ICC Men’s ODI ; ಕೊಹ್ಲಿಗೆ ನಾಲ್ಕನೇ ಬಾರಿ ವರ್ಷದ ಕ್ರಿಕೆಟಿಗ ಪ್ರಶಸ್ತಿ
Team Udayavani, Jan 25, 2024, 9:51 PM IST
ದುಬೈ: ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 2023 ರ ವರ್ಷದ ಪುರುಷರ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ವರ್ಷ ತವರಿನಲ್ಲಿ ನಡೆದ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಈ ಸಾಧನೆಯನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದು ಕೊಹ್ಲಿ ಅವರು ನಾಲ್ಕನೇ ಬಾರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಕಳೆದ ವರ್ಷ ಏಕದಿನ ಕ್ರಿಕೆಟ್ ನಲ್ಲಿ ಶುಭಮನ್ ಗಿಲ್ ನಂತರ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಕೊಹ್ಲಿ ಅವರು ಆರು ಶತಕಗಳು ಮತ್ತು ಎಂಟು ಅರ್ಧ ಶತಕಗಳನ್ನು ಒಳಗೊಂಡಂತೆ 1,377 ರನ್‌ಗಳೊಂದಿಗೆ ಅತ್ಯಮೋಘ ವರ್ಷವನ್ನು ಪೂರ್ಣಗೊಳಿಸಿದ್ದಾರೆ.
ಇದು ಕೊಹ್ಲಿ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿ ಗೆದ್ದ ಏಳನೇ ವೈಯಕ್ತಿಕ ಐಸಿಸಿ ಪ್ರಶಸ್ತಿಯಾಗಿದೆ. 2012, 2017 ಮತ್ತು 2018 ರಲ್ಲಿ ಏಕದಿನ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.