World Cup ಗೆದ್ದ ಆಸೀಸ್:ಗೆಲುವಿನ ಶಿಖರದಿಂದ ಕುಸಿದ ಟೀಮ್ ಇಂಡಿಯಾಕ್ಕಿಲ್ಲ ಯೋಗ
ಭೋರ್ಗರೆಯುತ್ತಿದ್ದ ಅಹ್ಮದಾಬಾದ್ ಕ್ರೀಡಾಂಗಣವನ್ನು ನಿಶ್ಯಬ್ದಗೊಳಿಸಿದ ಕಮಿನ್ಸ್ ಬಳಗ
Team Udayavani, Nov 19, 2023, 9:20 PM IST
ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಅಮೋಘ ನಿರ್ವಹಣೆ ನೀಡಿದ ಆಸ್ಟ್ರೇಲಿಯ ತಂಡ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಸಾಮರ್ಥ್ಯಕ್ಕೆ ಸವಾಲೊಡ್ಡಿ ನಿಂತು ಆರನೇ ಬಾರಿ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಇದು ಭಾರತ ಎರಡನೇ ಬಾರಿ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯದ ಎದುರು ಸೋಲಿಗೆ ಶರಣಾಗಿರುವುದು.
ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅಮೋಘ ನಿರ್ವಹಣೆ ತೋರಿದ ಆಸೀಸ್ ಟಾಸ್ ಗೆದ್ದು ಭಾರತವನ್ನು 240 ರನ್ ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿತ್ತು. ಭಾರತದ ಬೌಲರ್ ಗಳ ಮೇಲೆ ಇಟ್ಟಿದ್ದ ಭರವಸೆಯೂ ಹುಸಿಯಾಯಿತು. ಗುರಿ ಬೆನ್ನಟ್ಟಿದ್ದ ಆಸೀಸ್ ತನ್ನ ಸಾಮರ್ಥ್ಯ ಮೆರೆದು 43 ಓವರ್ ಗಳಲ್ಲಿ 4ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿತು.
ಆಸ್ಟ್ರೇಲಿಯದ ಆರಂಭಿಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಅತ್ಯಮೋಘ ಶತಕ ಸಿಡಿಸಿದರು. ವಿಶ್ವಕಪ್ ಫೈನಲ್ ನಲ್ಲಿ ಶತಕ ಸಿಡಿಸಿದ ಏಳನೇ ಬ್ಯಾಟರ್ ಎನಿಸಿಕೊಂಡರು. ಅವರು 95 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಸ್ಮರಣೀಯ ಆಟವಾಡಿದ ಹೆಡ್, ಕಪ್ ಗೆಲ್ಲಲು ಕೇವಲ ಎರಡೇ ರನ್ ಬಾಕಿ ಇದ್ದಾಗ 137 ರನ್ ಗಳಿಸಿದ್ದ ವೇಳೆ ಸಿರಾಜ್ ಎಸೆದ ಚೆಂಡನ್ನು ಗಿಲ್ ಕೈಗಿತ್ತು ನಿರ್ಗಮಿಸಿದರು. 120 ಎಸೆತಗಳಲ್ಲಿ ಅದ್ಭುತ ಇನ್ನಿಂಗ್ಸ್ ಕಟ್ಟಿದ ಹೆಡ್ 15 ಬೌಂಡರಿ ಮತ್ತು 4 ಭರ್ಜರಿ ಸಿಕ್ಸರ್ ಸಿಡಿಸಿದರು. ಲಬುಶೇನ್ ಔಟಾಗದೆ 58 ರನ್ ಗಳಿಸಿದರು.
ಭೋರ್ಗರೆಯುತ್ತಿರುವ ಅಹ್ಮದಾಬಾದ್ ಕ್ರೀಡಾಂಗಣವನ್ನು ನಿಶ್ಯಬ್ದಗೊಳಿಸುವುದೇ ನಮ್ಮ ಗುರಿ ಎಂದು ಆಸ್ಟ್ರೇಲಿಯ ತಂಡದ ನಾಯಕ ಪ್ಯಾಟ್ ಕಮಿನ್ಸ್ ಪಂದ್ಯಕ್ಕೂ ಮುನ್ನ ಹೇಳಿಕೆ ನೀಡಿದ್ದರು. ಅದನ್ನು ಆಸೀಸ್ ತಂಡ ನಿಜವಾಗಿಸಿದೆ. ಸತತ 10 ಗೆಲುವಿನೊಂದಿಗೆ ಕಪ್ ಎತ್ತುವ ವಿಶ್ವಾಸ ಹೊಂದಿದ್ದ ರೋಹಿತ್ ಬಳಗ ಗೆಲುವಿನ ಶಿಖರದಿಂದ ಜಾರಿತು. ಕ್ರೀಡಾಂಗಣದಲ್ಲಿ ಸೇರಿದ್ದ ಲಕ್ಷಾಂತರ ಭಾರತದ ಅಭಿಮಾನಿಗಳು ಮೌನಕ್ಕೆ ಶರಣಾಗಿ ಹೋದರು. ಹಲವರ ಕಣ್ಣಗಳಿಂದ ಧಾರಾಕಾರವಾಗಿ ನೀರು ಸುರಿಯಿತು.
ಗುರಿ ಬೆನ್ನಟ್ಟಿದ ಆಸೀಸ್ ಆರಂಭದಿಂದಲೇ ಅಬ್ಬರಿಸುತ್ತಾ ಸಾಗಿತು. ಆದರೆ 7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಶಮಿ ಎಸೆದ ಚೆಂಡನ್ನು ಕೊಹ್ಲಿ ಕೈಗಿತ್ತು ನಿರ್ಗಮಿಸಿದರು. ಇದು ಆರಂಭಿಕ ಆಘಾತವಾಯಿತು. 15 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಬುಮ್ರಾ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ನಿರ್ಗಮಿಸಿದರು.ಆ ಬಳಿಕ ಸ್ಮಿತ್ ಎಲ್ಬಿಡಬ್ಲ್ಯೂ ಮೂಲಕ ಔಟಾಗಿದ್ದು ವಿಶ್ವಕಪ್ ಫೈನಲ್ ನಂತಹ ಮಹತ್ವದ ಪಂದ್ಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.ಆಸೀಸ್ ಅಮೋಘ ಗೆಲುವು ಸಾಧಿಸಿದ ಕಾರಣ ಆ ವಿಚಾರ ಇಲ್ಲೇ ಮರೆತುಹೋಗಲಿದೆ.
ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಭಾರತದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ವಿಶ್ವಕಪ್ ಹೀರೋ ಎನಿಸಿಕೊಂಡರು. ನಾಲ್ಕನೇ ವಿಕೆಟ್ ಗೆ ಹೆಡ್ ಅವರಿಗೆ ಸಾಥ್ ನೀಡಿ ಅದ್ಭುತ ಜತೆಯಾಟವಾಡಿದ ಮಾರ್ನಸ್ ಲಬುಶೇನ್ ಅವರು ಗೆಲುವನ್ನು ಖಚಿತ ಪಡಿಸಿದರು.
ಆರಂಭದಲ್ಲಿ ನಾಯಕ ರೋಹಿತ್ ಶರ್ಮ ಅವರು ಅಬ್ಬರಿಸುತ್ತಿದ್ದ ವೇಳೆ ಶುಭಮಂ ಗಿಲ್ ಅವರು ತಂಡ 4.2 ಓವರ್ ಗಳಲ್ಲಿ 30 ರನ್ ಗಳಿಸಿದ್ದ ವೇಳೆ ಔಟಾಗಿ ಆಘಾತ ಅನುಭವಿಸಿತು. 4 ರನ್ ಗೆ ಗಿಲ್ ನಿರ್ಗಮಿಸಿದರು. ಆ ಬಳಿಕ ಶರ್ಮ 47 ರನ್ ಗಳಿಸಿ ವಿಶ್ವಾಸ ಮೂಡಿಸಿದ್ದ ವೇಳೆ ಆಘಾತಕಾರಿಯಾಗಿ ಔಟಾದರು. 4 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿದ್ದರು. ಮ್ಯಾಕ್ಸ್‌ವೆಲ್ ಎಸೆದ ಚೆಂಡನ್ನು ರೋಹಿತ್ ದೊಡ್ಡ ಹೊಡೆತಕ್ಕೆ ಮುಂದಾದರು ಈ ವೇಳೆ ಹೆಡ್ ಅದ್ಬುತ ಕ್ಯಾಚ್ ಹಿಡಿದರು.
ಅದ್ಬುತ ಫಾರ್ಮ್ ನಲ್ಲಿದ್ದ ಶ್ರೇಯಸ್ ಅಯ್ಯರ್ 4 ರನ್ ಗೆ ಔಟಾಗಿ ನಿರಾಶರಾದರು. ಆಬಳಿಕ ತಾಳ್ಮೆಯ ಆಟವಾಡಿದ ಕೊಹ್ಲಿ 63 ಎಸೆತಗಳಲ್ಲಿ 54 ರನ್ ಗಳಿಸಿದ್ದ ವೇಳೆ ದುರದೃಷ್ಟವೆಂಬಂತೆ ಔಟಾದರು. ಅವರು 4 ಬೌಂಡರಿಗಳನ್ನು ಬಾರಿಸಿದ್ದರು. ನಾಯಕ ಕಮ್ಮಿನ್ಸ್ ಎಸೆದ ಚೆಂಡು ಕೊಹ್ಲಿ ಅವರ ಬ್ಯಾಟ್ ಗೆ ತಗುಲಿ ವಿಕೆಟ್ ಗೆ ಅಪ್ಪಳಿಸಿತು.
ತಾಳ್ಮೆಯ ಆಟವಾಡಿದ ಕೆಎಲ್ ರಾಹುಲ್ 107 ಎಸೆತಗಳಲ್ಲಿ 66 ರನ್ ಗಳಿಸಿ ಭರವಸೆ ಮೂಡಿಸಿದರು. ಆದರೆ ಸ್ಟಾರ್ಕ್ ಅವರು ಎಸೆದ ಚೆಂಡು ಕೀಪರ್ ಜೋಶ್ ಇಂಗ್ಲಿಸ್ ಅವರ ಕೈ ಸೇರಿ ನಿರ್ಗಮಿಸಿದರು. ರವೀಂದ್ರ ಜಡೇಜಾ ಕೂಡ ದೊಡ್ಡ ಮೊತ್ತ ದಾಖಲಿಸಲು ಸಾಧ್ಯವಾಗಲಿಲ್ಲ.22 ಎಸೆತಗಳಲ್ಲಿ 9 ರನ್ ಗಳಿಸಿ ಔಟಾದರು. ಶಮಿ 6 ರನ್ ಗಳಿಸಿ ಔಟಾದರು.
ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. ಬುಮ್ರಾ 1 ರನ್ ಗೆ ಔಟಾದರು. ಕೊನೆಯ ಎಸೆತದಲ್ಲಿ ಕುಲದೀಪ್ ಯಾದವ್ 10 ರನ್ ಗಳಿಸಿದ್ದ ವೇಳೆ ರನ್ ಔಟಾದರು. ಮತ್ತು ಸಿರಾಜ್ 8 ರನ್ ಗಳಿಸಿ ಔಟಾಗದೆ ಉಳಿದರು. ಆಸೀಸ್ ಬಿಗಿ ದಾಳಿಯ ನಡುವೆಯೂ 50 ಓವರ್ ಗಳಲ್ಲಿ 240 ರನ್ ಗಳಿಗೆ ಆಲೌಟಾಯಿತು.ಆಸೀಸ್ ಪರ ಬಿಗಿ ದಾಳಿ ಸಂಘಟಿಸಿದ ಮಿಚೆಲ್ ಸ್ಟಾರ್ಕ್3, ಜೋಶ್ ಹ್ಯಾಜಲ್ವುಡ್2 , ಗ್ಲೆನ್ ಮ್ಯಾಕ್ಸ್ವೆಲ್ 1, ಪ್ಯಾಟ್ ಕಮ್ಮಿನ್ಸ್2 , ಆಡಮ್ ಝಂಪಾ 1 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.