ICC; ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಸ್ವೀಕರಿಸಿದ ಕೊಹ್ಲಿ
Team Udayavani, Jun 3, 2024, 12:15 AM IST
ನ್ಯೂಯಾರ್ಕ್: ಭಾರತದ ತಾರಾ ಕ್ರಿಕೆಟಿಗ ವಿರಾಟ್ ಕೊಹ್ಲಿ 2023ರ ಐಸಿಸಿ “ವರ್ಷದ ಏಕದಿನ ಕ್ರಿಕೆಟಿಗ’ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಕೊಹ್ಲಿ 2023ರ ಏಕದಿನ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 24 ಇನ್ನಿಂಗ್ಸ್‌ನಲ್ಲಿ 72.47ರ ಸರಾಸರಿಯಲ್ಲಿ 1,377 ರನ್ ಬಾರಿಸಿದ್ದರು. ಇದರಲ್ಲಿ 6 ಶತಕಗಳು ಮತ್ತು 8 ಅರ್ಧ ಶತಕಗಳು ಸೇರಿವೆ.
2023ರಲ್ಲಿ ಭಾರತದ ಏಷ್ಯಾ ಕಪ್ ಗೆಲುವಿನಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ಸೂಪರ್-4 ಹಂತದ ಪಾಕಿಸ್ಥಾನ ವಿರುದ್ಧದ ಹೈ ವೋಲ್ಟೆàಜ್ ಪಂದ್ಯದಲ್ಲಿ ಅವರು 94 ಎಸೆತಗಳಲ್ಲಿ ಅಜೇಯ 122 ರನ್ ಬಾರಿಸಿ ತಂಡದ ಗೆಲುವಿಗೆ ಕಾರಣರಾಗಿದ್ದರು. ಏಕದಿನ ವಿಶ್ವಕಪ್‌ನ 11 ಪಂದ್ಯಗಳಲ್ಲಿ 765 ರನ್ ಬಾರಿಸಿ ಗಮನ ಸೆಳೆದಿದ್ದರು. ಇದೇ ವೇಳೆ ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ ಶತಕ ಬಾರಿಸಿದ್ದ ಕೊಹ್ಲಿ, ಏಕದಿನದಲ್ಲಿ 50 ಶತಕಗಳ ಸಾಧನೆಗೈದಿದ್ದರು. ಈ ಮೂಲಕ ಸಚಿನ್ ಹೆಸರಿನಲ್ಲಿದ್ದ 49 ಶತಕಗಳ ದಾಖಲೆಯನ್ನು ಮುರಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.