ಲಿ ನಡೆದ ಈ ಮುಖಾಮುಖೀಯಲ್ಲಿ ಬ್ಯಾಟಿಂಗಿಗೆ ಇಳಿಸಲ್ಪಟ್ಟ ಶ್ರೀಲಂಕಾದಿಂದ ಗಳಿಸಲು ಸಾಧ್ಯವಾದದ್ದು 8ಕ್ಕೆ 203 ರನ್‌ ಮಾತ್ರ. ಜವಾಬಿತ್ತ ಜಿಂಬಾಬ್ವೆ 38.1 ಓವರ್‌ಗಳಲ್ಲಿ 7 ವಿಕೆಟಿಗೆ 204 ರನ್‌ ಬಾರಿಸಿ ವಿಜಯಿಯಾಯಿತು. ಇದು ಏಕದಿನ ಇತಿಹಾಸದಲ್ಲೇ ಲಂಕಾ ವಿರುದ್ಧ ಜಿಂಬಾಬ್ವೆ ಸಾಧಿಸಿದ ಮೊದಲ ಸರಣಿ ಗೆಲುವು ಕೂಡ ಹೌದು.

ಗಾಲೆಯಲ್ಲಿ 300 ರನ್‌ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ ದ್ವೀಪ ರಾಷ್ಟ್ರದಲ್ಲಿ ಗೆಲುವಿನ ಬಾವುಟ ಹಾರಿಸಿದ ಜಿಂಬಾಬ್ವೆ, ಅನಂತರ 2-1 ಹಿನ್ನಡೆಗೆ ಸಿಲುಕಿತು. 4ನೇ ಪಂದ್ಯವಲ್ಲಿ ಮತ್ತೆ ಮೇಲುಗೈ ಸಾಧಿಸಿ ಸರಣಿಯನ್ನು ಸಮಬಲಕ್ಕೆ ತಂದು ನಿಲ್ಲಿಸಿತು. ಸೋಮವಾರದ ನಿರ್ಣಾಯಕ ಮುಖಾಮುಖೀಯಲ್ಲಿ ಮ್ಯಾಥ್ಯೂಸ್‌ ಪಡೆಗೆ ನೀರು ಕುಡಿಸಿತು.

ಗೆಲುವಿನ “ರಾಜ’: ಆಲ್‌ರೌಂಡ್‌ ಪ್ರದರ್ಶನವಿತ್ತ ಜಿಂಬಾಬ್ವೆಯ ಸಿಕಂದರ್‌ ರಾಜ ಗೆಲುವಿನ ರೂವಾರಿ ಯಾಗಿ ಮೂಡಿಬಂದರು. 21ಕ್ಕೆ 3 ವಿಕೆಟ್‌ ಕಿತ್ತ ಅವರು, ತಂಡ ತೀವ್ರ ಸಂಕಟದಲ್ಲಿದ್ದಾಗ ಅಜೇಯ 27 ರನ್‌ ಮಾಡಿ ದಡ ಮುಟ್ಟಿಸಿದರು. ಈ ಸಾಧನೆಗಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿಯಿತು. ಹ್ಯಾಮಿಲ್ಟನ್‌ ಮಸಕಝ ಸರಣಿಶ್ರೇಷ್ಠರೆನಿಸಿದರು.

ಮಸಕಝ (73), ಮೈರ್‌ (43) ಮತ್ತು ಮುಸಕಂಡ (37) ಲಂಕಾ ದಾಳಿಯನ್ನು ಸಲೀಸಾಗಿ ಎದುರಿಸುತ್ತ ಹೋಗಿದ್ದರು. 24ನೇ ಓವರ್‌ ವೇಳೆ ಒಂದೇ ವಿಕೆಟಿಗೆ 137 ರನ್‌ ಮಾಡಿದ ಜಿಂಬಾಬ್ವೆ ಬಹಳ ಸುಲಭದಲ್ಲಿ ಗೆಲ್ಲುವ ಸೂಚನೆ ನೀಡಿತ್ತು. ಆದರೆ ಸ್ಕೋರ್‌ 175ಕ್ಕೆ ತಲುಪುವಾಗ 7 ವಿಕೆಟ್‌ ಉರುಳಿತು. ಹತ್ತೇ ಓವರ್‌ಗಳಲ್ಲಿ ಪಂದ್ಯದ ಚಿತ್ರಣವೇ ಬದಲಾಯಿತು. ಲಂಕೆಯ ಮುಂದೆ ಗೆಲುವಿನ ಅವಕಾಶ ತೆರೆಯಲ್ಪಟ್ಟಿತು. ಆದರೆ ರಾಜ (ಔಟಾಗದೆ 27) ಮತ್ತು ನಾಯಕ ಕ್ರೆಮರ್‌ (ಔಟಾಗದೆ 11) ಸೇರಿಕೊಂಡು ಮುರಿಯದ 8ನೇ ವಿಕೆಟಿಗೆ 29 ರನ್‌ ಒಟ್ಟುಗೂಡಿಸಿದರು; ಕೈತಪ್ಪಲಿದ್ದ ಗೆಲುವನ್ನು ಒಲಿಸಿಕೊಂಡೇ ಬಿಟ್ಟರು.

ಲಂಕಾದ ಸಣ್ಣ ಮೊತ್ತದಲ್ಲೂ ಇಬ್ಬರಿಂದ ಅರ್ಧ ಶತಕ ದಾಖಲಾಯಿತು. ಗುಣತಿಲಕ 52 ಹಾಗೂ ಗುಣರತ್ನೆ ಅಜೇಯ 59 ರನ್‌ ಬಾರಿಸಿದರು. 28 ರನ್‌ ಎಕ್ಸ್‌ಟ್ರಾ ರೂಪದಲ್ಲಿ ಬಂತು!

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-8 ವಿಕೆಟಿಗೆ 203 (ಗುಣರತ್ನೆ ಔಟಾಗದೆ 59, ಗುಣತಿಲಕ 52, ರಾಜ 21ಕ್ಕೆ 3, ಕ್ರೆಮರ್‌ 23ಕ್ಕೆ 2). ಜಿಂಬಾಬ್ವೆ-38.1 ಓವರ್‌ಗಳಲ್ಲಿ 7 ವಿಕೆಟಿಗೆ 204 (ಮಸಕಝ 73, ಮೈರ್‌ 43, ಮುಸಕಂಡ 37, ರಾಜ ಔಟಾಗದೆ 27, ಧನಂಜಯ 47ಕ್ಕೆ 4). ಪಂದ್ಯಶ್ರೇಷ್ಠ: ಸಿಕಂದರ್‌ ರಾಜ. ಸರಣಿಶ್ರೇಷ್ಠ: ಹ್ಯಾಮಿಲ್ಟನ್‌ ಮಸಕಝ.

ಟಾಪ್ ನ್ಯೂಸ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್‌ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್‌ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.