West Indies ಆಟಗಾರನಿಗೆ ಆರು ವರ್ಷಗಳ ಕಾಲ ನಿಷೇಧ ಶಿಕ್ಷೆ ನೀಡಿದ ಐಸಿಸಿ

Team Udayavani, Nov 23, 2023, 12:51 PM IST

ICC has banned former West Indies batter Marlon Samuels from all forms of cricket for six years

ದುಬೈ: ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಭ್ರಷ್ಟಾಚಾರ ನಿಗ್ರಹ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವೆಸ್ಟ್ ಇಂಡೀಸ್‌ನ ಮಾಜಿ ಬ್ಯಾಟರ್ ಮರ್ಲಾನ್ ಸ್ಯಾಮುಯೆಲ್ಸ್ ಅವರನ್ನು ಆರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿಷೇಧಿಸಿದೆ.

ಸ್ಯಾಮ್ಯುಯೆಲ್ಸ್ ವಿರುದ್ಧ ಸೆಪ್ಟೆಂಬರ್ 2021 ರಲ್ಲಿ ಒಟ್ಟು ನಾಲ್ಕು ಆರೋಪಗಳನ್ನು ಹೊರಿಸಲಾಗಿತ್ತು. ನಂತರ ಈ ವರ್ಷದ ಆಗಸ್ಟ್‌ ನಲ್ಲಿ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ.

ಆರು ವರ್ಷಗಳ ನಿಷೇಧವನ್ನು ಗುರುವಾರ ಐಸಿಸಿ ದೃಢಪಡಿಸಿದೆ. ನವೆಂಬರ್ 11, 2023 ರಂದು ಇದು ಪ್ರಾರಂಭವಾಗುತ್ತದೆ. ಐಸಿಸಿ ಎಚ್ಆರ್ ಮತ್ತು ಸಮಗ್ರತೆಯ ಘಟಕದ ಮುಖ್ಯಸ್ಥರಾಗಿರುವ ಅಲೆಕ್ಸ್ ಮಾರ್ಷಲ್ ಅವರು ಗುರುವಾರ ನಿಷೇಧವನ್ನು ಘೋಷಿಸಿದರು. “ಸ್ಯಾಮ್ಯುಯೆಲ್ಸ್ ಸುಮಾರು ಎರಡು ದಶಕಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದರು, ಆ ಸಮಯದಲ್ಲಿ ಅವರು ಹಲವಾರು ಭ್ರಷ್ಟಾಚಾರ-ವಿರೋಧಿ ಸೆಷನ್‌ ಗಳಲ್ಲಿ ಭಾಗವಹಿಸಿದ್ದರು, ಮತ್ತು ಭ್ರಷ್ಟಾಚಾರ-ವಿರೋಧಿ ಕೋಡ್‌ ಗಳ ಅಡಿಯಲ್ಲಿ ಅವರ ಜವಾಬ್ದಾರಿಗಳು ಏನೆಂದು ನಿಖರವಾಗಿ ತಿಳಿದಿದ್ದರು” ಎಂದು ಮಾರ್ಷಲ್ ಹೇಳಿದರು.

“ಅವರು ಈಗ ನಿವೃತ್ತರಾಗಿದ್ದರೂ, ಅಪರಾಧಗಳು ನಡೆದಾಗ ಸ್ಯಾಮ್ಯುಯೆಲ್ಸ್ ಆಡುತ್ತಿದ್ದರು. ಆರು ವರ್ಷಗಳ ನಿಷೇಧ ನಿರ್ಧಾರವು ನಿಯಮಗಳನ್ನು ಮುರಿಯಲು ಉದ್ದೇಶಿಸಿರುವ ಯಾರಿಗಾದರೂ ಬಲವಾದ ಸಂದೇಶ ನೀಡುತ್ತದೆ” ಎಂದು ಮಾರ್ಷಲ್ ಹೇಳಿದರು.

ಸ್ಯಾಮ್ಯುಯೆಲ್ಸ್ 18 ವರ್ಷಗಳ ಅವಧಿಯಲ್ಲಿ ವೆಸ್ಟ್ ಇಂಡೀಸ್‌ ಪರವಾಗಿ 300 ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದರು, ಒಟ್ಟು 17 ಶತಕಗಳನ್ನು ಗಳಿಸಿದರು. ಏಕದಿನ ಕ್ರಿಕೆಟ್ ನಲ್ಲಿ ಕೆರಿಬಿಯನ್ ತಂಡದ ನಾಯಕತ್ವವನ್ನು ಸಹ ವಹಿಸಿದ್ದರು. ಐಸಿಸಿ ಪುರುಷರ ಟಿ20 ವಿಶ್ವಕಪ್‌ನ 2012 ಮತ್ತು 2016 ಆವೃತ್ತಿಗಳ ಫೈನಲ್‌ ನಲ್ಲಿ ಅಗ್ರ ಸ್ಕೋರ್ ಮಾಡಿದ್ದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.