RCB–SRH ಎಲಿಮಿನೇಟರ್ ಪಂದ್ಯ: ಟಾಸ್ ಗೆದ್ದ ವಾರ್ನರ್ ಪಡೆ ಬೌಲಿಂಗ್ ಆಯ್ಕೆ: ತಂಡ ಇಂತಿದೆ !
Team Udayavani, Nov 6, 2020, 6:59 PM IST
ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ವಾರ್ನರ್ ಪಡೆ ಬೌಲಿಂಗ್ ಆಯ್ದುಕೊಂಡಿದೆ.
ಇಂದು ನಡೆಯುವ ಪಂದ್ಯ ಎರಡೂ ತಂಡಗಳಿಗೂ ನಿರ್ಣಾಯಕವಾಗಿರಲಿದ್ದು, ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಗೆದ್ದ ತಂಡ 2ನೇ ಕ್ವಾಲಿಫೈಯರ್ ಗೆ ಅರ್ಹತೆ ಪಡೆಯಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫೈನಲ್ಗೇರಲು ಸೆಣಸಾಡಲಿದೆ.
ಈಗಾಗಲೇ ಸತತ ನಾಲ್ಕು ಸೋಲು ಕಂಡರೂ ಫ್ಲೇ ಆಫ್ ಗೆ ನುಸುಳುವಲ್ಲಿ ಕೊಹ್ಲಿ ನೇತೃತ್ವದ ಬೆಂಗಳೂರು ತಂಡ ಯಶಸ್ವಿಯಾಗಿದ್ದು, ಫೈನಲ್ಗೇರಬೇಕಾದರೇ ಇಂದಿನ ಪಂದ್ಯ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಬೆಂಗಳೂರು ತಂಡ ಕೊಹ್ಲಿ, ಪಡಿಕ್ಕಲ್ ಹಾಗೂ ಎಬಿಡಿ ಮೇಲೆಯೇ ಹೆಚ್ಚು ಅವಲಂಬಿತವಾಗಿದೆ. ಸ್ಪಿನ್ನರ್ ಚಹಲ್ ಕೂಡ ಪಂದ್ಯವನ್ನೂ ಯಾವ ಸಮಯದಲ್ಲಾದರೂ, ಗೆಲುವಿನತ್ತ ತಿರುಗಿಸುವ ಸಾಮರ್ಥ್ಯ ಹೊಂದಿದ್ದಾರೆ.
ಮತ್ತೊಂದೆಡೆ ಲೀಗ್ ಹಂತದ ಅಂತಿಮ ಘಟ್ಟದಲ್ಲಿ ಸನ್ ರೈಸರ್ಸ್ ಗೆಲುವಿನ ನಗೆ ಬೀರಿದ್ದು ಅತ್ಮವಿಶ್ವಾಸದ ಅಲೆಯಲ್ಲಿ ತೇಲಾಡುತ್ತಿದೆ. ನಾಯಕ ವಾರ್ನರ್ ತಂಡಕ್ಕೆ ಆಧಾರವಾಗಿದ್ದು, ಬೌಲಿಂಗ್ ಪಡೆಯೂ ಬಲಿಷ್ಠವಾಗಿದೆ.
ಆಡುವ ಹನ್ನೊಂದರ ಬಳಗ
ಸನ್‌ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಶ್ರೀವತ್ಸ್ ಗೋಸ್ವಾಮಿ, ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಮ್ ಗರ್ಗ್, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಶಹಬಾಜ್ ನದೀಮ್, ಸಂದೀಪ್ ಶರ್ಮಾ, ಟಿ ನಟರಾಜನ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆ್ಯರನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಮೊಯೀನ್ ಅಲಿ, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ನವದೀಪ್ ಸೈನಿ, ಆಡಮ್ ಜಂಪಾ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಹಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.