ಪತ್ರಕರ್ತನಿಂದ ಬೆದರಿಕೆ: ಸಾಹಾಗೆ ಐಸಿಎ ಬೆಂಬಲ
Team Udayavani, Feb 23, 2022, 5:15 AM IST
ಹೊಸದಿಲ್ಲಿ: ವೃದ್ಧಿಮಾನ್ ಸಾಹಾ ಅವರಿಗೆ ಪತ್ರಕರ್ತರೊಬ್ಬರು ಬೆದರಿಕೆ ಹಾಕಿರುವುದನ್ನು ಭಾರತೀಯ ಕ್ರಿಕೆಟಿಗರ ಸಂಸ್ಥೆ (ಐಸಿಎ) ಖಂಡಿಸಿದೆ.
ಮಂಗಳವಾರ ಈ ಕುರಿತು ಪ್ರತಿಕ್ರಿಯೆ ನೀಡಿರುವ ಐಸಿಎ, ಈ ಪ್ರಕರಣದಲ್ಲಿ ಬಿಸಿಸಿಐ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
“ಕ್ರಿಕೆಟ್ ಮತ್ತು ಆಟಗಾರರ ಬೆಳವಣಿಗೆಯಲ್ಲಿ ಮಾಧ್ಯಮಗಳು ಬಹುಮುಖ್ಯ ಪಾತ್ರ ವಹಿಸಿವೆ. ಆದರೆ ಯಾರೂ ತಮ್ಮ ಪರಿಮಿತಿಯನ್ನು ಮೀರಬಾರದು. ಸಾಹಾ ಅವರ ವಿಚಾರದಲ್ಲಿ ಆಗಿರುವ ಘಟನೆ ಒಪ್ಪುವಂತಿಲ್ಲ. ಆದ್ದರಿಂದ ಪತ್ರಕರ್ತ ಸಂಘಟನೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಇಂಥ ಘಟನೆಗಳು ಪುನರಾವರ್ತನೆ ಯಾಗದಂತೆ ಎಚ್ಚರ ವಹಿಸಬೇಕು’ ಎಂದು ಐಸಿಎ ತಿಳಿಸಿದೆ.
ಇದನ್ನೂ ಓದಿ:ಬಾಕ್ಸಿಂಗ್: ಕ್ವಾರ್ಟರ್ ಫೈನಲ್‌ಗೆ ನೀತು, ಅನಾಮಿಕಾ
ಮಲ್ಹೋತ್ರಾ ಹೇಳಿಕೆ
“ತಪ್ಪು ಮಾಡಿದ ಪತ್ರಕರ್ತರ ಮಾನ್ಯತೆಯನ್ನು ರದ್ದುಗೊಳಿಸುವ ಮತ್ತು ತನ್ನ ಕಾರ್ಯಕ್ರಮಗಳಿಗೆ ಪ್ರವೇಶವನ್ನು ನಿರಾಕರಿಸುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡರೆ ಇದಕ್ಕೆ ಸಂಸ್ಥೆಯ ಸಂಪೂರ್ಣ ಬೆಂಬಲ ನಿಲ್ಲಲಿದೆ ಮತ್ತು ಈ ಪ್ರಕರಣದಲ್ಲಿ ವೃದ್ಧಿಮಾನ್ ಸಾಹಾ ಪರವಾಗಿ ನಿಲ್ಲಲಿದೆ’ ಎಂದು ಐಸಿಎ ಅಧ್ಯಕ್ಷ ಅಶೋಕ್ ಮಲ್ಹೋತ್ರಾ ಹೇಳಿದರು.
ಸಂದರ್ಶನ ನೀಡಲು ನಿರಾಕರಿಸಿದ್ದಕ್ಕೆ ಪತ್ರಕರ್ತರೊಬ್ಬರು ಬೆದರಿಕೆ ಒಡ್ಡಿದ್ದಾಗಿ ಸಾಹಾ ಟ್ವಿಟರ್‌ನಲ್ಲಿ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.