ಸಾಹಾ ಸ್ಥಾನ ಕಳೆದುಕೊಳ್ಳಲು ಕಾರಣವೇನು?
Team Udayavani, Jul 21, 2018, 6:00 AM IST
ಮುಂಬಯಿ: ಭಾರತ ಟೆಸ್ಟ್ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾಗೆ ವಾಸ್ತವವಾಗಿ ಆಗಿದ್ದೇನು, ಅವರು ತಂಡದಿಂದ ನಿಜಕ್ಕೂ ಹೊರಬೀಳಲು ಗಾಯ ಕಾರಣವೇ ಅಥವಾ ಬೇರೆನಾದರೂ ಕಾರಣವೇ ಎಂಬ ಅನುಮಾನಗಳು ಇದೀಗ ಹುಟ್ಟಿಕೊಂಡಿವೆ.
ವೃದ್ಧಿಮಾನ್‌ಗೆ ಹೆಬ್ಬೆರಳು ಗಾಯವಾಗಿದೆ ಎಂದು ಬಿಸಿಸಿಐ ಆರಂಭದಲ್ಲಿ ಹೇಳಿತ್ತು. ಅದಕ್ಕೂ ಕೆಲ ತಿಂಗಳ ಮುನ್ನ ಎಡಗಾಲು ಮಂಡಿ ನೋವಿಗೀಡಾಗಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಬಿಸಿಸಿಐ ಸಾಹಾಗೆ ಭುಜದ ನೋವಾಗಿದೆ. ಶಸ್ತ್ರಚಿಕಿತ್ಸೆಗೊಳಗಾಗುವ ಸಾಧ್ಯತೆಯಿದೆ ಎಂದಿದೆ. ಆದರೆ ಅವರಿಗೆ ಭುಜದ ನೋವು ಆಗಿದ್ದು ಹೇಗೆ, ಯಾವಾಗ ಎಂದು ಆಂಗ್ಲ ಪತ್ರಿಕೆಯೊಂದು ತನ್ನ ವರದಿಯಲ್ಲಿ ಪ್ರಶ್ನಿಸಿದೆ.
ಜನವರಿಯಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ನಡೆಸಿತ್ತು. ಮೊದಲ ಟೆಸ್ಟ್‌ನಲ್ಲಿ 0 ಮತ್ತು 8ಕ್ಕೆ ಔಟಾದ ಅನಂತರ ಸಹಾಗೆ ಮಂಡಿನೋವಾಗಿದೆ ಎಂದು ಹೇಳಲಾಗಿತ್ತು. ಆಗ ಅವರು ಮುಂದಿನೆರಡು ಟೆಸ್ಟ್‌ಗಳಿಂದ ಹೊರಬಿದ್ದಿದ್ದರು. ಬಳಿಕ ಅವರು ಆಫ್ಘಾನಿಸ್ಥಾನದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದರು. ಆಗ ಸಾಹಾ ಐಪಿಎಲ್ ವೇಳೆ ಹೆಬ್ಬೆರಳಿನ ಗಾಯ ಮಾಡಿಕೊಂಡಿದ್ದಾರೆಂದು ಬಿಸಿಸಿಐ ಹೇಳಿತ್ತು. ಇದೀಗ ಇಂಗ್ಲೆಂಡ್ ಪ್ರವಾಸ ದಿಂದ ಹೊರಬಿದ್ದಿದ್ದಾರೆ. ಮುಂದಿನ ಆಸ್ಟ್ರೇಲಿಯ ಪ್ರವಾಸದಲ್ಲೂ ಆಡುವ ಸಾಧ್ಯತೆಯಿಲ್ಲ. ಇದಕ್ಕೆ ಬಿಸಿಸಿಐ ಭುಜದ ನೋವಿನ ಕಾರಣ ನೀಡಿದೆ. ಆದರೆ ಸಾಹಾಗೆ ಭುಜದ ನೋವು ಯಾವಾಗ ಆಗಿದ್ದು ಎಂಬ ಬಗ್ಗೆ ಉಲ್ಲೇಖವಿಲ್ಲ. ಈ ಬಗ್ಗೆ ಬಿಸಿಸಿಐ ವೈದ್ಯಾಧಿಕಾರಿಗಳು ಸರಿಯಾದ ಮಾಹಿತಿ ನೀಡಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.
ಕಳಪೆ ಪ್ರದರ್ಶನದ ಕಾರಣಕ್ಕೆ ಸಾಹಾ ಅವರನ್ನು ಕೈಬಿಡಲಾಗಿದೆಯೇ ಅಥವಾ ರಿಷಭ್ ಪಂತ್, ದಿನೇಶ್ ಕಾರ್ತಿಕ್ ಅವರನ್ನು ಒಳಕ್ಕೆಳೆದುಕೊಳ್ಳಲು ಸಾಹಾ ಹೊರಬಿದ್ದಿದ್ದಾರೆಯೇ ಎಂಬ ಅನುಮಾನವೂ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.