ಅಡಿಲೇಡ್ ನಲ್ಲಿ ಹೀನಾಯ ಸೋಲು: ಕೋಚ್ ರವಿ ಶಾಸ್ತ್ರಿ ತಲೆದಂಡಕ್ಕೆ ಒತ್ತಾಯ
Team Udayavani, Dec 22, 2020, 3:38 PM IST
ನವದೆಹಲಿ: ಭಾರತ ತಂಡ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ತನ್ನ ಕನಿಷ್ಠ ಮೊತ್ತ ಪೇರಿಸಿ ಅಡಿಲೇಡ್‌ನಲ್ಲಿ ಹೀನಾಯ ಸೋಲು ಕಂಡು ಎಲ್ಲರ ಆಕ್ರೋಶಕ್ಕೆ ತುತ್ತಾಗಿದೆ. ಇದೇ ವೇಳೆ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರ ತಲೆದಂಡಕ್ಕೆ ಕ್ರಿಕೆಟ್ ಅಭಿಮಾನಿಗಳು ಆಗ್ರಹಿಸಿದ್ದಾರೆ.
ಭಾರತ ತಂಡದ ಆಡುವ ಬಳಗದ ಆಯ್ಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟೀಮ್ ಇಂಡಿಯ ಅಭಿಮಾನಿಗಳು, ರವಿ ಶಾಸ್ತ್ರಿ ರಾಜೀನಾಮೆ ನೀಡಬೇಕು ಅಥವಾ ಬಿಸಿಸಿಐ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೋಚ್ ಕೂಡ ಹೊಣೆ: ತಂಡದ ಸೋಲಿಗೆ ಕೇವಲ ಆಟಗಾರರು ಮಾತ್ರವಲ್ಲ, ಕೋಚ್ ರವಿ ಶಾಸ್ತ್ರಿ ಕೂಡ ಹೊಣೆಗಾರರಾಗುತ್ತಾರೆ. ಕಳಪೆ ಫಾರ್ಮ್ ನಲ್ಲಿದ್ದ ಪೃಥ್ವಿ ಶಾ ಅವರನ್ನು ಆಡಿಸಿದ್ದು ಎಷ್ಟರ ಮಟ್ಟಿಗೆ ಸರಿ? ರವಿ ಶಾಸ್ತ್ರಿ ಅವರನ್ನು ಕೂಡಲೇ ತಂಡದಿಂದ ಹೊರಹಾಕಬೇಕು. ಈ ವಿಚಾರವಾಗಿ ವಿರಾಟ್ ಕೊಹ್ಲಿ ಶಾಸ್ತ್ರಿಗೆ ಬೆಂಬಲವಾಗಿ ನಿಲ್ಲಬಾರದು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಮುಂದಿನ ಪಂದ್ಯ ಗೆಲ್ಲಲು ಹೀಗೆ ಮಾಡು! ಅಜಿಂಕ್ಯ ರಹಾನೆಗೆ ಜಾಫರ್ ರಹಸ್ಯ ಸಂದೇಶ!
2019ರಲ್ಲಿಭಾರತ ತಂಡದ ಮುಖ್ಯ ಕೋಚ್ ಆಗಿ ಮರು ನೇಮಕಗೊಂಡಿದ್ದ ರವಿ ಶಾಸ್ತ್ರಿ, 2021ರ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ವರೆಗೆ ಅಧಿಕಾರಾವಧಿ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.